ಕೈವಾರ: ಅನ್ನದಾನ ಭವನ ಉದ್ಘಾಟನೆ
Team Udayavani, Jun 15, 2020, 7:06 AM IST
ಚಿಂತಾಮಣಿ: ಶ್ರೀ ಕ್ಷೇತ್ರ ಕೈವಾರದ ಯೋಗಿನಾರೇಯಣ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅನ್ನದಾನ ದಾಸೋಹ ಭವನದ ಉದ್ಘಾಟನೆಯನ್ನು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಬರುವ ಭಕ್ತರಿಗೆ ದಾಸೋಹ ಭವನದ ಅಗತ್ಯತೆ ಇತ್ತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಭಾಗವಹಿಸುತ್ತಾರೆ.
ತಾತಯ್ಯನವರ ಪ್ರೇರಣೆಯಂತೆ ಟ್ರಸ್ಟ್ ಸಮಿತಿಯು ನಿರ್ಣಯ ತೆಗೆದುಕೊಂಡು ಅನ್ನದಾನ ಭವನ ವನ್ನು ಭಕ್ತರಿಗೆ ಸಮರ್ಪಣೆ ಮಾಡಲಾಗುತ್ತಿದೆ. ನೂತನ ತಂತ್ರಜ್ಞಾನವಾದ ಪ್ರಿಕ್ಯಾಸ್ಟ್ ವಿಧಾನದಲ್ಲಿ ಈ ಕಟ್ಟಡ ನಿರ್ಮಿಸಲಾಗಿ ದೆ. ಸುಮಾರು 2000 ಭಕ್ತರು ಒಟ್ಟಿಗೆ ಕುಳಿತು ಪ್ರಸಾದ ಸ್ವೀಕರಿಸಬಹುದು. ಮುಂದಿನ ದಿನಗಳಲ್ಲಿ ಭಕ್ತರಿ ಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದರು.
ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಾತಃಕಾಲ ಘಂಟನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಭವನದ ಉದ್ಘಾಟನಾ ಕಾರ್ಯಕ್ರಮವು ಆರಂಭವಾ ಯಿತು. ನಂತರ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಅನ್ನದಾನ ಭವನಕ್ಕೆ ಕರೆತರಲಾಯಿತು. ನಂತರ ಗಂಗಪೂಜೆ, ಗಣಪತಿ ಪೂಜೆ, ಕಲಶಾರಾಧನೆ, ವಾಸ್ತುಹೋಮ, ಬಲಿಹರಣ, ಗಣಹೋಮ ಇನ್ನಿತರ ಪೂಜೆ ಸಮರ್ಪಿಸಲಾಯಿತು.
ತಾತಯ್ಯನವರ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ ಸಮರ್ಪಿಸಿ, ಷೋಡಶೋಪಚಾರ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಬೆಳಗಲಾಯಿತು. ಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್ ಅವರಿಂದ ಸಾಮೂಹಿಕ ನಾಮಸಂಕೀರ್ತನೆ ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಎಂ. ಆರ್.ಜಯರಾಮ್ ದಂಪತಿ, ಟ್ರಸ್ಟ್‌ನ ಉಪಾಧ್ಯಕ್ಷ ಜೆ. ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ.ಸತ್ಯನಾರಾಯಣ್, ಸದಸ್ಯರಾದ ವೇಣುಗೋಪಾಲ್, ಕೆ.ನರಸಿಂಹಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.