ಕೆಪಿಸಿಸಿ ಅಧ್ಯಕ್ಷರೇ ಜನರಿಗೆ ತಿಂಗಳ ರೇಷನ್ ಕೊಡಲಿ
Team Udayavani, May 24, 2020, 6:21 AM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದ ಸಂದರ್ಭದಲ್ಲಿ ವಿರೋಧ ಪಕ್ಷಗಳು ಅನವಶ್ಯಕವಾಗಿ ಸರ್ಕಾರದ ಕ್ರಮಗಳನ್ನು ಟೀಕಿಸುತ್ತಿವೆ. ಕಾಂಗ್ರೆಸ್ ಪಕ್ಷದ ರಾಜ್ಯಾ ಧ್ಯಕ್ಷರಿಗೆ ಸಾಧ್ಯವಾದರೆ ರಾಜ್ಯದ ಜನರಿಗೆ ತಿಂಗಳ ಕಾಲ ಉಚಿತವಾಗಿ ರೇಷನ್ ಕೊಡುವ ಕೆಲಸ ಮಾಡಲಿ, ನಾನು ಸ್ವಾಗತಿಸುತ್ತೇನೆಂದು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ಜಿಲ್ಲಾ ಕೇಂದ್ರದಲ್ಲಿ ಶನಿವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ತಮ್ಮನ್ನು ಭೇಟಿ ಯಾದ ಸುದ್ದಿಗಾರರೊಂದಿಗೆ ಮಾತ ನಾಡಿ, ದರು.
ಜಗಳ ಮಾಡಿದ್ದೆ: ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿರುವ ಕಾರ್ಮಿಕರಿಗೆಶೇ.40 ರಷ್ಟು ಸೋಂಕು ಇರುವುದು ದೃಢವಾಗುತ್ತಿದೆ. ಕೊರೊನಾ ಸೋಂಕು ಹೆಚ್ಚು ಇರುವ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಜೂನ್ 1 ರವರೆಗೆ ಬರುವುದು ಬೇಡ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಜಿಲ್ಲೆಯ ವಲಸೆ ಕಾರ್ಮಿಕರನ್ನು ಕರೆ ತರುವ ವಿಚಾರದಲ್ಲಿ ನನ್ನ ಗಮನಕ್ಕೆ ತರದೇ ಜಿಲ್ಲೆಗೆ ಕಳುಹಿಸಿದ್ದರು. ಈ ಬಗ್ಗೆ ನಾನು ಅಧಿಕಾರಿಗಳ ಜೊತೆಗೆ ಜಗಳ ಮಾಡಿದ್ದೆ ಎಂದರು. ಜಿಲ್ಲೆಯಲ್ಲಿ 100 ರಿಂದ 120ರ ವರೆಗೂ ಸೋಂಕಿತರ ಸಂಖ್ಯೆ ಏರಿಕೆ ಕಾಣಲಿದೆ ಎಂದರು.
ಕೊರೊನಾಕ್ಕೆ ಮೃತರಾದರೆ ವಿಮೆ: ರಾಜ್ಯ ಸರ್ಕಾರ ಕೋವಿಡ್-19 ವಿರುದಟಛಿ ಹೋರಾಡುತ್ತಿರುವ ಆಶಾ ಕಾರ್ಯಕರ್ತರನ್ನು ಒಳಗೊಂಡಂತೆ ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗೆ ವಿಮೆ ಸೌಲಭ್ಯ ಕಲ್ಪಿಸಿದೆ. ಕೊರೊನಾಗೆ ತುತ್ತಾಗಿ ಮೃತಪಟ್ಟವರಿಗೆ ಮಾತ್ರ ಈ ವಿಮೆ ಸಿಗಲಿದೆ. ಬೇರೆ ಕಾರಣಗಳಿಗೆ ಮೃತ ಪಟ್ಟರೆ ಕೋವಿಡ್-19 ವಿಮೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.