ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
ಬಹುತೇಕ ಕಡೆ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ , ಒಗ್ಗಟ್ಟುಪ್ರದರ್ಶಿಸಿದರೆ ಗದ್ದುಗೆಗ
Team Udayavani, Oct 24, 2020, 3:38 PM IST
ಚಿಕ್ಕಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಉಪವಿಭಾಗಾಧಿಕಾರಿ ರಘುನಂದನ್ ಅವರು ವೇಳಾಪಟ್ಟಿ ಬಿಡುಗಡೆಮಾಡಿದ್ದಾರೆ. ಇದರಿಂದ ಸುಮಾರು ಒಂದೂವರೆ ವರ್ಷಗಳ ನಂತರ ನಗರಸಭಾ ಹಾಗೂ ಪುರಸಭಾ ಸದಸ್ಯರಿಗೆ ಅಧಿಕಾರ ಭಾಗ್ಯ ಒದಗಿ ಬರುವಂತಾಗಿದೆ.
ಶಿಡ್ಲಘಟ್ಟ ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅ.31 ರಂದು ಚುನಾವಣೆ ನಿಗದಿಯಾಗಿದ್ದು ಮಧ್ಯಾಹ್ನ 2ರಿಂದ 3 ರವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 5ರಿಂದ 5:15 ರವರೆಗೆ ನಾಮಪತ್ರಗಳ ಪರಿಶೀಲನೆ, 5:15 ರಿಂದ 5:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 5:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು, ಬಳಿಕ ಫಲಿತಾಂಶವನ್ನುಚುನಾವಣಾಧಿಕಾರಿಗಳುಘೋಷಣೆ ಮಾಡಲಿದ್ದಾರೆ.
ನಗರಸಭೆಯಲ್ಲಿ 31 ಸ್ಥಾನಗಳಿದ್ದು, ಕಾಂಗ್ರೆಸ್ 13, ಜೆಡಿಎಸ್ 10, ಪಕ್ಷೇತರ 4, ಬಿಜೆಪಿ 02 ಹಾಗೂ ಬಿಎಸ್ಪಿ 03 ಸದಸ್ಯರು ಚುನಾಯಿತರಾಗಿದ್ದು, ಪಕ್ಷೇತರ ಹಾಗೂ ಬಿಎಸ್ಪಿ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಈಗಾಗಲೇ ಕೆಲ ಪಕ್ಷೇತರ ಸದಸ್ಯರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿ ಕೊಂಡಿದ್ದು, ಕೊನೆಯ ಘಳಿಗೆಯಲ್ಲಿ ನಿರ್ಧಾರ ಬದಲಿಸುತ್ತಾರೆಯೇ? ಅಥವಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರಾ? ಎಂಬುದು ಕುತೂಹಲ ಕೆರಳಿಸಿದೆ.
ಗೌರಿಬಿದನೂರು ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ.01 ರಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು,
ಪೂರ್ವಾಹ್ನ 8ರಿಂದ 9 ರವರೆಗೆ ನಾಮಪತ್ರಗಳ ಸ್ವೀಕಾರ, ಪೂರ್ವಾಹ್ನ 11ರಿಂದ 11:15 ವರೆಗೆ ನಾಮಪತ್ರಗಳ ಪರಿಶೀಲನೆ, 11:15 ರಿಂದ 11:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 11:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು ಬಳಿಕ ಫಲಿತಾಂಶ ಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರಸಭೆಯ 31 ಸದಸ್ಯರ ಸ್ಥಾನಗಳ ಪೈಕಿ ಕಾಂಗ್ರೆಸ್ 15, ಪಕ್ಷೇತರ 01, ಜೆಡಿಎಸ್ 06, ಬಿಜೆಪಿ 03, ಹಾಗೂ ಪುಟ್ಟಸ್ವಾಮಿಗೌಡ ಬಣದ 6 ಸದಸ್ಯರು ಗೆಲುವು ಸಾಧಿಸಿದ್ದಾರೆ. ಶಾಸಕ ಎನ್.ಎಚ್. ಶಿವಶಂಕರ್‌ರೆಡ್ಡಿ ಅವರು ಮತ ಚಲಾಯಿಸಲಿರುವುದರಿಂದ ಕಾಂಗ್ರೆಸ್ ಪಕ್ಷದ ಸದಸ್ಯರು ಅಧಿಕಾರಕ್ಕೇರುವ ಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೊನೆ ಘಳಿಗೆಯಲ್ಲಿ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.
ಚಿಂತಾಮಣಿ ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ.1 ರಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿದೆ. ಅಪರಾಹ್ನ 2ರಿಂದ ಅಪರಾಹ್ನ 3 ರವರೆಗೆ ನಾಮಪತ್ರಗಳ ಸ್ವೀಕಾರ, ಅಪರಾಹ್ನ 5ರಿಂದ 5:15 ಗಂಟೆ ವರೆಗೆ ನಾಮಪತ್ರಗಳ ಪರಿಶೀಲನೆ, 5:15 ರಿಂದ 5:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. 5:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು ಬಳಿಕ ಫಲಿತಾಂಶಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರಸಭೆಯ 31 ಸದಸ್ಯರ ಸ್ಥಾನಗಳ ಪೈಕಿ ಜೆಡಿಎಸ್ 14, ಕಾಂಗ್ರೆಸ್ 01, ಮಾಜಿ ಶಾಸಕ ಸುಧಾಕರ್ ಬಣದ 14, ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದು ಇಲ್ಲಿಯೂ ಸಹ ಚುನಾವಣೆ ರಂಗೇರುವ ಸಾಧ್ಯತೆ ಹೆಚ್ಚಾಗಿದೆ.ಪಕ್ಷೇತರ ಮತಗಳು ನಿರ್ಣಾಯಕವಾಗಲಿದ್ದು, ಇಬ್ಬರು ಯಾವ ಕಡೆ ಒಲವು ವ್ಯಕ್ತಪಡಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.
ಚಿಕ್ಕಬಳ್ಳಾಪುರ: ಬಿಜೆಪಿಗೆ ಪ್ರತಿಷ್ಠೆ : ಜಿಲ್ಲೆಯ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅ.30 ರಂದು ಚುನಾವಣೆ ನಿಗದಿಯಾಗಿದ್ದು ಮಧ್ಯಾಹ್ನ 12ರಿಂದ ಮಧ್ಯಾಹ್ನ 1ರ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3ರಿಂದ 3:15 ರವರೆಗೆ ನಾಮಪತ್ರಗಳ ಪರಿಶೀಲನೆ, 3:15 ರಿಂದ 3:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3:30ರ ನಂತರ ಚುನಾವಣೆಪ್ರಕ್ರಿಯೆ ಮುಂದುವರಿಯಲಿದ್ದು,ಬಳಿಕ ಫಲಿತಾಂಶ ಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ) ಮೀಸಲಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ತಮ್ಮ ತಮ್ಮ ರಾಜಕೀಯ ಗಾಡ್ ಫಾದರ್‌ಗಳ ಮನವೊಲಿಸುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಮಹಿಳೆಯಿಂದ ಇದೀಗ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯಾಗಿದೆ. ನಗರಸಭೆಯಲ್ಲಿ ಕಾಂಗ್ರೆಸ್ 16, ಬಿಜೆಪಿ 09, ಪಕ್ಷೇತರ 04, ಜೆಡಿಎಸ್2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ರಾಜ್ಯ ಸರ್ಕಾರದಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಗರಸಭೆಯಲ್ಲಿ ಆಡಳಿತ ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ಗೆ ಚುಕ್ಕಾಣಿ ಸಾಧ್ಯತೆ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಒಗ್ಗಟ್ಟು ಪ್ರದರ್ಶನ ಮಾಡಿದರೆ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಹಾಗೂ ಗೌರಿಬಿದನೂರು ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬಹುದಾಗಿ ಅದೇ ರೀತಿ ಬಾಗೇಪಲ್ಲಿ ಪುರಸಭೆಯಲ್ಲಿ ಸಹ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಹಿಡಿಯುವ ಸಾಧ್ಯತೆ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ನಗರಸಭೆಯ ಚುನಾವಣೆಯಲ್ಲಿ ಮಾತ್ರ ರಂಗೇರಿದ್ದು ಇಲ್ಲಿ ಆಪರೇಷನ್ ಕಮಲ ನಡೆಯುವುದೇ? ಎಂಬ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.