Kannada rajyotsava: ಕನ್ನಡ ಹಬ್ಬದಲ್ಲಿ ಕಾಣದ ಸಂಭ್ರಮ, ಕಳೆಗುಂದಿದ ರಾಜ್ಯೋತ್ಸವ!

Team Udayavani, Nov 2, 2023, 10:46 AM IST

Kannada rajyotsava: ಕನ್ನಡ ಹಬ್ಬದಲ್ಲಿ ಕಾಣದ ಸಂಭ್ರಮ, ಕಳೆಗುಂದಿದ ರಾಜ್ಯೋತ್ಸವ!

ಚಿಕ್ಕಬಳ್ಳಾಪುರ: ಮೈಸೂರು ರಾಜ್ಯ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಸಂದ ಸಂಭ್ರಮಕ್ಕೆ ಸಾಕ್ಷಿಯಾದ ಈ ಬಾರಿ ಕನ್ನಡ ರಾಜ್ಯೋತ್ಸವ ಜಿಲ್ಲೆಯ ಪಾಲಿಗೆ ಮಾತ್ರ ಸಂಭ್ರಮ ಕಾಣದೇ ಕನ್ನಡದ ನಾಡು ಹಬ್ಬ ಕಳೆಗುಂದಿತು.

ಹೌದು, ಜಿಲ್ಲಾ ಕೇಂದ್ರದಲ್ಲಿ ಬುಧವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯೋತ್ಸವ ಕಾರ್ಯಕ್ರಮ ಅಂತೂ ಕನ್ನಡ ನಾಡು, ನುಡಿ, ನೆಲ, ಜಲ. ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಇಂದಿನ ಪೀಳಿಗೆಯಲ್ಲಿ ಸಾರುವಲ್ಲಿ ವಿಫ‌ಲ ಆಯಿತು.

ಎರಡೇ ಸ್ತಬ್ಧ ಚಿತ್ರಗಳು: ಜಿಲ್ಲಾ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸಿದ್ದು ಕೇವಲ ಎರಡೇ ಸ್ತಬ್ಧಚಿತ್ರಗಳು ಮಾತ್ರ. ಒಂದು ಕೆಎಸ್‌ಆರ್‌ಟಿಸಿಯಿಂದ ಚಂದ್ರಯಾನ-3 ಕಲಾಕೃತಿ ಮಾತ್ರ ಗಮನ ಸೆಳೆದಿದ್ದು ಬಿಟ್ಟರೆ ಆರೋಗ್ಯ ಇಲಾಖೆ ಸ್ತಬ್ಧ ಚಿತ್ರ ಕಾಟಾಚಾರ ಎಂಬಂತೆ ಸಿದ್ಧಪಡಿಸಿಕೊಂಡು ಬರಲಾಗಿತ್ತು. ಪೊಲೀಸರ ಪಥ ಸಂಚಲಕ ಆಕರ್ಷಕವಾಗಿದ್ದು ಬಿಟ್ಟರೆ ಕನ್ನಡ ನಾಡು, ನುಡಿ ವಿಚಾರದಲ್ಲಿ ಕನ್ನಡದ ಕಂಪು ಪಸರಿಸಬೇಕಿದ್ದರಾಜ್ಯೋತ್ಸವ ಕಾರ್ಯಕ್ರಮ ಜಿಲ್ಲಾ ಕೇಂದ್ರದಲ್ಲಿಹೆಚ್ಚು ಕಳೆಗುಂದಿದ್ದು ಕನ್ನಡಪ್ರೇಮಿಗಳಲ್ಲಿ ತೀವ್ರ ಬೇಸರ ಮೂಡಿಸಿತು.

ಜಿಲ್ಲಾಡಳಿತದ ವೈಫ‌ಲ್ಯ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸುವಲ್ಲಿ ಜಿಲ್ಲಾಡಳಿತ ವೈಫ‌ಲ್ಯತೆ ಎದ್ದು ಕಾಣುತ್ತಿತ್ತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಸಂದಿರುವ ಸಂದರ್ಭದಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾದ ಕಾರ್ಯಕ್ರಮಗಳಿಗೆ ಸಾಕ್ಷಿ ಆಗಬೇಕಿದ್ದ ರಾಜ್ಯೋತ್ಸವ ಜಿಲ್ಲಾ ಕೇಂದ್ರದಲ್ಲಿ ಅಂತೂ ತೀವ್ರ ನಿರಾಸೆ ಮೂಡಿಸಿತು. ಅಂತಃಕರಣದ ಬದಲಾಗಿ ಶಿಷ್ಟಾಚಾರ ಎಂಬಂತೆ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡಿ ಜಿಲ್ಲಾಡಳಿತ ಕೈ ತೊಳೆದುಕೊಂಡಿತು.

ಕುರ್ಚಿಗಳ ಖಾಲಿ ಖಾಲಿ: ಜಿಲ್ಲಾ ಉಸ್ತುವಾರಿ ಸಚಿವರ ಭಾಷಣದ ವೇಳೆಯೆ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಬೆರಣಿಕೆಯಷ್ಟು ಮಂದಿ ಕೂತಿದ್ದು, ಪ್ರೇಕ್ಷಕರಿಗೆ ಹಾಕಲಾಗಿದ್ದ ಕುರ್ಚಿಗಳು ಖಾಲಿ ಖಾಲಿ ಕಂಡು ಬಂದವು. ಜಿಲ್ಲಾ ಹಾಗೂ ಚಿಕ್ಕಬಳ್ಳಾಪುರ ತಾಲೂಕು ಮಟ್ಟದ ಅಧಿಕಾರಿಗಳು ಮಾತ್ರ ಕಂಡು ಬಂದಿದ್ದು ಸಾರ್ವಜನಿಕರ ಪಾಲ್ಗೊಳ್ಳುವಿಕೆ ತೀರಾ ಕಡಿಮೆ ಇತ್ತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರ ಮಗಳ ವೀಕ್ಷಣೆಗೂ ಪ್ರೇಕ್ಷಕರ ಕೊರತೆ ಎದ್ದು ಕಾಣುವ ಮೂಲಕ ಒಟ್ಟಾರೆ ಜಿಲ್ಲಾ ಕೇಂದ್ರದಲ್ಲಿ ರಾಜ್ಯೋತ್ಸವ ನಿರಾಸೆ ಮೂಡಿಸಿತು.

ಪ್ರದೀಪ್‌ ಈಶ್ವರ್‌ರಿಂದ ಹಳೇ ಡೈಲಾಗ್‌!:  ಇನ್ನೂ ಶಾಸಕ ಪ್ರದೀಪ್‌ ಈಶ್ವರ್‌ ಕನ್ನಡ ನಾಡು, ನುಡಿ ಬಗ್ಗೆ ಹೆಚ್ಚು ಮಾತನಾಡದೇ ಎಂದಿನಂತೆ ತಮ್ಮ ಹಳೇ ಡೈಲಾಗ್‌ಗಳನ್ನೇ ಹೇಳಿ ತಮ್ಮ ಸರದಿಯ ಭಾಷಣ ಮುಗಿಸಿದರು.ಅಲ್ಲದೇ ಕಾರ್ಯಕ್ರಮದ ಪೂರ್ಣವಾಗುವವರೆಗೂ ನಿಲ್ಲದೇ ಅರ್ಧದಲ್ಲೇ ಸಭೆಯಿಂದ ಹೋದರು. ಸಂಸದ ಬಿ.ಎನ್‌. ಬಚ್ಚೇಗೌಡರು ಕರ್ನಾಟಕ ಏಕೀಕರಣದ ಬಗ್ಗೆ ಮಾತನಾಡಿದ್ದು ಬಿಟ್ಟರೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಹೆಚ್ಚು ಕನ್ನಡ ನಾಡು, ನುಡಿ ಬಗ್ಗೆ ಮಾತನಾಡಲಿಲ್ಲ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.