ದೇಶದ ಬಹುಸಂಖ್ಯಾತರಿಗೆ ಸ್ವಾತಂತ್ರ್ಯ ಬಂದಿಲ್ಲ: ಮುನಿಯಪ್ಪ
Team Udayavani, Aug 28, 2019, 3:00 AM IST
ಚಿಕ್ಕಬಳ್ಳಾಪುರ: ದೇಶದಲ್ಲಿ ಬಹುಸಂಖ್ಯಾತದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ವಿಷಾದಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಎಸ್‌ಪಿ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಸಮಾವೇಶದಲ್ಲಿ ಮಾತನಾಡಿದರು.
ನಿರುದ್ಯೋಗ ಸಮಸ್ಯೆ ತಾಂಡವ: ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ ಕಳೆದರೂ ಇಂದಿಗೂ ಸಮಾಜದಲ್ಲಿ ಜಾತಿ ತಾರತಮ್ಯ, ಬಡತನ, ಹಸಿವು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿವೆ. ದೇಶಕ್ಕೆ ಬಂದಿರುವ ಸ್ವಾತಂತ್ರ್ಯ ಕೇವಲ ಕಾರ್ಪೋರೆಟ್ ಕಂಪನಿಗಳನ್ನು ನಡೆಸುವ ಬಂಡವಾಳ ಶಾಹಿಗಳಿಗೆ, ಶ್ರೀಮಂತರಿಗೆ ಮಾತ್ರವಿದೆ ಎಂದು ದೂರಿದರು. ದೇಶದಲ್ಲಿ ಬಹುಸಂಖ್ಯಾತರು ಶೋಷಿತ ಸಮುದಾಯಗಳಾಗಿದ್ದು, ಅವರು ಇನ್ನೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಸಬಲರಾಗಿಲ್ಲ. ದುಡಿಯುವ ಜನರಿಗೆ ಉದ್ಯೋಗ ಸಿಗುತ್ತಿಲ್ಲ. ಕೈಗಾರಿಕೆಗಳು ಆರ್ಥಿಕ ಸಂಕಷ್ಟಗಳಿಂದ ಮುಚ್ಚುತ್ತಿವೆ ಎಂದರು.
ಸಂವಿಧಾನ ಆಶಯ ಈಡೇರಿಸಿ: ಅಂಬೇಡ್ಕರ್ ಹುಟ್ಟದೇ ಹೋಗಿದ್ದರೆ ಈ ದೇಶದಲ್ಲಿ ಮೋದಿ, ದೇವೇಗೌಡ ಪ್ರಧಾನಿ ಆಗುತ್ತಿರಲಿಲ್ಲ. ದೇಶದಲ್ಲಿ ಸಾಮಾನತೆ, ಸಾಮಾರಸ್ಯ, ಸೋದರತ್ವ ಕಾಪಾಡುವ ಸಂವಿಧಾನಕ್ಕೆ ಕುತ್ತು ಬಂದಿದೆ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಕೆಲಸವನ್ನು ಮನುವಾದಿ ಸರ್ಕಾರಗಳು ಮಾಡುತ್ತಿವೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಡಿ.ಬಸವರಾಜ್ ಮಾತನಾಡಿ, ಅಂಬೇಡ್ಕರ್ ಆಶಯದಂತೆ ರಾಜ್ಯಾಂಗದ ಅಧಿಕಾರ ಬಹುಸಂಖ್ಯಾತರ ಕೈಗೆ ಬರಬೇಕಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಜನ ವಿರೋಧಿ ಅವಕಾಶವಾದಿ ರಾಜಕಾರಣದಲ್ಲಿ ತೊಡಗಿದ್ದು, ಬಿಎಸ್‌ಪಿಯನ್ನು ಜಿಲ್ಲಾದ್ಯಂತ ಸಂಘಟಿಸಬೇಕೆಂದರು.
ವೇದಿಕೆಯಲ್ಲಿ ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಕೃಷ್ಣಮೂರ್ತಿ, ರಾಜ್ಯ ಸಮಿತಿ ಸದಸ್ಯ ಪಿ.ವಿ.ನಾಗಪ್ಪ, ಮುಖಂಡರಾದ ಮುನಿಕೃಷ್ಣ, ರಾಜಶೇಖರ್, ವಿ.ವೆಂಕಟೇಶ್ ಸೇರಿದಂತೆ ಇತ್ತೀಚೆಗೆ ಶಿಡ್ಲಘಟ್ಟದಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ನೂತನ ನಗರಸಭಾ ಸದಸ್ಯರು ಹಾಜರಿದ್ದರು.
ಬಿಎಸ್ಪಿ ಜಿಲ್ಲಾಧ್ಯಕ್ಷರಾಗಿ ಅಪ್ಸರ್‌ಪಾಷಾ ಆಯ್ಕೆ: ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ವೇಳೆ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರಾಗಿ ಅಪ್ಸರ್‌ಪಾಷಾ ಆಯ್ಕೆಗೊಂಡರು. ಜಿಲ್ಲಾ ಸಂಯೋಜಕರಾಗಿ ಮುನಿಕೃಷ್ಣಪ್ಪ, ಸೋಮಶೇಖರ್, ಸೋದರತ್ವ ಸಮಿತಿ ಜಿಲ್ಲಾಧ್ಯಕ್ಷರಾಗಿ ಮೌಲಾ, ಜಿಲ್ಲಾ ಉಪಾಧ್ಯಕ್ಷರಾಗಿ ವೆಂಕಟೇಶ್, ದ್ಯಾವಪ್ಪ, ಜಿಲ್ಲಾ ಕಾರ್ಯದರ್ಶಿಯಾಗಿ ಮೂರ್ತಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಾಜಶೇಖರ್, ಶಿಡ್ಲಘಟ್ಟ ತಾಲೂಕು ಅಧ್ಯಕ್ಷರಾಗಿ ಫಯಾಜ್ ಆಯ್ಕೆಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.