ನಿಯಮ ಜಾರಿ ಯಾರಿಗೂ ತೊಂದರೆ ಮಾಡುವುದ್ದಲ್ಲ
Team Udayavani, Jan 7, 2022, 10:23 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜನರ ಆರೋಗ್ಯ ಕಾಪಾಡುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಹೊರತು, ಯಾರಿಗೂ ತೊಂದರೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದರು.
ನಗರದ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಮತ್ತು ಮಳೆಯಿಂದ ಹಾನಿಯಾದ ಮನೆಗಳ ಮಾಲಿಕರಿಗೆ ಪರಿಹಾರ ವಿತರಿಸಿ ಮಾತನಾಡಿ, ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಕೊಡುವಂತಹ ಕೆಲಸವನ್ನು ಮಾಡುತ್ತೇವೆ.
ಮುಂದಿನ ಒಂದು ವಾರದಲ್ಲಿ ಎಲ್ಲಾ ಫಲಾನುಭವಿಗಳಿಗೆ ಪ್ರಥಮ ಡೋಸ್ ಲಸಿಕೆ ನೀಡುವ ಕೆಲಸ ಪೂರ್ಣಗೊಳಿಸುತ್ತೇವೆ ಎಂದ ಸಚಿವರು, ಪ್ರಸ್ತುತ ಕರ್ನಾಟಕ ಇಡೀ ದೇಶದಲ್ಲಿ 3ನೇ ಸ್ಥಾನ ಹೊಂದಿದೆ ಎಂದು ವಿವರಿಸಿದರು. ಡಿಕೆಶಿಗೆ ಕೋವಿಡ್ ಬಗ್ಗೆ ತಿಳಿವಳಿಕೆ ಇಲ್ಲ: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ರೂಪಾಂತÃ ಗೊಂಡಿರುವ ಒಮಿಕ್ರಾನ್ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿರುವುದಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಅಸಮಾ ಧಾನಗೊಂಡ ಆರೋಗ್ಯ ಸಚಿವರು, ಸರ್ಕಾರ ಜಾರಿಗೊಳಿಸುತ್ತಿರುವ ಮಾರ್ಗ ಸೂಚಿಗಳಿಂದ ಆಟೋಚಾಲಕರಿಗೆ, ಡ್ರೈವರ್‌ಗಳಿಗೆ ತೊಂದರೆ ಆಗುತ್ತದೆ ಎಂದು ಹೇಳಿರುವುದು ದುರಾ ದೃಷ್ಟಕರ ಸಂಗತಿ.
ಅವರಿಗೆ(ಡಿಕೆಶಿ) ಕೋವಿಡ್ ಬಗ್ಗೆ ವಿಷಯ ತಿಳಿದುಕೊಂಡಿಲ್ಲ ಎಂದು ಟೀಕಿಸಿದರು. ಬೆಂಗಳೂರಲ್ಲೇ ಹೆಚ್ಚು: ಶಾಲೆಗಳಲ್ಲಿ ಆನ್‌ಲೈನ್ ವ್ಯವಸ್ಥೆ ಇರುವುದು ಕೇವಲ ಬೆಂಗಳೂರಿನಲ್ಲಿ ಮಾತ್ರ. ಇಡೀ ರಾಜ್ಯದಲ್ಲಿ ಪ್ರಸ್ತುತ ಶಾಲೆಗಳು ನಡೆಯುತ್ತಿದೆ. ಅದು ಮುಂದುವರಿಯುತ್ತದೆ. ಆದರೆ, ಬೆಂಗಳೂ ರಿ ನಲ್ಲಿ ಜನಸಂಖ್ಯೆ ಮತ್ತು ಸೋಂಕಿನ ಪ್ರಮಾಣ ಹೆಚ್ಚು ತ್ತಿ ರುವುದರಿಂದ ಬೆಂಗಳೂರಿಗೆ ಮಾತ್ರ ಕೆಲವೊಂದು ನಿ ಯಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು: ಏರ್‌ಲೈನ್ಸ್‌ನಲ್ಲಿ ಏರ್ ಸುವೀಧಾ ಎನ್ನುವುದು ಇರುತ್ತದೆ. ವಿಮಾನದಲ್ಲಿ ಪ್ರಯಾಣ ಮಾಡುವವರು ಪ್ರಯಾಣ ಮಾಡುವ ಮೊದಲೇ ಅಂದರೆ 72 ಗಂಟೆ ಮುಂಚೆ ಕೋವಿಡ್ ನೆಗೆಟಿವ್ ವರದಿ ತೋರಿಸಬೇಕು. ಆಗ ಮಾತ್ರ ಅವರನ್ನು ಪ್ರಯಾಣ ಮಾಡಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಹೊರ ರಾಜ್ಯ ಅಥವಾ ಹೊರ ದೇಶಗಳಿಂದ ಬರುವ ಪ್ರಯಾಣಿಕರಿಗೆ ಇದು ಅನ್ವಯಿಸುತ್ತದೆ ಎಂದು ಹೇಳಿದರು.
ಘಿ ಮಹಾರಾಷ್ಟ್ರ ಇನ್ನಿತರೆ ಭಾಗಗಳಿಂದ ಪ್ರಯಾ ಣಿಕರು ಬರುತ್ತಿದ್ದಾರೆ ಎಂಬ ಮಾಹಿ ತಿಯ ಹಿನ್ನೆಲೆ ಯಲ್ಲಿ ಸಿಎಂ ಅವರ ನೇತೃತ್ವದಲ್ಲಿ ಸಭೆ ನಡೆಸಿ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ, ಪ್ರಯಾಣಿಕರು ರಸ್ತೆ, ರೈಲಿನಲ್ಲಿ ಅಥವಾ ವಿಮಾನದಲ್ಲಿ ಬಂದರೂ ಅವರ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.