ಬಿಸಿಯೂಟ ನೌಕರರು ಸುರಕ್ಷತೆಗೆ ಗಮನ ನೀಡಲಿ


Team Udayavani, Dec 23, 2019, 3:00 AM IST

bisiut

ಚಿಕ್ಕಬಳ್ಳಾಪುರ: ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ವೇಳೆ ಅಡುಗೆ ಸಿಬ್ಬಂದಿ ಹೆಚ್ಚು ಜಾಗರೂಕರಾಗಿ ಸುರಕ್ಷತೆ ಕಡೆಗೆ ಹೆಚ್ಚು ನಿಗಾ ವಹಿಸಬೇಕು ಎಂದು ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ ಬಿಸಿಯೂಟ ನೌಕರರಿಗೆ ಸಲಹೆ ನೀಡಿದರು. ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಗ್ಯಾಸ್‌ ಕಂಪನಿ, ಅಕ್ಷರ ದಾಸೋಹ ಯೋಜನೆಯಡಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೆ ಏರ್ಪಡಿಸಿದ್ದ 2 ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಆದ್ಯತೆ ನೀಡಿ: ಬಿಸಿಯೂಟ ತಯಾರಿಸುವ ವೇಳೆ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಅನೇಕ ಅವಘಡಗಳು ಸಂಭವಿಸಿ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಸುಟ್ಟು ಗಾಯಗಳಿಂದ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಅಡುಗೆ ಸಿಬ್ಬಂದಿ ಹೆಚ್ಚು ಜಾಗ್ರತೆ ವಹಿಸಿ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಿ ಅಡುಗೆ ಅನಿಲ ಸೋರಿಕೆ ಆಗದಂತೆ ಕಟ್ಟೆಚ್ಚರ ವಹಿಸಬೇಕೆಂದರು.

ಆಕಸ್ಮಿಕವಾಗಿ ನಡೆಯುವ ಘಟನೆಗಳಿಂದ ದೊಡ್ಡ ದುರಂತಗಳು ಸಂಭವಿಸಿ ಅಮಾಯಕರು ಬಲಿ ಆಗಬೇಕಾಗುತ್ತದೆ. ಹೀಗಾಗಿ ಅಡುಗೆ ಸಿಬ್ಬಂದಿ ಸ್ವಚ್ಛತೆ, ನೈರ್ಮಲ್ಯದ ಕಡೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಬೇಕು. ಅಡುಗೆ ಮನೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕೆಂದು ತಿಳಿಸಿದರು. ಶಿಕ್ಷಕರು ಶಾಲಾ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡಿದರೆ ಸಾಲದು, ಪೌಷ್ಟಿಕಾಂಶಯುಕ್ತ, ಉತ್ತಮ ಗುಣಮಟ್ಟದ ಬಿಸಿಯೂಟ ಸಿಗುವಂತೆ ನೋಡಿಕೊಳ್ಳುವ ಮೂಲಕ ತಾಲೂಕನ್ನು ಅಪೌಷ್ಟಿಕತೆ ಮುಕ್ತ ಮಾಡಬೇಕು ಎಂದರು.

ಕಾಳಜಿ ವಹಿಸಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಜತೆಗೆ ಸರ್ಕಾರ ಅಪೌಷ್ಟಿಕತೆ ದೂರ ಮಾಡಲು ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸಿ ಮಧ್ಯಾಹ್ನ ಮಕ್ಕಳು ಹಸಿವಿನಿಂದ ನರಳಬಾರದು ಎಂಬ ಉದ್ದೇಶದಿಂದ ಗುಣಮಟ್ಟದ ಆಹಾರ ಪೂರೈಸುತ್ತಿದೆ. ಅಕ್ಕಿ, ಬೇಳೆ ಸೇರಿದಂತೆ ವಿವಿಧ ಧಾನ್ಯ ಕಳಪೆ ಇರುವುದು ಕಂಡು ಬಂದರೆ ತಕ್ಷಣವೇ ಅಡುಗೆ ಸಿಬ್ಬಂದಿ ಸಂಬಂಧಿಸಿದ ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಅಡುಗೆ ಗುಣಮಟ್ಟದ ಬಗ್ಗೆ ಸಿಬ್ಬಂದಿ ಹೆಚ್ಚು ಕಾಳಜಿ ವಹಿಸಬೇಕೆಂದರು.

ಸಿಬ್ಬಂದಿ ಮೊದಲು ಊಟ ಮಾಡಲಿ: ಅಶುದ್ಧತೆಯಿಂದ ಹಲವು ಕಾಯಿಲೆಗಳು ಹರಡುತ್ತವೆ. ಹೀಗಾಗಿ ದಾಸ್ತಾನು ಹಾಗೂ ಅಡುಗೆ ಕೊಠಡಿ, ಅಡುಗೆ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಬಹುತೇಕ ಬಡವರ ಮಕ್ಕಳು ದಾಖಲಾಗುತ್ತಾರೆ. ಅವರನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ಜತೆಗೆ ಅವರ ಆರೋಗ್ಯ ಉತ್ತಮಪಡಿಸಲು ಮುಂದಾಗಬೇಕು. ಉತ್ತಮ ಗುಣಮಟ್ಟದ ತರಕಾರಿ, ಸೊಪ್ಪು ಬಳಸಬೇಕು. ಅಡುಗೆ ಸಿದ್ಧವಾದ ಬಳಿಕ ಮೊದಲು ಅಡುಗೆ ಸಿಬ್ಬಂದಿ ಊಟ ಮಾಡಿ ಆಹಾರ ಗುಣಮಟ್ಟ ಪರೀಕ್ಷಿಸಬೇಕು ಎಂದರು.

ಕಾರ್ಯಾಗಾರದಲ್ಲಿ ಮಾಜಿ ಶಾಸಕ ಎಂ.ಶಿವಾನಂದ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಲಪ್ಪ, ಕೊಂಡೇನಹಳ್ಳಿ ಗ್ರಾಪಂ ಅಧ್ಯಕ್ಷ ಶ್ರೀಧರ್‌, ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾಮಶೇಷಪ್ಪ, ಅಕ್ಷರ ದಾಸೋಹ ತಾಲೂಕು ಅಧಿಕಾರಿ ಲಲಿತಾ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಉಪಾಧ್ಯಕ್ಷೆ ಮುನಿಲಕ್ಷ್ಮಮ್ಮ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್‌.ಮಂಜುನಾಥ, ವಿವಿಧಡೆಗಳಿಂದ ಆಗಮಿಸಿದ್ದ ಬಿಸಿಯೂಟ ನೌಕರರು ಇದ್ದರು.

ಕನಿಷ್ಠ ವೇತನ ನೀಡಿ: ಕೇಂದ್ರ-ರಾಜ್ಯ ಸರ್ಕಾರಗಳು ಬಿಸಿಯೂಟ ನೌಕರರಿಗೆ ಪಿಂಚಣಿ, ಕನಿಷ್ಠ ವೇತನ ಜಾರಿಗೊಳಿಸುವ ಮೂಲಕ ನೌಕರರ ಸೇವೆ ಎತ್ತಿ ಹಿಡಿಯಬೇಕು. ನೌಕರರನ್ನು ಡಿ ಗ್ರೂಪ್‌ ನೌಕರರರೆಂದು ಪರಿಗಣಿಸಿ ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಭತ್ಯೆ ನೀಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಆಗ್ರಹಿಸಿದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.