ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ ಕಾಪಾಡಿ
Team Udayavani, Jan 27, 2019, 9:16 AM IST
ಗೌರಿಬಿದನೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ. ಜೊತೆಗೆ ರುಚಿಕರ ಹಾಗೂ ಶುಚಿತ್ವದ ಆಹಾರ ನೀಡಬೇಕೆಂದು ಸಂಸದ ವೀರಪ್ಪಮೊಯ್ಲಿ ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ನಂತರ ಅನ್ನ ಸಾಂಬರ್ ಮತ್ತು ಕೇಸರಿ ಬಾಸ್ ಸೇವಿಸಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಬಡವರ ಹಸಿವನ್ನು ನೀಗಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವುಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯು ಉಪಯುಕ್ತ ಮತ್ತು ಜನಪರವಾದ ಕಾರ್ಯಗಳಾಗಿವೆ.
ವಿವಿಧ ಕಾರ್ಯಗಳ ನಿಮಿತ್ತ ನಗರಕ್ಕೆ ಆಗಮಿಸುವ ಗ್ರಾಮೀಣ ಭಾಗದ ಜನತೆ, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಇಂದಿರಾ ಕ್ಯಾಂಟೀನ್‌ನಿಂದ ಪ್ರಯೋಜನವಾಗಲಿದೆ.ಅಧಿಕಾರಿಗಳು ಇದರ ಗುಣಮಟ್ಟವನ್ನು ಕಾಪಾಡುವ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.
ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಹಸಿದವನಿಗೆ ಮಾತ್ರ ಅನ್ನದ ಬೆಲೆ ತಿಳಿಯುತ್ತದೆ. ಅಂತಹ ಜನರ ಪಾಲಿಗೆ ಇಂದಿರಾ ಕ್ಯಾಂಟೀನ್ ವರದಾನವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿÇ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಜಿÇ್ಲಾ ನಗರ ಯೋಜನಾ ಅಭಿವೃದ್ಧಿ ಕೋಶದ ನಿರ್ದೇಶಕ ಎನ್.ಭಾಸ್ಕರ್, ತಹಶೀಲ್ದಾರ್ ಎಚ್.ಶ್ರೀನಿವಾಸ್, ನಗರಸಭೆ ಆಯುಕ್ತ ವಿ.ಮುನಿಶ್ಯಾಮಪ್ಪ, ನಗರಸಭೆ ಅಧ್ಯಕ್ಷ ಶಫೀಕ್ ಖಾನ್, ಮುಖಂಡರಾದ ಕೆ.ಎನ್.ಕೇಶವರೆಡ್ಡಿ, ಪ್ರಕಾಶರೆಡ್ಡಿ, ಜಿ.ಬಾಲಾಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.