ಇಂದು “ಅಂತರ್ಜಲ ಚೇತನ’ ಯೋಜನೆಗೆ ಚಾಲನೆ


Team Udayavani, May 19, 2020, 7:54 AM IST

fouziya

ಚಿಕ್ಕಬಳ್ಳಾಪುರ: ರಾಜ್ಯದ ಬರಪೀಡಿತ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷವಾಗಿ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಬಯಲುಸೀಮೆ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಸುವ ನಿಟ್ಟಿ ನಲ್ಲಿ ರಾಜ್ಯ  ಸರ್ಕಾರ ರೂಪಿಸಿರುವ ಅಂತರ್ಜಲ ಚೇತನ ಯೋಜನೆಗೆ ಮಂಗಳವಾರ ಜಿಲ್ಲೆಯಲ್ಲಿ ಚಾಲನೆ ಸಿಗಲಿದೆ.

ಜಲ ಸಂರಕ್ಷಣೆಗೆ ಕಾಮಗಾರಿಗೆ ಆದ್ಯತೆ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ 1200 ರಿಂದ 1500 ಅಡಿವರೆಗೂ ಕುಸಿದಿದೆ. ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಮಳೆಯನ್ನೇ ಅವಲಂಬಿಸಬೇಕಿದೆ. ಈ ಹಿಂದೆ ಜಿಲ್ಲೆಯಲ್ಲಿ ಹರಿಯುತ್ತಿದ್ದ  ಉತ್ತರ ಪಿನಾಕಿನಿ, ಚಿತ್ರಾವತಿ, ಪಾಲಾರ್‌, ಪೆನ್ನಾರ್‌ ಮತ್ತಿತರ ಜೀವ ನದಿ  ಗಳು ಕಣ್ಮರೆಯಾಗಿದ್ದು, ಜಿಲ್ಲೆಯು ಸತತವಾಗಿ ಬರಗಾಲಕ್ಕೆ ತುತ್ತಾಗುವುದನ್ನು ತಡೆ ಗಟ್ಟುವ ನಿಟ್ಟಿನಲ್ಲಿ ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡುವ ದಿಸೆಯಲ್ಲಿ ಯೋಜನೆ ರೂಪಿಸಲಾಗಿದೆ.

ಅಂತರ್ಜಲ ವೃದ್ಧಿಸುವಿಕೆ: ಈ ಯೋಜನೆ ಯನ್ನು ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಸಂಸ್ಥೆ ಬೆಂಗಳೂರಿ ನ ಆರ್ಟ್‌ ಆಫ್ ಲೀವಿಂಗ್‌ ಸಂಸ್ಥೆ ಜೊತೆಗೂಡಿಕಾರ್ಯಗತಗೊಳಿಸಲಾಗುತ್ತಿದೆ. ವಿಶೇಷವಾಗಿ ನರೇಗಾ ಯೋಜನೆಯಡಿ ವಿವಿಧ ಇಲಾಖೆಗಳ ಓಗ್ಗೂಡಿಸುವಿಕೆಯೊಂದಿಗೆ ನೀರಿನ ಸಂರಕ್ಷಣೆಗಾಗಿ ಗೋಕುಂಟೆಗಳ ನಿರ್ಮಾಣ, ಸ್ಥಗಿತಗೊಂಡ ಕೊಳವೆಬಾವಿಗಳಿಗೆ ಜಲ ಮರು  ಪೂರಣ ಘಟಕ ನಿರ್ಮಿಸುವು ದು,

ಮಳೆನೀರು ಕೊಯ್ಲು, ಕಲ್ಯಾಣಿ  ಗಳ ಪುನರುಜೀವನ ಕೆರೆಗಳಲ್ಲಿ ಹೊಳೆ ತ್ತುವುದು, ಸಾಮಾಜಿಕ ಅರಣ್ಯೀ ಕರಣ ಕಾಮಗಾರಿಗಳನ್ನು ಪ್ರತಿ ಗ್ರಾಪಂ ವ್ಯಾಪ್ತಿಯ ಗ್ರಾಪಂ ಸಾಮೂಹಿಕ ಭೂ ಪ್ರದೇಶ, ವೈಯಕ್ತಿಕ ಜಮೀನುಗಳಲ್ಲಿ ಕೈಗೊ ಳ್ಳು ವುದರ ಮುಖಾಂತರ ಅಂತರ್ಜಲ ವೃದ್ಧಿ ಸುವಿಕೆ ಮಾಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ನದಿ ಪುನಶ್ಚೇತನ:ಯೋಜನೆಯಡಿ ಉತ್ತರ ಪಿನಾಕಿನಿ ನದಿ ಪುನಶ್ಚೇತನ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯ 1515 ಗ್ರಾಮಗಳ ವ್ಯಾಪ್ತಿಯಲ್ಲಿನ 52 ಕಿರು ಜಲಾ  ನಯನಗಳಲ್ಲಿ ಅನುಷ್ಠಾನಿಸುತ್ತಿದ್ದು, ಸುಮಾರು 1377 ಚ.ಕಿ. ಪ್ರದೇಶದಲ್ಲಿ  ಅಂತರ್ಜಲ ವೃದ್ಧಿಯಾಗುವ ನಿರೀಕ್ಷೆ ಇದೆ. ಯೋಜ ನೆ ಯನ್ನು ಜಿಲ್ಲೆಯ 45 ಗ್ರಾಮ ಪಂಚಾ ಯಿತಿಗಳಲ್ಲಿ ಕೈಗೊಳ್ಳಲಾಗುವುದು. ಈ ಯೋಜನೆಯಿಂದ ಜಿಲ್ಲೆಯ ಸುಮಾರು 15,000 ಕುಟುಂಬಗಳಿಗೆ ಉದ್ಯೋಗ ಸಿಗಬಹುದೆಂದು  ರೀಕ್ಷಿಸಲಾಗಿದೆ. ಸಚಿವ ಕೆ.ಎಸ್‌. ಈಶ್ವರಪ್ಪ ಹಾಜರಿ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಅಂತರ್ಜಲ ಮಟ್ಟ ವೃದ್ಧಿಗೊಳಿಸುವ ದಿಸೆಯಲ್ಲಿ ಅಂತರ್ಜಲ  ಚೇತನ ಯೋಜನೆಗೆ ಮಂಗಳವಾರ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಚಾಲನೆ ನೀಡಲಿದ್ದಾರೆ. ಯೋಜನೆಯಡಿ ಉತ್ತರ ಪಿನಾಕಿನಿ  ನದಿ ಪುನಶ್ಚೇತನದ ಜೊತೆಗೆ ಜಲಾಮೃತ ಯೋಜನೆಯಡಿ ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುವುದು. 
-ಬಿ.ಫೌಝೀಯಾ ತರುನ್ನುಮ್‌, ಜಿಪಂ ಸಿಇಒ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.