ಭೌತಿಕ ಜಗತ್ತಿನಲ್ಲಿ ಭಾರತ ಉತ್ಕೃಷ್ಟವಾಗಲಿ: ಮೋಹನ್ ಭಾಗವತ್
ಮಾನವ ಅಭ್ಯುದಯ ವಿ.ವಿ. ಘಟಿಕೋತ್ಸವ
Team Udayavani, Jul 13, 2022, 11:37 PM IST
ಚಿಕ್ಕಬಳ್ಳಾಪುರ: ಆಧುನಿಕ ಜ್ಞಾನದ ಜತೆಗೆ ಪಾರಂಪರಿಕ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು ಭೌತಿಕ ಜಗತ್ತಿನಲ್ಲಿ ನಮ್ಮ ಭಾರತವನ್ನು ಉತ್ಕೃಷ್ಟ ಮಾಡಬೇಕು ಎಂದು ಅರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು.
ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಆಯೋಜಿಸಿದ್ದ ಮಾನವ ಅಭ್ಯುದಯ ವಿಶ್ವವಿದ್ಯಾನಿಲಯದ ಪ್ರಥಮ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಹಾಗೂ ಮತ್ತಿತರರು ಮಾಡಿದ ವಿಚಾರಮಂಥನದ ರೀತಿಯಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ. ದೇಶದ ಭವಿಷ್ಯ ವಾಗಿರುವ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿರುವ ಜ್ಞಾನವನ್ನು ಒಳ್ಳೆಯ ಸಮಾಜವನ್ನು ನಿರ್ಮಿಸಲು ವಿನಿಯೋಗಿಸಿ, ಪರೋಪಕಾರ ಮತ್ತು ಮಾನವೀಯ ಸೇವೆಯಿಂದ ದೇಶಕ್ಕೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದರು.
ಉತ್ಕೃಷ್ಟ ರಾಷ್ಟ್ರ ನಿರ್ಮಿಸಿ
ಗುರು ಪೂರ್ಣಿಮೆಯೆಂದು ಒಳ್ಳೆಯ ಸಂಸ್ಕಾರವನ್ನು ಪಡೆದು ಕೊಂಡು ಹೊರಹೊಮ್ಮುತ್ತಿರುವ ತಾವು ಮೊದಲು ವಿದ್ಯೆ ನೀಡಿದ ಗುರುಗಳನ್ನು ಗೌರವಿಸಿ, ಉತ್ಕೃಷ್ಟ ರಾಷ್ಟ್ರವನ್ನು ನಿರ್ಮಿಸಿ, ಮಾನವತ್ವವನ್ನು ಉತ್ಕೃಷ್ಟಗೊಳಿಸುವ ಕೆಲಸವನ್ನು ಮಾಡಬೇಕು. ಸತ್ಯ-ಅನುಕಂಪವನ್ನು ಮೈಗೂಡಿಸಿಕೊಂಡು ಚರಿತ್ರೆಯಲ್ಲಿ ಉಳಿದುಕೊಳ್ಳುವಂತಹ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದರು.
ಗೌರವ ಡಾಕ್ಟರೆಟ್
ಖ್ಯಾತ ಭೌತಶಾಸ್ತ್ರಜ್ಞ ಡಾ| ಆರ್. ಚಿದಂಬರಂ, ಇಸ್ರೋ ಮಾಜಿ ಮುಖ್ಯಸ್ಥ ಕೆ. ಕಸ್ತೂರಿ ರಂಗನ್, ಕ್ರಿಕೆಟಿಗ ಸುನಿಲ್ ಗಾವಸ್ಕರ್, ಪಂಡಿತ್ ವೆಂಕಟೇಶ್ ಕುಮಾರ್, ಶಿಕ್ಷಣ, ಆರೋಗ್ಯ ಕ್ಷೇತ್ರದ ಸಾಧಕ ಶ್ರೀನಿವಾಸ್ ಹಾಗೂ ಸಮಾಜ ಸೇವಕಿ ಪೂರ್ಣಿಮಾ ದೇವಿ ಬರ್ಮನ್ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.