ಹೊಣೆ ಹೊತ್ತ ಮೇಲೆ 1 ಬಾರಿ ಕೆಡಿಪಿ ಸಭೆ
Team Udayavani, May 11, 2022, 3:44 PM IST
ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಬಳಿಕ ಕೇವಲ ಒಂದು ಬಾರಿ ಮಾತ್ರ ಕೆಡಿಪಿ ಸಭೆ ನಡೆಸಿ ಸುಮ್ಮ ನಾದ ಎನ್.ನಾಗರಾಜ್(ಎಂಟಿಬಿ), ಆಡಳಿತ ವ್ಯವಸ್ಥೆ ಚುರುಕುಗೊಳಿಸುವ ವಿಚಾರದಲ್ಲಿ ವಿಶೇಷ ಆಸಕ್ತಿ ವಹಿಸಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹೆಚ್ಚು ಆಸಕ್ತಿ ಹೊಂದಿದ್ದ ಎನ್.ನಾಗರಾಜ್ (ಎಂಟಿಬಿ), ಬಹಿರಂಗವಾಗಿ ಚಿಕ್ಕಬಳ್ಳಾಪುರ ಹೊಣೆ ಹೊರಲು ಅಸಮಾಧಾನ ವ್ಯಕ್ತಪಡಿಸಿದ್ದರು.
ಅಲ್ಲದೆ, ಪಕ್ಷದ ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ನಿರ್ವಹಿಸುವುದಾಗಿ ಹೇಳಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೆಲ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಹೊರತುಪಡಿಸಿ, ಪರಿಪೂರ್ಣವಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಗೆ ಚುರುಕು ನೀಡುವಂತಹ ಕೆಲಸ ಮಾಡಿಲ್ಲ ಎಂಬುದು ಜನಜನಿತ. ರಾಜ್ಯ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಾ.ಕೆ.ಸುಧಾಕರ್, ಈ ಹಿಂದೆ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದರು.
ಜಿಲ್ಲೆಯ ಅಭಿವೃದ್ಧಿಗೆ ಪೂರಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಿ, ಕೆಲವೊಂದರಲ್ಲಿ ಯಶಸ್ವಿಯೂ ಆದರು. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾದ ಎನ್.ನಾಗರಾಜ್(ಎಂಟಿಬಿ), ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆಯ ಆಡಳಿತ ವ್ಯವಸ್ಥೆ ಚುರುಕುಗೊಳಿಸಿಲ್ಲ.
ಅಂತರ ಕಾಯ್ದುಕೊಂಡ ಸಂಸದ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎನ್.ನಾಗರಾಜ್(ಎಂಟಿಬಿ) ನೇಮಕಗೊಂಡ ಬಳಿಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಅಂತರ ಕಾಯ್ದುಕೊಂಡಿದ್ದು, ಇಬ್ಬರ ಮಧ್ಯೆ ನಡೆಯುತ್ತಿರುವ ರಾಜಕೀಯ ವೈಮನಸ್ಸಿನಿಂದ ಜಿಲ್ಲೆಯ ಅಭಿವೃದ್ಧಿಯ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ.
ಡಾ.ಕೆ.ಸುಧಾಕರ್ ಅವರದ್ದೇ ಅಂತಿಮ: ಚಿಕ್ಕಬಳ್ಳಾಪುರ ವಿಧಾನಸಭಾ ಹೊರತುಪಡಿಸಿ, ಬೇರೆ ಯಾವ ಕ್ಷೇತ್ರದಲ್ಲೂ ಬಿಜೆಪಿ ಶಾಸಕರಿಲ್ಲ. ಸಚಿವ ಡಾ.ಕೆ. ಸುಧಾಕರ್ ಅವರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಮುಂದಿಟ್ಟುಕೊಂಡು, ಅವುಗಳ ಜಾರಿಗೆ ಪ್ರಯತ್ನವನ್ನು ಮಾಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ನಾಗರಾಜ್, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತಿರುವುದು ಹೊರತುಪಡಿಸಿದರೆ, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರದಲ್ಲಿ ಸಚಿವ ಸುಧಾಕರ್ ಅವರನ್ನು ಬಿಟ್ಟು ಯಾವುದೇ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಈ ವಿಚಾರ ಜಿಲ್ಲಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಧಿಕಾರಿಗಳ ಚರ್ಚೆಯೇ ನಡೆಸಿಲ್ಲ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು ಹೈಟೆಕ್ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಜಿಲ್ಲೆಯ ಉಸ್ತುವಾರಿ ಸಚಿವರು ಶಿಡ್ಲಘಟ್ಟ ತಾಲೂಕಿನಲ್ಲಿ ಹೈಟೆಕ್ ಮಾರುಕಟ್ಟೆ ಮಾಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವ ಗೋಜಿಗೆ ಹೋಗಿಲ್ಲ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಜಿಲ್ಲಾ ಉಸ್ತು ವಾರಿ ಸಚಿವ ಎನ್.ನಾಗರಾಜ್ (ಎಂಟಿಬಿ), ರಾಜಕೀ ಯದಲ್ಲಿ ಅಧಿಕಾರ ಶಾಶ್ವತ ಅಲ್ಲ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಸರ್ವರಿಗೂ ಸಮಬಾಳು ಸಮಪಾಲು ನೀತಿಯೊಂದಿಗೆ ಕಾರ್ಯನಿ ರ್ವಹಿಸಬೇಕು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ್ದಾರೆ ವಿನಃ, ಜಿಲ್ಲಾ ಮತ್ತು ತಾಲೂಕು ಮಟ್ಟದ ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕಠಿಣ ಕ್ರಮಗಳು ಕೈಗೊಂಡಿಲ್ಲ
– ಎಂ.ಎ.ತಮೀಮ್‌ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.