ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ


Team Udayavani, Mar 17, 2021, 1:23 PM IST

ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ

ಚಿಕ್ಕಬಳ್ಳಾಪುರ: ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಎಚ್ಚರವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ಬೇಸಿಗೆ ಆರಂಭವಾಗುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆಯ ದೂರುಗಳು ಕೇಳಿ ಬರುತ್ತಿದ್ದು, ಅಧಿಕಾರಿಗಳು ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮತ್ತು ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್‌ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದರೆ ಅದರ ಮಾಹಿತಿ ಇಲಾಖೆ ಹಿರಿಯ ಅಧಿಕಾರಿ ಗಳಿಗೆ ಸಲ್ಲಿಸಬೇಕೆಂದು ತಾಕೀತು ಮಾಡಿದರು.

ಅನುದಾನ ವಾಪಸ್‌ ಹೋಗದಂತೆ ಜಾಗೃತಿವಹಿಸಿ: ಅಕ್ಷರ ದಾಸೋಹ ಯೋಜನೆಯಡಿ ಪ್ರತಿ ಮೂರು ತಿಂಗಳಿಗೊಮ್ಮೆ ಮಕ್ಕಳಿಗೆ ವಿತರಣೆಯಾಗುವ ಪೌಷ್ಟಿಕ ಆಹಾರವನ್ನು ಬ್ಯಾಗ್‌ಗಳ ಮೂಲಕ ಸಮರ್ಪಕವಾಗಿ ವ್ಯವಸ್ಥಿತವಿತರಣೆಯಾಗಬೇಕು. ಮಾರ್ಚ್‌ದೊಳಗೆ ಎಲ್ಲ ಇಲಾಖಾಧಿಕಾರಿಗಳು ಆನುದಾನವನ್ನುಸದುಪಯೋಗ ಮಾಡಿಕೊಂಡುಸಾರ್ವಜನಿಕರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ವಾಪಸ್‌ ಹೋಗದಂತೆ ಜಾಗೃತಿವಹಿಸಬೇಕೆಂದು ಸೂಚಿಸಿದರು.

ಸೌಲಭ್ಯ ಕುರಿತು ಅರಿವು ಮೂಡಿಸಿ: ಕೇಂದ್ರ,ರಾಜ್ಯ ಸರ್ಕಾರವಿವಿಧ ಇಲಾಖೆಗಳ ಮೂಲಕನೀಡುವ ಸೌಲಭ್ಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಮಾಂಸ ಆಹಾರವು ಬಹಳತುಟ್ಟಿಯಾಗುತ್ತಿದ್ದು, ಇದಕ್ಕೆಪರ್ಯಾಯವಾಗಿ ಮತ್ಸé ಆಹಾರಉತ್ಪನ್ನಗಳನ್ನು ಉತ್ತೇಜಿಸಲು ಪ್ರಧಾನಮಂತ್ರಿ ಮತ್ಸ್ಯ ಯೋಜನೆಯಡಿ ನೀಡುವಸಹಾಯಧನದ ಮಾಹಿತಿಯನ್ನು ಜಿಲ್ಲೆಯರೈತರಿಗೆ ಪ್ರಚಾರ ಪಡಿಸಬೇಕು. ಕಡಿಮೆನೀರಿನಲ್ಲಿ ಹೆಚ್ಚು ಮೀನು ಉತ್ಪಾದಿಸುವಪ್ರಾನ್ಸ್‌ ಬಯೋಕ್ಲಾಕ್‌ ತಂತ್ರಜ್ಞಾನ ರೈತರಿಗೆತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮರೂಪಿಸುವಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಪಿ.ಶಿವಶಂಕರ್‌ ಮಾತನಾಡಿ,ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮ ಪಾಲಿಸಲು ಯಾರು ಅಲಕ್ಷ್ಯವಹಿಸಬಾರದು. ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನುಒಳಗೊಂಡ ಒಂದು ಟಾಸ್ಕ್ಪೋರ್ಸ್‌ತಂಡವನ್ನು ರಚಿಸಿಕೊಂಡು ಆರೋಗ್ಯ ಇಲಾಖೆ ಪ್ರಸ್ತುತ ಗುರುತಿಸಲ್ಪಟ್ಟವರ್ಗದವರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಸೂಚಿಸಿದರು.

ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್‌,ಬಂಕ್‌ ಮುನಿಯಪ್ಪ ಹಾಗೂ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಜಾನುವಾರಗಳಿಗೆ ನೀರು ಪೂರೈಸಿ :

ಜಿಲ್ಲೆಯಲ್ಲಿ 35 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ ಎಂದುಅಧಿಕಾರಿಯ ಮಾಹಿತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷರು, ಜಿಲ್ಲೆಯಲ್ಲಿ ಈ ಸಂಬಂಧ ಪ್ರತಿ 15 ದಿನಕ್ಕೊಮ್ಮೆ ತಾಲೂಕುಮಟ್ಟದ ಅಧಿಕಾರಿಗಳು ಸಭೆ ಸೇರಬೇಕು. ಸಾರ್ವಜನಿಕರ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ತೊಟ್ಟಿಗಳನ್ನು ನಿರ್ಮಿಸಿ ಜಾನುವಾರಗಳಿಗೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ನಿರ್ದೇಶನ ನೀಡಿದರು.

ಕೋವಿಡ್ ನಿಯಮ ಪಾಲನೆ ಕಡ್ಡಾಯ : ಕೋವಿಡ್ ಸಾಂಕ್ರಾಮಿಕ ರೋಗವು ಹರಡುತ್ತಿರುವ 2ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿ, ಸರ್ಕಾರ ರೂಪಿಸಿರುವ ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾರ್ಗಸೂಚಿ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಇಲಾಖೆ ಗುರುತಿಸಲ್ಪಟ್ಟ ವಯೋಮಾನದವರು, ವರ್ಗದವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಸೂಕ್ತ ಕ್ರಮವಹಿಸುವಂತೆ ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಆಯುಷ್‌ ಇಲಾಖೆಗೆ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡುತ್ತಾರೆ. ಆ ಇಲಾಖೆ ಅಧಿಕಾರಿ-ಸಿಬ್ಬಂದಿಗೆಕಾರು ಕೊಡ್ತಾರೆ. ಅದು ಹೊರತುಪಡಿಸಿ ಇಲಾಖೆಯ ಕಾರ್ಯವೈಖರಿಸಮಾಧಾನಕರವಾಗಿಲ್ಲ. ಇಲಾಖೆ ಸದೃಢಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.-ಎಂ.ಬಿ ಚಿಕ್ಕನರಸಿಂಹಯ್ಯ, ಜಿಪಂ ಅಧ್ಯಕ್ಷ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.