ರೇಷ್ಮೆ ಉದ್ಯಮ ಅಭಿವೃದ್ಧಿಗೆ ಪ್ಯಾಕೇಜ್‌ ಘೋಷಿಸಲಿ


Team Udayavani, Jan 31, 2021, 1:21 PM IST

Let’s announce a package for the development of the silk industry

ಚಿಕ್ಕಬಳ್ಳಾಪುರ: ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಕೇಂದ್ರದಲ್ಲಿ ವಿತ್ತ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿರುವ ಬಜೆಟ್‌ನಲ್ಲಿ ಮಿಲ್ಕ್ ಅಂಡ್‌ ಸಿಲ್ಕ್ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಅಥವಾ ಜಿಲ್ಲೆಯ ಅಭಿವೃದ್ಧಿಗೆ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪಿಸಲು ಘೋಷಣೆ ಮಾಡುವುರೇ ಎಂದು ಜಿಲ್ಲೆಯ ಜನ ನಿರೀಕ್ಷೆ ಹೊಂದಿದ್ದಾರೆ.

ನೀರಾವರಿ ಸೌಲಭ್ಯದಿಂದ ವಂಚಿತ: ರೇಷ್ಮೆ, ಹೈನುಗಾರಿಕೆ, ಹೂ ಹಣ್ಣು ತರಕಾರಿ ಉತ್ಪಾದನೆ ಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಜಿಲ್ಲೆ ಯಾವುದೇ ನದಿ ನಾಲೆಗಳಿಲ್ಲದೆ ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿದೆ. ಸತತ ಹೋರಾಟದ ಫಲವಾಗಿ ಈ ಭಾಗಕ್ಕೆ ಬೆಂಗಳೂರಿನ ತ್ಯಾಜ್ಯ ನೀರು ಸಂಸ್ಕರಿಸಿ ಹೆಚ್‌ಎನ್‌ ವ್ಯಾಲಿ ಯೋಜನೆಯ ಮೂಲಕ ಹರಿಸಲಾಗಿದೆ ಹೊರತುಪಡಿಸಿ ಈ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಕನಸಾಗಿಯೇ ಉಳಿದಿದೆ.

ಅನುದಾನ ನೀಡಲಿ: ಸಿಲಿಕಾನ್‌ ಸಿಟಿ ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಜಿಲ್ಲೆ ಯನ್ನು ಬೆಂಗಳೂರಿಗೆ ಪರ್ಯಾಯವಾಗಿಅಭಿವೃದ್ಧಿಗೊ ಳಿಸಲು ಅವಕಾಶಗಳಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನೀರಾವರಿ ಯೋಜನೆಗೆ ಎತ್ತಿನಹೊಳೆ ಸೇರಿಸಿ ವಿಶೇಷ ಅನುದಾನ ಜಾರಿಗೊಳಿಸುವ ಮೂಲಕ ಈ ಭಾಗದ ಹಲವು ವರ್ಷಗಳ ಕನಸನ್ನು ನನಸು ಮಾಡಬೇಕಾಗಿದೆ.

ಜಿಯೋ ಟ್ಯಾಗ್‌ ಮೂಲಕ ಸ್ಥಾನಮಾನ ನೀಡಲಿ: ರೇಷ್ಮೆ ಉತ್ಪಾದನೆ ಮಾಡುವ ಬೆಳೆಗಾ ರರು ಮತ್ತು ನೂಲು ಬಿಚ್ಚಾಣಿಕೆದಾರರು, ಹುರಿಕಾರರು, ನೇಕಾರರು ಒಳಗೊಂಡಂತೆ ರೇಷ್ಮೆ ಉದ್ದಿಮೆಯಲ್ಲಿ ತೊಡಗಿಸಿಕೊಂಡಿರುವ ವರ್ಗಕ್ಕೆ ಕೇಂದ್ರ ಸರ್ಕಾರದಿಂದ ವಿಶೇಷ ಪ್ಯಾಕೇಜ್‌ ನೀಡಿ ರೇಷ್ಮೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಉತ್ಪಾದನೆ ಆಗುವ ರೇಷ್ಮೆ ನೂಲಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದ್ದರೂ ಸಹ ಇಲ್ಲಿನ ರೇಷ್ಮೆಗೆ ಜಿಯೋ ಟ್ಯಾಗ್‌ ಮಾಡುವ ಮೂಲಕ ಸೂಕ್ತ ಸ್ಥಾನಮಾನ ಕಲ್ಪಿಸಬೇಕಾಗಿದೆ.

ರಫ್ತು ಮಾಡಲು ಅವಕಾಶ ಕಲ್ಪಿಸಲಿ: ಜಿಲ್ಲೆಯಲ್ಲಿ ಉತ್ಪಾದನೆ ಮಾಡುವ ಹೂ ಹಣ್ಣು ಮತ್ತು ತರಕಾರಿ (ಕೃಷಿ ಉತ್ಪನ್ನಗಳು ಸಹಿತ) ದೇಶ ವಿದೇಶಗಳಿಗೆ ರಫ್ತು ಮಾಡಲು ಸಕಲ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ವಿಶೇಷವಾಗಿ ಸುಮಾರು ವರ್ಷಗಳಿಂದ ಈ ಭಾಗದ ಜನರ ಬೇಡಿಕೆಯಾಗಿರುವ ಚಿಕ್ಕಬಳ್ಳಾಪುರ ಪುಟ್ಟಪರ್ತಿ ರೈಲ್ವೆ ಮಾರ್ಗವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒತ್ತು ನೀಡಬೇಕಾಗಿದೆ.

ನಂದಿಗಿರಿಧಾಮ ಅಭಿವೃದ್ಧಿಗೊಳಿಸಲಿ: ಕರ್ನಾಟಕದ ಊಟಿ ಎಂದು ಖ್ಯಾತಿ ಹೊಂದಿರುವ ಪ್ರಕೃತಿಯ ಸೊಬಗಿನ ಮೂಲಕ ದೇಶವಿದೇಶಗಳ ಪ್ರವಾಸಿಗರನ್ನು ಪರಿಸರ ಪ್ರೇಮಿಗಳನ್ನು ಕೈಬೀಸಿ ಕರೆಯುತ್ತಿರುವ ನಂದಿ ಗಿರಿಧಾಮವನ್ನು ಕೇಂದ್ರದ ಪ್ರವಾಸೋದ್ಯಮ ಇಲಾಖೆ ಮೂಲಕ ಅಭಿವೃದ್ಧಿಗೊಳಿಸಲು ವಿಶೇಷ ಪ್ಯಾಕೇಜ್‌ ನೀಡಲು ಒತ್ತಾಯ ಸಹ ಕೇಳಿ ಬರು ತ್ತಿದೆ. ರೈತರು ಉತ್ಪಾದಿಸುವ ಉತ್ಪನ್ನಗಳನ್ನು ಸಂರಕ್ಷಣೆ ಮಾಡಲು ಸಂಸ್ಕರಣಾ ಮತ್ತು ಶೀತಲ ಘಟಕ ಗಳನ್ನು ಸ್ಥಾಪಿಸಲು ಆದ್ಯತೆ ನೀಡಬೇಕಾಗಿದೆ.

ಇದನ್ನೂ ಓದಿ:ಸುತ್ತೂರು ಶ್ರೀಗಳನ್ನು ಸಿಎಂ ಮಾಡಿ!

150 ಟಿಎಂಸಿ ಬಯಲುಸೀಮೆಗೆ ಹರಿಸಲಿ: ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ರಾಷ್ಟ್ರೀಯ ನೀರಾವರಿ ಯೋಜನೆಯನ್ನು ಜಾರಿಗೊಳಿಸಿ ಪಶ್ಚಿಮವಾಹಿನಿ ನದಿಗಳು ಕೃಷ್ಣ, ಭದ್ರ, ಗೋದಾವರಿ ನದಿಗಳ ಮೂಲಕ ನೀರು ಹರಿಸಲು ಒತ್ತಾಯ ಕೇಳಿ ಬರುತ್ತಿದೆ. ಈ ಯೋಜನೆಯ ಮೂಲಕ 150 ಟಿಎಂಸಿ ನೀರು ಬಯಲುಸೀಮೆಯ ಪ್ರದೇಶಗಳಿಗೆ ಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

ಟೆಕ್ಸ್‌ ಟೈಲ್‌ ಪಾರ್ಕ್‌ ಸ್ಥಾಪಿಸಲಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೆಕ್ಸ್‌ ಟೈಲ್‌ ಪಾರ್ಕ್‌ ಜಾರಿಗೊಳಿಸುವ ಯೋಜನೆ ಕನಸಾಗಿಯೇ ಉಳಿದಿದ್ದು, ಕನಿಷ್ಟ ಈ ಭಾಗದ ಜನರ ಬೇಡಿಕೆ ಈಡೇರಿಸಲು ಸರ್ಕಾರ ಗಮನ ಹರಿಸಬೇಕಾಗಿದೆ. ರೇಷ್ಮೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಪ್ರಾಶಸ್ತ್ಯ ನೀಡಬೇಕಾಗಿದೆ.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.