ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ: ಶಾಸಕ
Team Udayavani, Jan 14, 2020, 3:00 AM IST
ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ಶಾಸಕ ವಿ.ಮುನಿಯಪ್ಪ ಸೂಚಿಸಿದರು. ತಾಲೂಕಿನ ಈ.ತಿಮ್ಮಸಂದ್ರ ಗ್ರಾಪಂ ಕೇಂದ್ರದಲ್ಲಿ ಎಸ್‌ಸಿಪಿ ಯೋಜನೆಯಡಿ 6 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಅನುದಾನ ಹಿಂತೆಗೆತ: ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಹೀಗಾಗಿ ಕ್ಷೇತ್ರದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ಈ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿದ್ದ ಅನುದಾನವನ್ನು ಹಿಂತೆಗೆದುಕೊಂಡಿದ್ದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಿದೆ. ಲೋಕೋಪಯೋಗಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡಲು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.
ರಸ್ತೆ ಕಾಮಗಾರಿಗೆ ಒತ್ತು: ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕರಾಗಿ ಮತ್ತು ಸಚಿವರಾಗಿ ಸೇವೆ ಸಲ್ಲಿಸುವ ಭಾಗ್ಯ ಲಭಿಸಿದ ಪರಿಣಾಮ ಬಹುತೇಕ ಗ್ರಾಮಗಳಿಗೆ ವಿವಿಧ ಗ್ರಾಮಗಳಿಗೆ ರಸ್ತೆ ಸೌಲಭ್ಯ ಮತ್ತು ಸಂಪರ್ಕ ರಸ್ತೆ ಕಲ್ಪಿಸಿದ್ದು ಪ್ರಸಕ್ತ ಸಾಲಿನಲ್ಲಿ ಮಿತ ಅನುದಾನದಲ್ಲಿ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದ್ದು ಲೋಕೋಪಯೋಗಿ ಇಲಾಖೆಯಿಂದ ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುತ್ತಿಗೆದಾರರು ಗುಣಮಟ್ಟ ಕಾಪಾಡಿಕೊಳ್ಳಬೇಕು. ಸಾರ್ವಜನಿಕರಿಂದ ಕಳಪೆ ಕಾಮಗಾರಿ ಕುರಿತು ದೂರು ಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಶಾಸಕರು ಎಚ್ಚರಿಕೆ ನೀಡಿದರು.
ರಸ್ತೆ ಗುಣಮಟ್ಟ ಪರಿಶೀಲನೆ: ಗ್ರಾಪಂ ಮಟ್ಟದಲ್ಲಿ ನರೇಗಾ ಯೋಜನೆಯಡಿ ಕ್ಷೇತ್ರದ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದ್ದು ಅದರ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಕೆಲ ಗ್ರಾಪಂಗಳಲ್ಲಿ ಯೋಜನೆಯನ್ನು ಸದುಪಯೋಗ ಮಾಡಿಕೊಂಡು ಮಾದರಿ ಕಾಮಗಾರಿ ನಡೆಸಿದ್ದು ಇನ್ನೂ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ವ್ಯಾಪಕ ಪ್ರಚಾರದ ಕೊರತೆ ಮತ್ತು ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡಿಲ್ಲ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ಅಭಿವೃದ್ಧಿಗೆ ಮನ್ನಣೆ: ಕ್ಷೇತ್ರದಲ್ಲಿ ಅತಿ ಶೀಘ್ರದಲ್ಲಿ ಗ್ರಾಪಂ ಚುನಾವಣೆಗಳು ನಡೆಯಲಿದೆ. ಗ್ರಾಪಂ ಮಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಗುರುತಿಸಿ ಮತದಾರರು ಮತ ಚಲಾಯಿಸಲಿದ್ದಾರೆ. ಸದಸ್ಯರು ಯಾವ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಿದ್ದಾರೆ ಎಂಬುದನ್ನು ನೋಡಿ ಮತ ಚಲಾಯಿಸುತ್ತಾರೆ. ಸದಸ್ಯರಿಗೆ ತಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳು ಶ್ರೀರಕ್ಷೆಯಾಗಲಿದೆ ಎಂದರು.
ಲೋಕೋಪಯೋಗಿ ಇಲಾಖೆ ಎಇಇ ವಿನೋದ್, ಜೆಇ ದಿನೇಶ್, ಈ.ತಿಮ್ಮಸಂದ್ರ ಗ್ರಾಪಂ ಅಧ್ಯಕ್ಷ ಎಂ.ವಿ.ದೇವರಾಜ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ತನ್ವೀರ್ ಅಹಮದ್, ಜಿಪಂ ಮಾಜಿ ಸದಸ್ಯ ಕದಿರಪ್ಪ, ತಾಪಂ ಮಾಜಿ ಸದಸ್ಯ ಶ್ರೀನಾಥ್, ಗುತ್ತಿಗೆದಾರ ಆಂಜಿನೇಯರೆಡ್ಡಿ, ಗ್ರಾಪಂ ಸದಸ್ಯರಾದ ಜಯರಾಂರೆಡ್ಡಿ, ಗಂಗಾಧರ, ವೆಂಕಟರವಣಪ್ಪ, ವೆಂಕಟರಮಣರೆಡ್ಡಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.