![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 21, 2020, 4:19 PM IST
ಚಿಕ್ಕಬಳ್ಳಾಪುರ: ಕೋವಿಡ್ 19 ವೈರಸ್ ಬಗ್ಗೆ ಜನರಲ್ಲಿರುವ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಹಾಗೂ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಾಪಿಸಲಾಗಿರುವ ಐಸೊಲೇಷನ್ ವಾರ್ಡ್‌ಗಳಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದರು.
ಕೋವಿಡ್ 19 ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಗ್ರಾಪಂಗಳ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಸಹ ಸ್ವತ್ಛತೆಗೆ ಒತ್ತು ಕೊಡಬೇಕೆಂದರು.
ಜನತೆ ಆದಷ್ಟು ಜನಸಂದಣಿ ಪ್ರದೇಶಗಳಿಂದ ಅಂತರ ಕಾಯ್ದುಕೊಳ್ಳಬೇಕು, ಪೌಷ್ಟಿಕ ಆಹಾರ ಸೇವಿಸಬೇಕು. ಮಕ್ಕಳ ಹಾಗೂ ವಯೋವೃದ್ಧ ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ, ತಾಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ಆರೋಗ್ಯ ಇಲಾಖೆ ಜಿ.ಹರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.