ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ


Team Udayavani, Sep 22, 2021, 4:27 PM IST

ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟಿಸಿ, ಬಲವರ್ಧನೆ ಮಾಡಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದಿಂದ ಗೆಲುವು ಸಾಧಿಸಿ, ಮತ್ತೊಮ್ಮೆ ಎಚ್‌ .ಡಿ.ಕುಮಾರಸ್ವಾಮಿ ಅವರು ಸಿಎಂ ಆಗಲಿದ್ದಾರೆ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜೆಡಿಎಸ್‌ ಕಾರ್ಯಾಲಯದಲ್ಲಿ ಜಿಲ್ಲಾ ಪದಾಧಿ ಕಾರಿಗಳ ಆಯ್ಕೆ ಸಭೆಯಲ್ಲಿ ಮಾತ ನಾಡಿ, ಕಾಂಗ್ರೆಸ್‌, ಬಿಜೆಪಿ ಜನರ ವಿಶ್ವಾಸ ಕಳೆದು ಕೊಂಡಿವೆ. ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷಗಳನ್ನು ಬಲಿಷ್ಠಗೊಳಿಸುವುದು ಅನಿವಾರ್ಯ ವಾಗಿದೆ. ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್‌ ಅಧಿ ಕಾರಕ್ಕೆ ತರುವ ಸಲುವಾಗಿ ನಿರಂತರವಾಗಿ ಪಕ್ಷದ ಮುಖಂಡರು, ಕಾರ್ಯ ಕರ್ತರ ಸಭೆ ನಡೆಸಲಾ ಗುತ್ತಿದೆ. 2023ಕ್ಕೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ಪುನರುಚ್ಚಿಸಿದರು.

ಸ್ಪಷ್ಟ ಬಹುಮತ ಬರದಿದ್ರೆ ನಿವೃತ್ತಿ: ರಾಜ್ಯದಲ್ಲಿ ಕೇವಲ 30-40 ಸೀಟ್‌ ಪಡೆದುಕೊಂಡು ಸರ್ಕಾರ ರಚನೆಯಲ್ಲಿ ಕಿಂಗ್‌ ಮೇಕರ್‌ ಆಗುವು ದಿಲ್ಲ, ಏಕಾಂಗಿಯಾಗಿ ಸ್ಪರ್ಧೆ ಮಾಡಿ ಸ್ಪಷ್ಟ ಬಹುಮತದೊಂದಿಗೆ ಅಧಿ ಕಾರ ನಡೆಸಲು ಪ್ರಯತ್ನ ಮಾಡುತ್ತೇನೆ, ನೆರೆಯ ತಮಿಳು ನಾಡು, ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಸದೃಢವಾಗಿ ಬೆಳೆದಿವೆ. ಈ ಬಾರಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ ಬರದಿದ್ದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ರಾಜ ಕೀಯವಾಗಿ ನಿವೃತ್ತಿ ಹೊಂದಲು ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಮನವಿಗೆ ಸ್ಪಂದಿಸಿದ ಕ್ರೀಡಾ ಸಚಿವ :ಮಾಸಾಶನ ಜಾರಿಗೆ ಆದೇಶ

ಪಟ್ಟಿ ಸಿದ್ಧತೆ: ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ. ಮುನೇಗೌಡ ಮಾತನಾಡಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ, ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರು, ಕಾರ್ಯಕರ್ತರ ಸಹಕಾರದೊಂ ದಿಗೆ ಪಕ್ಷ ಸಂಘಟನೆ ಮಾಡಲು ಈಗಾಗಲೇ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. ಜೊತೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾ ಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸದಸ್ಯತ್ವ ಮಾಡಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮುಖಂಡ ನಾಗರಾಜ್‌ರೆಡ್ಡಿ ಮಾತನಾಡಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 25 ಸಾವಿರ ಜನರಿಗೆ ಸದಸ್ಯತ್ವ ನೀಡುವ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನಗರಸಭೆ ಉಪಾಧ್ಯಕ್ಷೆ ವೀಣಾರಾಮು, ಯುವ ಘಟಕದ ಅಧ್ಯಕ್ಷರಾಗಿ ರಘುನಾಥ್‌ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು. ಸಭೆಯಲ್ಲಿ ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯ ದರ್ಶಿ ಬಾಲಕುಂಟಹಳ್ಳಿ ಮುನಿಯಪ್ಪ, ಚಿಕ್ಕ ಬಳ್ಳಾಪುರ ನಗರಸಭೆ ಉಪಾಧ್ಯಕ್ಷೆ ವೀಣಾ ರಾಮು, ಸದಸ್ಯ ಮಟ್ಟಮ್ಮಪ್ಪ, ಚಿಕ್ಕಬಳ್ಳಾಪುರ ತಾಲೂಕು ಜೆಡಿಎಸ್‌ ಅಧ್ಯಕ್ಷ ಮುನಿರಾಜು, ಉಪಾಧ್ಯಕ್ಷ ಬನ್ನಿಕುಪ್ಪೆ ವೆಂಕಟೇಶ್‌, ಮಹಿಳಾ ಘಟಕದ ಅಧ್ಯಕ್ಷೆ ಅಣ್ಯಮ್ಮ, ಬಾಗೇಪಲ್ಲಿ ತಾಲೂಕು ಜೆಡಿಎಸ್‌ ಕಾರ್ಯಾಧ್ಯಕ್ಷ ನೂರುಲ್ಲಾ ಉಪಸ್ಥಿತರಿದ್ದರು.

ಬಾಗೇಪಲ್ಲಿ ಕ್ಷೇತ್ರದ ಜೆಡಿಎಸ್‌ಅಭ್ಯರ್ಥಿ ನಾನೇ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು ನನಗೆ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ, ಶತಾಯಗತಾಯವಾಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇನೆ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಪರೋಕ್ಷವಾಗಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ವಿಧಾನಪರಿಷತ್‌ ಸದಸ್ಯ ರಮೇಶ್‌ ಗೌಡ ವಿರುದ್ಧ ಮುಖಂಡ ಡಿ.ಜೆ.ನಾಗರಾಜರೆಡ್ಡಿ ಅಸಮಾಧಾನ ಹೊರಹಾಕಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪದಾಧಿ ಕಾರಿಗಳ ಪಟ್ಟಿ ಸೆ.30ರೊಳಗೆ ಸಲ್ಲಿಸದಿದ್ದರೇ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಕುಮಾರಸ್ವಾಮಿಯವರಿಗೆ ತಿಳಿಸಿ ದ್ದೇನೆ. ಹೀಗಾಗಿ ಅಲ್ಲಿಯವರೆಗೂ ಸಹಕರಿಸಬೇಕು.
-ಕೆ.ಎಂ.ಮುನೇಗೌಡ,
ಜೆಡಿಎಸ್‌ ಜಿಲ್ಲಾಧ್ಯಕ್ಷ

 

 

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.