Lack of facility: 19 ವರ್ಷ ಕಳೆದರೂ ಬಡಾವಣೆಗಿಲ್ಲ ಸೌಕರ್ಯ
Team Udayavani, Oct 28, 2023, 4:19 PM IST
ಬಾಗೇಪಲ್ಲಿ; ಪಟ್ಟಣದ ಹೊರವಲಯದಲ್ಲಿ ಸುಮಾರು 19 ವರ್ಷಗಳ ಹಿಂದೆ ಪುರಸಭೆ ವತಿಯಿಂದ ನಿರ್ಮಾಣ ಮಾಡಿರುವ ಹೊಸ ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಇಲ್ಲಿ ಅಭಿವೃದ್ಧಿ ಕಾಣದಾಗಿದೆ. ಪಟ್ಟಣದ ಹೊರವಲಯದ ತೀಮ್ಮಾಕಲಪಲ್ಲಿ ಗ್ರಾಮದ ಬಳಿ ಮನೆ ವಂಚಿತ ಫಲಾಭವಿಗಳಿಗೆ ಸರ್ಕಾರ ನಿವೇಶನಗಳನ್ನು ನೀಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ಒದಗಿಸಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಸುಮಾರು 400 ನಿವೇಶನಗಳನ್ನು ಪಡೆದು ಈಗಾಗಲೇ 300 ಮನೆಗಳನ್ನು ನಿರ್ಮಾಣ ಮಾಡಿಕೊಂಡು ಕುಟುಂಬ ಸಮೇತ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ, ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತಾಂಡವಾಡುತ್ತಿದೆ.
ವಿಷಜಂತುಗಳ ಕಾಟ: ಪಟ್ಟಣಕ್ಕೆ ಹೊಂದಿಕೊಂಡಿರುವ ಬಡಾವಣೆಗೆ ಸರಿಯಾದ ರಸ್ತೆ ಮಾರ್ಗವಿಲ್ಲ, ಬೀದಿದೀಪ ಹಾಗೂ ಮನೆಗಳಿಗೆ ವಿದ್ಯುತ್ ಮರೀಚೆಕೆಯಾಗಿದೆ. ಕುಡಿಯುವ ನೀರಿಗಾಗಿ ತೀಮ್ಮಾಕಲಪಲ್ಲಿ ಗ್ರಾಮಕ್ಕೆ ಸುಮಾರು 1ಕೀ.ಮೀ.ಪಾದಯಾತ್ರೆ ಮಾಡಿ ನೀರು ತರಬೇಕಾಗಿದೆ. ರಾತ್ರಿ ವೇಳೆಯಲ್ಲಿ ಹಾವು ಮತ್ತು ಚೇಳುಗಳ ಕಾಟ ವಿಪರೀತವಾಗಿದ್ದು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರೂ ಭಯದ ವಾತಾವರಣದಲ್ಲಿ ಒಡಾಡುತ್ತಿದ್ದಾರೆ.ಈ ಬಡಾವಣೆಯಲ್ಲಿ 1500 ಜನಸಂಖ್ಯೆ ಇದ್ದು, ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳು ಇಲ್ಲದಿರುವುದರಿಂದ ಮಕ್ಕಳು ಪ್ರಾಥಮಿಕ ಹಂತದಲ್ಲೆ ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚರಂಡಿ ವ್ಯವಸ್ಥೆ ಇಲ್ಲ: ಬಡಾವಣೆಯಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲದೆ ಮನೆಗಳಿಂದ ಹೊರ ಬರುವ ಕೊಚ್ಚೆ ನೀರು ರಸ್ತೆ ಸಣ್ಣ ಕಾಲುವೆಗಳ ಮೂಲಕ ಹೊರ ಬಿಡಲಾಗುತ್ತಿದೆ ಇದರಿಂದ ಬಡಾವಣೆಯಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ.
ನನ್ನ ಅನುದಾನದಲ್ಲಿ ಈ ಬಡಾವಣೆಯ ಅಭಿವೃದ್ಧಿಗೆ 1ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಆದರೆ ಈ ಬಡಾವಣೆಯ ನಿವೇಶನಗಳು ಪುರಸಭೆ ವ್ಯಾಪ್ತಿಯಲ್ಲಿವೆ. ಜಮೀನು ಪರಗೋಡು ಗ್ರಾಪಂ ವ್ಯಾಪ್ತಿಯಲ್ಲಿವೆ. ಇದರಿಂದಲೇ ಈ ಅನುದಾನ ಖರ್ಚು ಮಾಡಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪ್ರತ್ಯೇಕವಾಗಿ ಗೆಜಟ್ ನೋಟಿಫಿಕೆಷನ್ ಮಾಡಿಸಿದ ನಂತರ ಅಭಿವೃದ್ಧಿ ಕೆಲಸಗಳು ಮಾಡಬಹುದಾಗಿದೆ. – ಎಸ್.ಎನ್.ಸುಬ್ಟಾರೆಡ್ಡಿ, -ಶಾಸಕರು
ಜಿ.ಎಂ.ಗುರುಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.