ಸರ್ಕಾರಿ ಶಾಲೆ ಉಳಿಸಲು ಶ್ರಮಿಸಲಿ
Team Udayavani, Dec 10, 2018, 3:33 PM IST
ಚಿಂತಾಮಣಿ: ಎಲ್ಲಿ ನೋಡಿದರೂ ಖಾಸಗಿ ಶಾಲೆಗಳು ತಲೆ ಎತ್ತುತ್ತಿದ್ದು, ಇವುಗಳ ಮಧ್ಯೆ ಸರ್ಕಾರಿ ಶಾಲೆಗಳು ಸರ್ಕಾರಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ಮುಚ್ಚುವ ಹಂತ ತಲುಪುತ್ತಿವೆ ಎಂದು ನಂದಮೂರಿ ಅಭಿಮಾನಿಗಳ ಸಂಘದ ನಿರ್ದೇಶಕ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಸಂಘದ ತಾಲೂಕು ಅಧ್ಯಕ್ಷ ಅಂಜಿನಿ ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಕಸಬಾ ಹೊಬಳಿಯ ಮುನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಂದ ಮೂರಿ ಯುವಸೇನಾ ಅಭಿಮಾನಿಗಳಿಂದ ಹಮ್ಮಿಕೊಂಡಿದ್ದ ಕ್ರೀಡಾ ಸಾಮಗ್ರಿಗಳ ವಿತರಣೆ ಹಾಗೂ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡಾ ಸಾಮಗ್ರಿ ವಿತರಣೆ: ಈಗಾಗಲೇ ನಂದಮೂರಿ ಯುವಸೇನೆ ಅಭಿಮಾನಿಗಳ ಸಂಘದಿಂದ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ, ಲೇಖನಿ ಸಾಮಗ್ರಿ, ಜೂನಿಯರ್ ಎನ್.ಟಿ.ಆರ್ ಅಭಿನಯದ ಆರವಿಂದ ಸಮೇತ ಚಲನಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಫ್ಯಾನ್ಸ್ ಶೋ ನಡೆಸಿ, ಅದರಿಂದ ಬಂದ ಉಳಿಕೆ ಹಣದಲ್ಲಿ ಮುನುಗನಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ, ವಾಲಿಬಾಲ್, ಟೆನಿಸ್ ಬಾಲ್, ಫುಟ್‌ಬಾಲ್, ಕ್ರಿಕೆಟ್ ಕಿಟ್ ಸೇರಿದಂತೆ ಹಲವು ಕ್ರೀಡಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು.
ಇದೇ ವೇಳೆ ಕನಕದಾಸ ಜಯತಿ ಆಚರಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಶಸ್ತಿ ಪತ್ರ ವಿತರಿಸಿದರು. ನಂದಮೂರಿ ಯುವಸೇನಾ ಅಭಿಮಾನಿಗಳ ಸಂಘದ ಅಧ್ಯಕ್ಷ ನಾಗೇಶ್ ಕುಮಾರ್. ಪ್ರ. ಕಾರ್ಯದರ್ಶಿ ಮುನಿಯಪ್ಪ, ಸಂ. ಕಾರ್ಯದರ್ಶಿ ಶ್ರೀನಿವಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.