ನಿಗಾ ಘಟಕಕೆ ಮೂಲ ಸೌಕರ್ಯ ಕೊರತೆ
Team Udayavani, Mar 25, 2020, 2:21 PM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಆರಂಭಿಸಿರುವ ಐಸೋಲೇಷನ್ ವಾರ್ಡ್‌ಗಳಿಗೆ ಮೂಲ ಸೌಕರ್ಯ ಕೊರತೆ ಎದ್ದು ಕಾಣುತ್ತಿದೆ.
ಈಗಾಗಲೇ ಜಿಲ್ಲೆಯಲ್ಲಿ ಮೂವರಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿದ್ದು ಆ ಪೈಕಿ ಇಬ್ಬರಿಗೆ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಒಬ್ಬ ಮಹಿಳೆಗೆ ಜಿಲ್ಲಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಆದರೆ, ಹಳೆ ಜಿಲ್ಲಾಸ್ಪತ್ರೆ ನವೀಕರಣಗೊಳಿಸಿರುವ ಕಟ್ಟಡದಲ್ಲಿ ನಿಗಾ ಘಟಕ ಆರಂಭಿಸಲಾಗಿದ್ದು, ಹೆಚ್ಚಿನ ಮೂಲ ಸೌಕರ್ಯಗಳಿಗೆ ಎದುರು ನೋಡುವಂತಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಪರ್ಕದಲ್ಲಿರುವ 28 ಮಂದಿ ಸೇರಿ ಸುಮಾರು 202 ಮಂದಿ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಆದರೆ, ಆರೋಗ್ಯ ಇಲಾಖೆ ಸ್ಥಾಪಿಸಿರುವ ವಿಶೇಷ ನಿಗಾ ಘಟಕಕ್ಕೆ ಅತ್ಯಾಧುನಿಕ ಐಸಿಯು ಸೇರಿ ಇನ್ನಷ್ಟು ಮೂಲ ಸೌಕರ್ಯ ಅಗತ್ಯವಿದೆ ಎಂಬ ಮಾತು ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಕೇಳಿ ಬರುತ್ತಿದೆ. ಹಳೆ ಆಸ್ಪತ್ರೆ ನವೀಕರಣ ಘಟಕದಲ್ಲಿ ವಿಶೇಷ ನಿಗಾ ತೆರೆಯಲಾಗಿದೆ. ಎಲ್ಲಾ ಸೋಂಕಿತರನ್ನು ಬೆಂಗಳೂರಿಗೆ ಕಳುಹಿಸಲು ಆಗುವುದಿಲ್ಲ. ಹೀಗಾಗಿ ಜಿಲ್ಲಾ ನಿಗಾ ಘಟಕಕ್ಕೆ ಬೇಕಾದ ಮೂಲ ಸೌಕರ್ಯ ಹಂತ ಹಂತವಾಗಿ ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.