ಸಂಕುಚಿತ ಮನೋಭಾವ ಬಿಟ್ಟು ವಿಶ್ವ ಮಾನವರಾಗಿ
Team Udayavani, Dec 30, 2019, 3:00 AM IST
ಗೌರಿಬಿದನೂರು: ಸಂಕುಚಿತ ಮನೊಭಾವನೆ ಬಿಟ್ಟು ವಿಶ್ವಮಾನವರಾಗಿ ಪ್ರೀತಿ, ಪ್ರೇಮ, ವಾತ್ಸಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಕೃಷಿ ಸಚಿವ ಹಾಗೂ ಶಾಸಕ ಎನ್.ಹೆಚ್.ಶಿವಶಂಕರರೆಡ್ಡಿ ಸಲಹೆ ನೀಡಿದರು. ಗೌರಿಬಿದನೂರಿನ ಡಾ.ಹೆಚ್.ಎನ್.ಕಲಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆದರ್ಶ ಪುರುಷರ ಆದರ್ಶಗಳನ್ನು ಅನುಕರಣೆ ಮಾಡಿ ಪಾಲಿಸಬೇಕು. ಆಗ ಆ ಜನ್ಮ ದಿನಾಚರಣೆಗಳಿಗೆ ಅರ್ಥಬರುತ್ತದೆ. ಕುವೆಂಪು ಅವರು ಓರ್ವ ರಾಷ್ಟ್ರ ಕವಿ, ಆದರ್ಶ ಕವಿ, ನಿಸರ್ಗ ಕವಿ, ಸಾಹಿತಿ, ಸಮಾಜದ ಬಗ್ಗೆ ಕಾಳಜಿ ಉಳ್ಳ ಕವಿಯಾಗಿದ್ದರು. ಇವರು ಬರೆದ ರಾಮಾಯಣದರ್ಶನಂ ಕೃತಿಯಲ್ಲಿ ಭಿನ್ನವಾದ ಕೋನಗಳಿಂದ ವಿಶ್ಲೇಷಿಸಿದ್ದಾರೆ ಎಂದರು.
ಮುಖ್ಯಭಾಷಣಕಾರರಾಗಿ ಮಾತನಾಡಿದ ಆರ್.ಜಿ.ಜನಾರ್ದನ ಮೂರ್ತಿ ಮಾತನಾಡಿ, ಕುವೆಂಪು ಮಹಾನ್ ಮಾನವತಾವಾದಿ. ಮೇರು ವ್ಯಕ್ತಿತ್ವದ ಕವಿ ಎಂದು ಬಣ್ಣಸಿ ಅವರ ಜೀವನ ಚರಿತ್ರೆಯನ್ನು ತಿಳಿಸಿದರು. ತಾಲೂಕಿನಿಂದ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆಯಾದ ಮೂವರನ್ನು ಸನ್ಮಾನಿಸಿದರು. ಕುವೆಂಪು ವಿಷಯದ ಚರ್ಚೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಸಂತಾಪ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾರ ತಹಶಿಲ್ದಾರ್ ಹನುಮಂತರಾಯಪ್ಪ,ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವೀಂದ್ರನಾಥ್,ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಪ್ರಭಾನಾರಾಯಣ ಗೌಡ, ಪ್ರಕಾಶರೆಡ್ಡಿ, ಹನುಮಂತರೆಡ್ಡಿ ನಗರಸಭಾ ಸದಸ್ಯರಾದ ಶ್ರೀಕಾಂತ್, ಅಮರ್, ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಕೃಷಿ ಅಧಿಕಾರಿ ಮಂಜುನಾಥ್,ನಾಗರಾಜು, ಮಂಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.