ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ


Team Udayavani, Dec 27, 2019, 12:32 PM IST

cb-tdy-1

ಶಿಡ್ಲಘಟ್ಟ: ಜನಪ್ರತಿನಿಧಿಗಳು ಮತ್ತು ಸರ್ಕಾರದ ನಿರ್ಲಕ್ಷ್ಯದಿಂದ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌ ಮತ್ತು ವೈದ್ಯರ ಕೊರತೆಯಿಂದ ಬಡ ರೋಗಿಗಳು ಸೂಕ್ತ ಚಿಕಿತ್ಸೆ ಇಲ್ಲದೇ ಪರದಾಡುವಂತಾಗಿದೆ.

ಸೂಕ್ತ ಚಿಕಿತ್ಸೆ ಮರೀಚಿಕೆ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರವೆಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ನಗರದಲ್ಲಿ ರೇಷ್ಮೆ ಉದ್ಯಮವನ್ನು ನೆಚ್ಚಿಕೊಂಡು ಸಹಸ್ರಾರು ಮಂದಿ ಜೀವನ ನಡೆಸುತ್ತಿದ್ದಾರೆ. ವಿಶೇಷವಾಗಿ ನೂಲು ಬಿಚ್ಚಾಣಿಕೆದಾರರು, ಬಡ ಕೂಲಿ ಕಾರ್ಮಿಕರು, ರೈತರು ರೇಷ್ಮೆ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಸದಾ ಕೂಲಿ ಕೆಲಸ ಮಾಡಿಕೊಂಡು ಬದುಕಿನ ಬಂಡಿ ಸಾಗಿಸುವ ಬಡವರಿಗೆ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸೂಕ್ತ ಚಿಕಿತ್ಸೆ ಎಂಬುದು ಕನಸಿನ ಮಾತಾಗಿದೆ.

ನಿರ್ಲಕ್ಷ್ಯ: ಕ್ಷೇತ್ರದ ಹಾಲಿ ಶಾಸಕ ವಿ. ಮುನಿಯಪ್ಪರ ಕಾಳಜಿಯಿಂದ ಸಾರ್ವಜನಿಕ ಆಸ್ಪತ್ರೆಯನ್ನು 50 ಹಾಸಿಗೆಗಳಿಂದ 100 ಹಾಸಿಗೆಗೆ ಮೇಲ್ದಜೇಗೇರಿಸಲಾಗಿತ್ತು. ಅದನ್ನು ಮಾಜಿ ಶಾಸಕ ಎಂ.ರಾಜಣ್ಣ ಉದ್ಘಾಟಿಸಿದ್ದರು. ಆದರೆ ಇದೀಗ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌ ಮತ್ತು ವೈದ್ಯರ ಕೊರತೆಯಿಂದ ಬಡ ರೋಗಿಗಳು ನಿತ್ಯ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾಯಿತ ಪ್ರತಿನಿಧಿಗಳು,ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತ-ಸರ್ಕಾರ ಸಮಸ್ಯೆಯನ್ನು ಬಗೆಹರಿಸಲು ನಿರ್ಲಕ್ಷ್ಯವಹಿಸಿದೆ ಎಂಬ ಅಸಮಾಧಾನ ನಾಗರಿಕರ ವಲಯದಲ್ಲಿ ಕೇಳಿ ಬರುತ್ತಿದೆ.

ಇಎಸ್‌ಮಂಜೂರಿಗೆ ಮನವಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್ಮಿಕರು ಇರುವ ಶಿಡ್ಲಘಟ್ಟ ನಗರದಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಬೇಕೆಂದು ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಯು.ಟಿ.ಖಾದರ್‌ ಅಂದಿನ ಸಂಸದ ಕೆ.ಹೆಚ್‌.ಮುನಿಯಪ್ಪ ಅವರಿಗೆ ನಾಗರಿಕರು ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಇರುವ ಸಾರ್ವಜನಿಕ ಆಸ್ಪತ್ರೆಯಲ್ಲೇ ವೈದ್ಯರ ಕೊರತೆ ನೀಗಿಸಿ ಬಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಾಳಜಿ ಇಲ್ಲದಂತಾಗಿದೆ.

ತ್ರೈಮಾಸಿಕ ಸಭೆಯಲ್ಲಿ ಪ್ರಸ್ತಾಪ: ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿರುವ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ನಾಗಾಂಬಿಕಾದೇವಿ ಹಾಗೂ ಶಾಸಕರು-ತಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜರುಗಿದ ತ್ರೈಮಾಸಿಕ ಸಭೆಯಲ್ಲಿ ಆಡಳಿತ ವೈದ್ಯಾಧಿಕಾರಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ.

ಸಂಸದರು-ಶಾಸಕರು ಗಮನಹರಿಸಲಿ: ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಕ್ಷೇತ್ರದ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಮುನಿಯಪ್ಪ ಅವರು ಗಮನಹರಿಸಲಿ ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಪರದಾಟ : ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದೆಡೆ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ರೋಗಿಗಳು ನರಳುತ್ತಿದ್ದರೆ, ಮತ್ತೂಂದೆಡೆ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಸೂಕ್ತ ರೀತಿಯಲ್ಲಿ ಕುಡಿಯುವ ನೀರಿಲ್ಲದೆ ಹೊರಗಡೆಯಿಂದ ನೀರು ತಂದು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆ ಆವರಣದಲ್ಲಿ ಕೊರೆಸಿರುವ ಕೊಳವೆಬಾವಿಗಳು ನೀರಿಲ್ಲದೇ ವಿಫ‌ಲಗೊಂಡಿದ್ದು, ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಆಸ್ಪತ್ರೆಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆಗುತ್ತಿದ್ದು, ಅದು ಸಹ ಕೆಲವೊಮ್ಮೆ ನಿಲ್ಲುವುದರಿಂದ ರೋಗಿಗಳು ಅದರಲ್ಲೂ ಡಯಾಲಿಸಿಸ್‌ ಮಾಡಿಸಿಕೊಳ್ಳುವ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮೂಲೆಗುಂಪಾದ ಸ್ಕ್ಯಾನಿಂಗ್‌ ಯಂತ್ರ:  ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯ ನಡುವೆಯೂ ಸ್ಕ್ಯಾನಿಂಗ್‌ ಮಾಡುವ ಯಂತ್ರ ರೇಡಿಯಾಲಿಜಿಸ್ಟ್‌ ಇಲ್ಲದೇ ಮೂಲೆಗುಂಪಾಗಿದೆ. ಒಟ್ಟಾರೆ ಲಕ್ಷಾಂತರ ರೂ. ವೆಚ್ಚ ಮಾಡಿ ಖರೀದಿಸಿರುವ ಸ್ಕ್ಯಾನಿಂಗ್‌ ಯಂತ್ರ ಇದ್ದರೂ ಇಲ್ಲದಂತಾಗಿ ಮೂಲೆ ಗುಂಪಾಗಿದೆ. ಪ್ರಸ್ತುತ ಧೂಳಿ ಹಿಡಿದಿರುವ ಸ್ಕ್ಯಾನಿಂಗ್‌ ಯಂತ್ರವನ್ನು ಬಳಕೆ ಮಾಡಲು ರೇಡಿಯಾಲಿಜಿಸ್ಟ್‌ ಅವರನ್ನು ನೇಮಕ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಸಿಬ್ಬಂದಿ ಕೊರತೆ ನೀಗಿಸಲು ಕ್ರಮ: ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ನೀಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಆರೋಗ್ಯ ಸಚಿವರನ್ನು ಭೇಟಿಯಾಗಿ ತಜ್ಞ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ತಿಳಿಸಿದ್ದಾರೆ. ನಗರಸಭೆ ಮೂಲಕ ಕೊರೆದಿರುವ ಕೊಳವೆಬಾವಿಯಲ್ಲಿ ನೀರು ಲಭಿಸಿದೆ. ಸಾರ್ವಜನಿಕ ಆಸ್ಪತ್ರೆಗೆ ನೀರಿನ ಸಂಪರ್ಕ ಕಲ್ಪಿಸಲು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಕುರಿತು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈಗಾಗಲೇ ಮೂರು ಜನ ವೈದ್ಯರು ವರ್ಗಾವಣೆಯಾಗಿದ್ದಾರೆ. ಇರುವ ವೈದ್ಯರು ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿ ಕೊರೆಸಲಾಗಿದೆ. ಶೀಘ್ರವೇ ನೀರಿನ ಸಮಸ್ಯೆಗೆ ಮುಕ್ತಿ ದೊರೆಯಲಿದೆ. ಡಾ.ವಾಣಿ, ಆಡಳಿತ ವೈದ್ಯಾಧಿಕಾರಿ ಸಾರ್ವಜನಿಕ ಆಸ್ಪತ್ರೆ ಶಿಡ್ಲಘಟ್ಟ

 

-ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.