ಸಚ್ಚತೆ ಆರೋಗ್ಯದ ಮೂಲ ಮಂತ್ರವಾಗಲಿ
ಜಿಲ್ಲಾಡಳಿತ ಭವನ ಆವರಣದಲ್ಲಿ ನಡೆದ ಸ್ವತ್ಛತೆ, ಶ್ರಮದಾನ ಕಾರ್ಯಕ್ರಮದಲ್ಲಿ ಕಸ ಗುಡಿಸಿದ ಡೀಸಿ ಆರ್.ಲತಾ
Team Udayavani, Oct 31, 2021, 2:09 PM IST
ಚಿಕ್ಕಬಳ್ಳಾಪುರ: ಸುತ್ತಮುತ್ತಲಿನ ನೈರ್ಮಲ್ಯೀಕರಣಕ್ಕೆ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ. ಪ್ರತಿಯೊಬ್ಬರೂ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಮತ್ತಷ್ಟು ಆದ್ಯತೆಯ ಹೆಜ್ಜೆಗಳನ್ನು ಇಡಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ, ವಿವಿಧ ಇಲಾಖೆಗಳು ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವ ಅಂಗವಾಗಿ ಕ್ಲೀನ್ ಇಂಡಿಯಾ ವಿಶೇಷ ಅಭಿಯಾನದಡಿ ಹಮ್ಮಿಕೊಂಡಿದ್ದ ಜಿಲ್ಲಾಡಳಿತ ಭವನ ಆವರಣದ ಸ್ವತ್ಛತೆ ಮತ್ತು ಶ್ರಮದಾನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ಲಾಸ್ಟಿಕ್ ಮಾರಾಟ ತಡೆಯಿರಿ: ‘ಪರಿಸರಕ್ಕೆ ಹಾನಿಯುಂಟು ಮಾಡುವ ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಭಾಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಸಂಪೂರ್ಣ ತಡೆಯಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಂಘ ಸಂಸ್ಥೆಗಳ ಸಹಭಾಗಿತ್ವ: ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರಕ ಪ್ಲಾಸ್ಟಿಕ್ ಅನ್ನು ನಿಷೇಧಿ ಸುವ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತಿದೆ.
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅ.2ರಿಂದ ಜಿಲ್ಲೆಯ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಸ್ವತ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.
5ಸಾವಿರ ಕೆ.ಜಿ.ಗೂ ಹೆಚ್ಚು ಪ್ಲಾಸ್ಟಿಕ್ ವಶ: ಈ ಒಂದು ತಿಂಗಳ ಅವ ಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 5ಸಾವಿರ ಕೆ.ಜಿ.ಗೂ ಹೆಚ್ಚು ನಿಷೇ ಧಿತ ಪ್ಲಾಸ್ಟಿಕ್‌ಅನ್ನು ಸಂಗ್ರಹಿಸಿ, ಆಯಾ ಸ್ಥಳೀಯ ಮಟ್ಟದಲ್ಲೇ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ;- ಇಂದಿರಾ ಗಾಂಧಿ ಜನರ ಮನಸ್ಸಿನಲ್ಲಿ ದೇವರಾಗಿದ್ದರು: ಸಿದ್ದರಾಮಯ್ಯ
ನೈರ್ಮಲ್ಯಕ್ಕೆ ಒತ್ತು ನೀಡಿ: ಕ್ಲೀನ್ ಇಂಡಿಯಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸ್ವತ್ಛತಾ ಕಾರ್ಯಕ್ರಮ ಮುಂದುವರಿಸಲಾಗುವುದು ಪ್ರತಿಯೊಬ್ಬರೂ ನೈರ್ಮಲ್ಯಕ್ಕೆ ಒತ್ತು ನೀಡಿದಲ್ಲಿ ಉತ್ತಮ ಆರೋಗ್ಯ ಮತ್ತು ಪರಿಸರ ನಿರ್ಮಾಣಕ್ಕೆ ಅವಕಾಶವಾಗುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಎಲ್ಲರೂ ತಮ್ಮ ಸುತ್ತಮುತ್ತಲಿನ ಪರಿಸರದ ನೈರ್ಮಲ್ಯೀಕರಣಕ್ಕೆ ಮೊದಲ ಆದ್ಯತೆ ಮೇಲೆ ಒತ್ತು ನೀಡುವ ಅಗತ್ಯವಿದೆ. ಆರೋಗ್ಯ ಸ್ನೇಹಿ ಪರಿಸರಕ್ಕಾಗಿ ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಹಸಿರೀಕರಣಕ್ಕೆ ಮುಂದಾಗಬೇಕು ಎಂದು ವಿವರಿಸಿದರು. ಹಸಿ, ಒಣಕಸ ಪ್ರತ್ಯೇಕವಾಗಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಮೂಲಕ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು.
ಸ್ವತ್ಛತೆಯೇ ಆರೋಗ್ಯದ ಮೂಲ ಮಂತ್ರ ಎಂಬುದನ್ನು ಪ್ರತಿಯೊಬ್ಬರೂ ಅರಿತು ಅದನ್ನು ಅಕ್ಷರಶಃ ಪಾಲಿಸಿದರೆ ನಿರೀಕ್ಷಿಸಿದಂತೆ ಆರೋಗ್ಯ ಪಡೆಯಲು ಸಾಧ್ಯವಿದೆ. ಸ್ವತ್ಛತೆ ಎಂಬುದು ಕೇವಲ ಅಭಿಯಾನ, ಸಪ್ತಾಹ, ಮಾಸಾ ಚರಣೆಯಂತಹ ಕಾರ್ಯಕ್ರಮ ಗಳಿಗೆ ಮಾತ್ರ ಸೀಮಿತವಾಗಬಾರದು.
ಬದಲಿಗೆ ಅದು ನಿತ್ಯದ ಜವಾಬ್ದಾರಿಯಾಗಬೇಕು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿಯಿಂದ ನಗರಸಭೆ ಪೌರಕಾರ್ಮಿಕರು, ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುವ ವಿವಿಧ ಇಲಾಖೆಗಳ ಅಧಿ ಕಾರಿಗಳು ಮತ್ತು ಸಿಬ್ಬಂದಿ, ನೌಕರರಿಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿಸಿದ ಪರೀಕ್ಷೆಗಳು, ಇತರೆ ವೈದ್ಯಕೀಯ ತಪಾಸಣೆ ಮಾಡಲಾಯಿತು.
ಜಿಲ್ಲಾಡಳಿತ ಭವನದ ಕಾರ್ಯನಿರ್ವಹಿಸುತ್ತಿರುವ 30ಕ್ಕೂ ಹೆಚ್ಚು ಇಲಾಖೆಗಳ 300ಕ್ಕೂ ಹೆಚ್ಚು ಅಧಿ ಕಾರಿಗಳು ಮತ್ತು ಸಿಬ್ಬಂದಿ ತಂಡಗಳಲ್ಲಿ ಸ್ವತ್ಛತಾ ಅಭಿಯಾನದಲ್ಲಿ ಭಾಗವಹಿಸಿ ಜಿಲ್ಲಾಡಳಿತ ಭವನದ ಆವರಣವನ್ನು ಸ್ವತ್ಛತೆ ಮಾಡಿ ಪ್ಲಾಸ್ಟಿಕ್, ಹಸಿ ಮತ್ತು ಒಣತ್ಯಾಜ್ಯ ಸಂಗ್ರಹಿಸುವ ಜೊತೆಗೆ ಆವರಣದಲ್ಲಿನ ಗಿಡಗಂಟಿಗಳನ್ನು ತೆರವು ಮಾಡಿದರು.
ಕಚೇರಿಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಿ
ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಒಳ್ಳೆಯ ನಿಸರ್ಗ ರಮಣೀಯ ವಾತಾವರಣದ ಅಗತ್ಯವಿದೆ. ಸ್ವತ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುವುದು ಪರಿಸ್ನೇಹಿ ವಾತಾವರಣಕ್ಕೆ ಸಹಕಾರಿಯಾಗುವುದರೊಂದಿಗೆ ಒತ್ತಡಗಳಿಂದಲೂ ಮುಕ್ತವಾಗಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ಜಿಲ್ಲಾಡಳಿತ ಭವನದ ಆವರಣ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಗಾಗ್ಗೆ ಸ್ವತ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದರೂ ಏಕ ಬಳಕೆಯ ಪ್ಲಾಸ್ಟಿಕ್ ಮತ್ತು ನೀರಿನ ಬಾಟಲಿಗಳಿಂದ ಹೆಚ್ಚು ತೊಂದರೆಯಾಗುತ್ತಿದೆ.
ಈ ನಿಟ್ಟಿನಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಮತ್ತು ನೀರಿನ ಬಾಟಲಿಗಳನ್ನು ಸರ್ಕಾರಿ ಕಚೇರಿಗಳಲ್ಲಿ ಸಂಪೂರ್ಣವಾಗಿ ಬಳಸದಿರಲು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು ಎಂದು ತಿಳಿಸಿದರು. ಮುಖ್ಯವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಏಕರೀತಿಯ ಪ್ಲಾಸ್ಟಿಕ್ ಮತ್ತು ಬಾಟಲಿ ಬಳಕೆ ನಿಷೇ ಧಿಸಿ ಶೀಘ್ರ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದು, ನೈರ್ಮಲಿÂàಕರಣದ ಭಾಗವಾಗಿ ಇದು ಸ್ವಾಗತಾರ್ಹ ಮತ್ತು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
“ಸ್ವಚ್ಛತೆ ಎನ್ನುವುದು ಒಂದು ಸಾಮಾಜಿಕ ಕಾರ್ಯಕ್ರಮವಾಗಬೇಕು. ಕೇಂದ್ರ ಸರ್ಕಾರದ ಕ್ಲೀನ್ ಇಂಡಿಯಾ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವೂ ಆಗಿದೆ. ಸ್ವತ್ಛತೆ ವಿಚಾರದಲ್ಲಿ ಎಲ್ಲರ ಕಣ್ತೆರೆಸುವಂತಹ ವಿಶಿಷ್ಟ, ವಿಭಿನ್ನ ಕಾರ್ಯಕ್ರಮವೂ ಆಗಿದೆ.” – ಪಿ.ಶಿವಶಂಕರ್, ಜಿಪಂ ಸಿಇಒ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.