ಸುಧಾಕರ್‌ರಿಂದ ಕಳಪೆ ರಾಜಕಾರಣ
Team Udayavani, Jun 28, 2022, 4:24 PM IST
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ಜಾತ್ಯತೀತವಾಗಿ ಆಡಳಿತ ನಡೆಸಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಜನ್ಮದಿನದಂದು ಸಚಿವ ಸುಧಾಕರ್ ಹುಟ್ಟುಹಬ್ಬ ಆಚರಣೆ ಖಂಡನೀಯ ಎಂದು ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಹೇಳಿದರು.
ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ನಡೆದ 513ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐತಿಹಾಸಿಕ ಸಾಧನೆಗಳನ್ನು ಮಾಡಿರುವ ಕೆಂಪೇಗೌಡ ಅವರಂತಹ ಮಹಾನ್ ವ್ಯಕ್ತಿ ಹುಟ್ಟಿದ ಸಂದರ್ಭದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಜನ್ಮದಿನ ಆಚರಿಸಿಕೊಂಡು ಕಳಪೆಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ ಅವರು ಮೊದಲು ಪಕ್ಷವನ್ನು ಬದಲಾಯಿಸಿದರು ಇದೀಗ ಹುಟ್ಟಿ ದಿನವನ್ನು ಬದಲಾಯಿಸಿ ಜನ್ಮದಿನ ಮಾಡಿಕೊಳ್ಳುತ್ತಿದ್ದಾರೆ ಮುಂದೆ ಜನರನ್ನು ಮಾರಾಟ ಮಾಡಲು ಇವರು ಹಿಂದೆ ಮುಂದೆ ನೋಡುವುದಿಲ್ಲವೆಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅನೇಕ ರೀತಿಯ ಸಮಸ್ಯೆಗಳಿವೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಗಮನಹರಿಸಲಿ, ಅದನ್ನು ಬಿಟ್ಟು ಕೇವಲ ತೋರ್ಪಡಿಕೆ ರಾಜಕಾರಣ ಮಾಡಬಾರದು. ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಜನ ಶಾಶ್ವತವಾಗಿ ಮೆಚ್ಚಿಕೊಳ್ಳುವಂತಹ ಕೆಲಸವನ್ನು ಮಾಡಲಿ ಕಳಪೆಮಟ್ಟದ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಡೆದ ಕೆಂಪೇಗೌಡ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್, ಕೆಪಿಸಿಸಿ ಸದಸ್ಯ ಮುನೇಗೌಡ,ಕಾಂಗ್ರೆಸ್ ಹಿರಿಯ ಮುಖಂಡ ವಕೀಲ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಹನುಮಂತಪ್ಪ, ಕಿಸಾನ್ ಕಾಂಗ್ರೆಸ್‌ನ ಕೃಷ್ಣಪ್ಪ, ಮೈನಾರಿಟಿ ಘಟಕದ ಅಧ್ಯಕ್ಷ ಸಮೀಉಲ್ಲಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.