![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 16, 2022, 6:40 PM IST
ಚಿಕ್ಕಬಳ್ಳಾಪುರ: ದೇಶದಲ್ಲಿ ಖಾದಿ ಉತ್ಪನ್ನಗಳನ್ನು ಮತ್ತು ಖಾದಿ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ವರ್ಷ ಜನವರಿ ತಿಂಗಳ 3ನೇ ವಾರದಲ್ಲಿ ರಾಷ್ಟ್ರೀಯ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಖಾದಿ ಗ್ರಾಮ ಉದ್ಯೋಗ ಮಂಡಳಿ ಅಧ್ಯಕ್ಷ ಕೆ. ವಿ. ನಾಗರಾಜ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾದಿ ಉತ್ಪನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ಖಾದಿ ಉತ್ಪನ್ನ ಮತ್ತು ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು. ಖಾದಿ ಬಟ್ಟೆಯನ್ನು ತಯಾರಿಸುವ ಮತ್ತು ಮಾರಾಟಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮುಂದಿನ ವರ್ಷ ಜನವರಿಯಲ್ಲಿ ರಾಷ್ಟ್ರೀಯ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ ಹೀಗಾಗಿ ಸುಮಾರು 200 ಮಳಿಗೆಗಳನ್ನು ತೆರೆಯಲು ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಶೋ ರೂಂ: ಖಾದಿ ವಸ್ತುಗಳು ಮತ್ತು ಉತ್ಪನಗಳನ್ನು ಮಾರಾಟ ಮಾಡುವ ಸಲುವಾಗಿ ಬೆಂಗಳೂರು ಮಾದರಿಯಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ ಸಹ ಮಾರಾಟ ಮಳಿಗೆಯನ್ನು ಸ್ಥಾಪನೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಅಧ್ಯಕ್ಷರು ರಾಜ್ಯಾದ್ಯಂತ ಖಾದಿ ಉದ್ಯಮವನ್ನು ಅಭಿವೃದ್ಧಿಗೊಳಿಸಲು ಮತ್ತು ಖಾದಿ ವಸ್ತ್ರಗಳ ಉತ್ಪಾದನೆಯಲ್ಲಿ ತೊಡಗಿರುವ ಎಲ್ಲರಿಗೂ ಸೂಕ್ತ ರೀತಿಯ ಮಾರ್ಗದರ್ಶನ ಮತ್ತು ಪ್ರೋತ್ಸಾಹಿಸುವ ಕೆಲಸವನ್ನು ಮಂಡಳಿಯಿಂದ ಮಾಡುತ್ತಿದ್ದೇವೆ ಎಂದರು.
ಡಿ. 17ರಂದು ಖಾದಿ ಉತ್ಸವ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ಜಿಲ್ಲಾ ಮಟ್ಟದ ಖಾದಿ ಉತ್ಸವವನ್ನು ಡಿಸೆಂಬರ್ 17 ರಿಂದ 25 ವರೆಗೆ ನಡೆಯಲಿದೆ ಈ ಉತ್ಸವದಲ್ಲಿ ಜಿಲ್ಲೆ ಮತ್ತು ರಾಜ್ಯಗಳಿಂದ ಭಾಗವಹಿಸುತ್ತಿರುವ ಖಾದಿ ಗ್ರಾಮೋದ್ಯೋಗ ವಸ್ತುಗಳ ಉತ್ಪಾದಕರಿಗೆ ಮಾರಾಟದ ವ್ಯವಸ್ಥೆ ಕಲ್ಪಿಸಲಾಗಿದೆ ಈ ವಸ್ತು ಪ್ರದರ್ಶನ 9 ದಿನಗಳ ಕಾಲ ನಡೆಯುವುದರಿಂದ ಖಾದಿ ವಸ್ತುಗಳ ಮಾರಾಟದಿಂದ ಸುಮಾರು 200 ಕೋಟಿ ರೂಗಳ ಪ್ರಗತಿಯನ್ನು ನಿರೀಕ್ಷಿಸಲಾಗಿದೆ ಎಂದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 25 ಖಾದಿ ಸಂಘ ಸಂಸ್ಥೆಗಳು ನಡೆಯುತ್ತಿದೆ ಈ ಸಂಸ್ಥೆಗಳಲ್ಲಿ 2726 ಕಸಬುದಾರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯ ಖಾದಿ ಗ್ರಾಮ ಉದ್ಯೋಗ ಮಂಡಳಿ ಸಿಇಒ ಬಸವರಾಜ್, ಇಒ (ಅಭಿವೃದ್ಧಿ) ವಿ.ಅಣ್ಣಪ್ಪ, ಖಾದಿ ಅಭಿವೃದ್ಧಿಅಧಿಕಾರಿ ಇ.ರಾಜಣ್ಣ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎಬಿ ರಾಜಶೇಖರ್ ಇತರರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.