ಕೃಷಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಲಿ
Team Udayavani, May 12, 2020, 10:15 AM IST
ಚಿಕ್ಕಬಳ್ಳಾಪುರ: ಕೊರೊನಾ ಲಾಕ್‌ಡೌನ್ ಪರಿಣಾಮ ಎಲ್ಲ ಕ್ಷೇತ್ರಗಳಿಗಿಂತ ಕೃಷಿ ವಲಯಕ್ಕೆ ಹೆಚ್ಚಿನ ಹೊಡೆದ ಬಿದ್ದಿದ್ದು, ರೈತಾಪಿ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೂಡಲೇ ಸರ್ಕಾರ ಕೃಷಿ ವಲಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯ ಕರ್ತರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕಚೇರಿ ಮುಂದೆ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸಿ ಬೆಲೆ ನಿಗದಿಗೊಳಿಸಬೇಕು, ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ರೈತರಿಗೆ ಕೃಷಿ ಸಾಲ ವಿಸ್ತರಿಸಿ ಸಾಲದ ಬಡ್ಡಿ ಮನ್ನಾಗೊಳಿಸ ಬೇಕು, ಪಡಿತರ ವಿತರಣೆ ಹೆಚ್ಚಿಸಿ ತಲಾ ಒಬ್ಬ ವ್ಯಕ್ತಿಗೆ ತಿಂಗಳಿಗೆ 15 ಕೆ.ಜಿ. ಅಕ್ಕಿ ನೀಡಬೇಕೆಂದು ಪ್ರಾಂತ ರೈತ ಸಂಘದ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.
ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪಮಾತನಾಡಿ, ಕೊರೊನಾ ಸಂಕಷ್ಟದಿಂದ ಎರಡು ತಿಂಗ ಳಿಂದ ಲಾಕ್‌ಡೌನ್ ಘೋಷಿಸಿರುವ ಸರ್ಕಾರ ರೈತರಿಗೆ, ಕೃಷಿಕರ ಸಮಸ್ಯೆ ಈಡೇರಿಸಲು ಗಂಭೀರ ಪ್ರಯತ್ನ ನಡೆಸಿಲ್ಲ. ಮುಂಗಾರು ಹಂಗಾಮು ಶುರುವಾಗಿರುವುದ ರಿಂದ ರೈತರಿಗೆ ಅಗತ್ಯ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲು ಕ್ರಮ ವಹಿಸಬೇಕು.
ಎಲ್ಲಾ ಕೃಷಿ ಪರಿಕರಗಳ ಮೇಲೆ ವಿಶೇಷ ರಿಯಾಯಿತಿ ಘೋಷಿಸಬೇಕು. ಪಶು ಆಹಾರ ಬೆಲೆ ಕಡಿತಗೊಳಿಸಬೇಕು, ರೈತಾಪಿ ಕೃಷಿ ಕೂಲಿ ಕಾರಕ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುದರ್ಶನ್, ಬಸವರಾಜ್, ನಾಗೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.