ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 28, 2020, 4:27 PM IST
ಚಿಕ್ಕಬಳ್ಳಾಪುರ: ಭೂ ಸುಧಾರಣೆ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸರ್ಕಾರಗಳು ಜಾರಿಗೊಳಿಸುತ್ತಿವೆ ಎಂದು ಆರೋಪಿಸಿ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲಾ ಕೇಂದ್ರದಲ್ಲಿ ಬಹುತೇಕ ವ್ಯಾಪಾರ ವಹಿವಾಟು ನಡೆಯುತ್ತಿದೆ ಬೆಳಿಗ್ಗೆ 10 ಗಂಟೆಯ ತನಕ ಬಂದ್ ಪ್ರಭಾವ ಕಂಡು ಬಂದಿತ್ತು. ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮತ್ತು ಕನ್ನಡಪರ ಸಂಘಟನೆಗಳು ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬೆಳಗ್ಗೆಯಿಂದಲೇ ಜನಜೀವನ ಎಂದಿನಂತೆ ಕಂಡು ಬಂದಿತು ಕೆಲ ವರ್ತಕರು ಸ್ವ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ಚಿಕ್ಕಬಳ್ಳಾಪುರ ನಗರದ ಇನ್ನುಳಿದ ಪ್ರದೇಶದಲ್ಲಿ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿತು.
ಇದನ್ನೂ ಓದಿ:ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ
ಸಾರಿಗೆ ಬಸ್ ಸಂಚಾರ ಎಂದಿನಂತೆ ಕಾರ್ಯ ನಿರ್ವಹಿಸಿದರೂ ಕೂಡ ಜನರ ಸಂಚಾರ ಅಷ್ಟಾಗಿ ಕಂಡು ಬರಲಿಲ್ಲ ಬೆಂಗಳೂರು ಮತ್ತು ಅಂತರ್ ರಾಜ್ಯ ಬಸ್ ಸಂಚಾರ ಆರಂಭಿಸಿದರು. ಪ್ರಯಾಣಿಕರು ಇಲ್ಲದೇ ಬಸ್ ನಿಲ್ದಾಣ ಬಿಕೋ ಎನ್ನಿತ್ತಿತ್ತು.
ಚಿಕ್ಕಬಳ್ಳಾಪುರ_ಶಿಡ್ಲಘಟ್ಟ ವೃತ್ತದಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ರಾಜ್ಯ ಹೆದ್ದಾರಿ ಮತ್ತು ತಲದುಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲು ಯತ್ನಿಸಿದ ರೈತ ಮುಖಂಡರನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಮುಂಜಾಗ್ರತೆಯಿಂದ ಬಂಧಿಸಿದ್ದಾರೆ.
ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಬಂದು ಬಂಧಿತ ರೈತರನ್ನು ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು,ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್‌ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.