ಆತ್ಮರಕ್ಷಣಾ ಕಲೆ ವಿದ್ಯಾರ್ಥಿನಿಯರಿಗೆ ಪ್ರೇರಣೆಯಾಗಲಿ


Team Udayavani, Mar 5, 2020, 3:00 AM IST

atmarakshana

ಗೌರಿಬಿದನೂರು: ರಕ್ಷಣೆಯ ದೃಷ್ಟಿ ಯಿಂದ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣಾ ಕಲಿಕೆ ತರಬೇತಿ ಹಾಗೂ ಪ್ರೇರಣೆ ಸಿಗುವಂತಹ ಕಾರ್ಯವನ್ನು ಮಾಡಿದ ಹಾಗೂ ಹೆಣ್ಣು ಮಕ್ಕಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇರುವ ಕಾಳಜಿ ಮಹತ್ವವಾದದ್ದು ಎಂದು ಆರಕ್ಷಕ ವೃತ್ತ ನಿರೀಕ್ಷಕ ಎಸ್‌.ರ ವಿ ಹೇಳಿದರು.

ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯರ ಆತ್ಮರಕ್ಷಣಾ ಕಲೆ ಮತ್ತು ಪ್ರದರ್ಶನ ಕಾರ್ಯಕ್ರಮದ ಅಂಗವಾಗಿ ಶಾಲಾ- ಕಾಲೇಜುಗಳಿಗೆ ತೆರಳಿ ಧನ್ಯವಾದ ಅರ್ಪಿಸುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರೆರೆದು ಮಾತನಾಡಿದರು.

ಮಹಿಳೆ ಅಬಲೆ ಅಲ್ಲ ಸಬಲೆ ಎಂಬುದನ್ನು ವಿದ್ಯಾರ್ಥಿನಿಯರು ಹಾಗೂ ಮಳೆಯರು ಅರಿತುಕೊಳ್ಳಬೇಕು. ಹೆಣ್ಣು ಮಕ್ಕಳ ಆತ್ಮ ರಕ್ಷಣೆಯ ದೃಷ್ಟಿ ಯಿಂದ  ವಿದ್ಯಾರ್ಥಿನಿಯರಿಗೆ ಪ್ರೇರಣೆಯಾಗುವಂತ ಆತ್ಮ ರಕ್ಷಣಾ ಕಲಿಕೆಯ ಮೂಲಕ ಸ್ಫೂರ್ತಿ ದೊರೆದಂತಾಗಿದೆ. ವಿದ್ಯಾರ್ಥಿನಿಯರು ನಿರಂತರವಾಗಿ ತಮ್ಮ ಪಠ್ಯದ ಜೊತೆಗೆ ಆತ್ಮರಕ್ಷಣಾ ಕಲಿಕೆ ಅಭ್ಯಾಸ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೆಣ್ಣು ಮಕ್ಕಳ ರಕ್ಷಣೆಗೆ ಪೊಲೀಸ್‌ ಇಲಾಖೆ ಬದ್ಧ: ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಹೆಚ್ಚಾಗುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೆಣ್ಣು ಮಕ್ಕಳು ಅಪರಿಚಿತರೊಂದಿಗೆ ಮಾತನಾಡಬಾರದು ಹಾಗೂ ನಿಮ್ಮ ಹಾವ-ಭಾವಗಳು ಸಹ ನಿಮ್ಮ ರಕ್ಷಣೆಯಲ್ಲಿ ಪ್ರಮುಖವಾಗಿದ್ದು ನಿಮ್ಮ ವರ್ತನೆಯನ್ನು ಹತೋಟಿಯಲಿಟ್ಟು ಕೊಳ್ಳಬೇಕು ಹಾಗೂ ನಿಮಗೆ ಯಾರಾದರೂ ಹಿಂಬಾಲಿಸುವುದು, ಶಾಲಾ-ಕಾಲೇಜುಗಳ ಬಳಿ ಚುಡಾ ಯಿಸುವುದನ್ನು ಮಾಡಿದರೆ ಶಿಕ್ಷಕರಿಗೆ ತಿಳಿಸಿ, ಯಾರು ನಿಮ್ಮ ಜೊತೆ ಅಸಭ್ಯವಾಗಿ ವರ್ತಿಸುತ್ತಾರೋ ಅಂಥವರಿಗೆ ಸರಿ ಯಾದ ಬುದ್ಧಿ ಕಲಿಸುತ್ತೇವೆ ಎಂದರು.

ಕಾರ್ಯಕ್ರಮ ಸಂಯೋಜಕ ಚರಣ್‌ ರೆಡ್ಡಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲಿಕೆ ಅತ್ಯಗತ್ಯವಾಗಿದ್ದು ಇದನ್ನು ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಕಲಿಸಬೇಕೆಂಬ ಮಹಾದಾಸೆ ಹೊಂದಿರುವ ಜಿಲ್ಲಾಧಿಕಾರಿ ಆರ್‌.ಲತಾ ಅವರು ನಾಲ್ಕು ದಿನಗಳ ಕಾಲ ಗೌರಿಬಿದನೂರಿನ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಯ ತರ ಬೇತಿ ಕೊಡಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಈ ಕಲಿಕೆ ಹೆಚ್ಚು ಉಪಯೋಗವಾಗಲಿದೆ ಎಂದು ತಿಳಿಸಿದರು. ಶಾಲಾ-ಕಾಲೇಜುಗಳ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುವ ಅಂಗವಾಗಿ ಇದರ ನೆನಪಿಗಾಗಿ ಸಸಿಯನ್ನು ನೆಟ್ಟು ನೀರುಣಿಸಿ ಚಾಲನೆ ನೀಡಿದರು.

ಸಸಿ ನೆಟ್ಟು ಕಾರ್ಯಕ್ರಮ: ನಗರದ ವಿವಿಧ ಶಾಲೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಇಒ ಕೃಷ್ಣಮೂರ್ತಿ, ರಾಯುಕ್ತರಾದ ಚಲಪತಿ, ಉಪ ತಹಶೀಲ್ದಾರ್‌ಗಳಾದ ಅಶ್ವಿ‌ನಿ, ಕಬೀರ್‌, ಟಿಪಿಒ ಹನುಮಂತರೆಡ್ಡಿ, ಬಿಸಿಎಂ ಅಧಿಕಾರಿ ನಾಗರಾಜು, ತರಬೇತುದಾರ ಚಂದ್ರಶೇಖರ್‌, ರಾಜಸ್ವ ನಿರೀಕ್ಷಕ ರವಿಕುಮಾರ್‌, ಎ ಖಾದರ್‌ ಹಾಗೂ ಇತರ ಅಧಿಕಾರಿಗಳು ಹಾಗೂ ಎಲ್ಲಾ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಇದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.