ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಶಿವಕುಮಾರ್‌ ಸಲಹೆ

Team Udayavani, Aug 17, 2021, 3:42 PM IST

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತರಬೇಕೆಂದು ಜಿಪಂ ಉಪ ಕಾರ್ಯದರ್ಶಿ ಬಿ. ಶಿವಕುಮಾರ್‌ ಸಲಹೆ ನೀಡಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳು ಸಂಘಟಿತರಾಗಿ ಮೊದಲು ಗ್ರಾಪಂ ಮೂಲಕ ಉದ್ಯೋಗ ಚೀಟಿ ಪಡೆದುಕೊಂಡು, ನೋಂದಣಿ ಮಾಡಿಸಬೇಕು. 256 ಮಾದರಿಯ ಕಾಮಗಾರಿ ಮಾಡಿ, ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಗ್ರಾಮದಲ್ಲಿ ಉತ್ತಮ ವಾತಾವರಣಸೃಷ್ಟಿಸಲು ಅವಕಾಶಗಳಿವೆ ಎಂದು ವಿವರಿಸಿದರು.

ವಿವಿಧ ಕಾಮಗಾರಿಗಳು: ನರೇಗಾ ಯೋಜನೆ ಮೂಲಕ ಈಗಾಗಲೇ ಶಿಡ್ಲಘಟ್ಟ ತಾಲೂಕು ಸಹಿತ ಜಿಲ್ಲೆಯಲ್ಲಿ ಮಾದರಿ ಸರ್ಕಾರಿ ಶಾಲೆಗಳು,
ಅಂಗನವಾಡಿ ಕೇಂದ್ರ, ಮಳೆ ನೀರು ಸಂರಕ್ಷಣೆ ಮಾಡಲು ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ಶಾಲಾ ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸಲು ಕಾಂಪೌಂಡ್‌ ನಿರ್ಮಾಣ, ಅಂರ್ತಜಲ ಮಟ್ಟವನ್ನು ವೃದ್ಧಿಗೊಳಿಸಲು ಗೋಕುಂಟೆ, ಕಲ್ಯಾಣಿ, ಕೆರೆ ಅಭಿವೃದ್ಧಿಗೊಳಿಸುವ ಜೊತೆಗೆ ಬಹುಕಮಾನ್‌ ಚೆಕ್‌ಡ್ಯಾಂ,ಕಾಲುವೆ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ತಾಂತ್ರಿಕ ತೊಂದರೆ ಇದ್ರೆಕರೆ ಮಾಡಿ:ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗಾಗಿ ಅನೇಕ ಯೋಜನೆ ಜಾರಿಗೊಳಿಸಿದೆ. ನರೇಗಾ ಮೂಲಕ ಕೆಲಸವನ್ನು ಮಾಡಲು ಗ್ರಾಪಂನಿಂದ ಏನಾದರೂ ತೊಂದರೆಯಾಗುತ್ತಿದ್ದರೆ ಅಥವಾ ತಾಂತ್ರಿಕ ದೋಷಗಳ ನೆಪದಲ್ಲಿ ಅನಗತ್ಯವಾಗಿ ಸಹಕರಿಸದಿದ್ದಲ್ಲಿ ನೇರವಾಗಿ ತಮ್ಮ ಮೊಬೈಲ್‌ ಸಂಖ್ಯೆಗಳಿಗೆಕರೆ ಮಾಡಿ ಹೇಳಿದರು.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧವಾಗಿದೆ: ಪ್ರಹ್ಲಾದ ಜೋಶಿ

ಎಲ್ಲಾ ರೀತಿಯ ನೆರವು: ನಾವು ತಕ್ಷಣ ತಮ್ಮ ದೂರುಗಳಿಗೆ ಸ್ಪಂದಿಸಿ ಸರ್ಕಾರದ ಯೋಜನೆಯ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಇಲಾಖೆಯ ಅಧಿಕಾರಿಗಳಿಂದ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು.

ಅನೇಕ ಅವಕಾಶಗಳು: ಉದ್ಯೋಗಖಾತ್ರಿ ಯೋಜನೆ ಮೂಲಕ ಅನೇಕ ಕಾಮಗಾರಿ ನಡೆಸಲು ಮಹಿಳಾ ಸ್ವಸಹಾಯ ಸಂಘಗಳಿಗೆ ಅವಕಾಶಗಳಿವೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೃಷಿ ಚಟುವಟಿಕೆ ಅಥವಾ ವೈಯಕ್ತಿಕ ಕಾಮಗಾರಿ ನಡೆಸಲು ಸಹ ಅವಕಾಶಗಳಿದೆ. ವಿಶೇಷವಾಗಿ ಅಪ್ಪಳ, ಗೃಹ ಬಳಕೆಗಳ ವಸ್ತುಗಳ ತಯಾರಿಕೆ, ಇನ್ನಿತರೆ ಆದಾಯೋತ್ಪನ್ನ ಚಟುವಟಿಕೆ ನಡೆಸಲು ಜಿಪಂ, ತಾಪಂ ಹಾಗೂ
ಗ್ರಾಪನಿಂದ ಎಲ್ಲಾ ರೀತಿಯ ಮಾರ್ಗದರ್ಶನ ನೀಡುತ್ತೇವೆ ಎಂದು ವಿವರಿಸಿದರು.

ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ: ರಾಜ್ಯದ ನಾನಾ ಭಾಗಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮ ನೈರ್ಮಲ್ಯ ಕಾಪಾಡುವ ಕೆಲಸ ಮಾಡಿ, ಗ್ರಾಮವನ್ನು ಸ್ವತ್ಛ ಹಾಗೂ ಸುಂದರವಾಗಿಡುವ ಜೊತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ಮಾಡಲು ಸಹ ಅವಕಾಶಗಳಿವೆ ಎಂದು ವಿವರಿಸಿದರು.

ಶುಲ್ಕ ಪಾವತಿಸಿ: ಪ್ರತಿಯೊಂದು ಮನೆಗೆ ತಲಾ 30 ರೂ. ತೆರಿಗೆವಸೂಲಿ ಮಾಡಲುಅವಕಾಶ ಕಲ್ಪಿಸಲಾಗಿದೆ. ನಾಗರಿಕರು ಸಹ ತ್ಯಾಜ್ಯ ವಿಲೇವಾರಿ ಮಾಡಲು ಸಹಕರಿಸಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಭರಿಸಲು ಗ್ರಾಮೀಣ ಪ್ರದೇಶವನ್ನು ಸ್ವತ್ಛವಾಗಿಡಲು ಸಹಕರಿಸಬೇಕು ಎಂದು ವಿವರಿಸಿದರು. ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಪ್ಪ, ಎನ್‌ಆರ್‌ಎಲ್‌ಎಂ ಯೋಜನೆ ಸಲಹೆಗಾರ ರಾಮಸ್ವಾಮಿ, ಡಿಎಂಐಎಸ್‌ ಮುಖಂಡ ಮಧು, ಐ.ಇ.ಸಿ ಸಂಯೋಜಕ ಪ್ರಶಾಂತ್‌, ಎನ್‌ಆರ್‌ಎಲ್‌ ಎಂ ಜಿಲ್ಲಾ ಸಂಯೋಜಕ ಬಿರಾದರ್‌, ತಾಪಂನ ಕನಕಮ್ಮ, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸದಸ್ಯರು ಉಪಸ್ಥಿತರಿದ್ದರು

ಸಂಘದ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೌಲಭ್ಯಗಳ ಮಾಹಿತಿ: ಚಂದ್ರಕಾಂತ್‌
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಾರಿಗೊಳಿಸುವಯೋಜನೆಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರ ವಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿ ನರೇಗಾ ಮತ್ತು ಸ್ವತ್ಛಭಾರತ ಮಿಷನ್‌, ಇನ್ನಿತರೆ ಯೋಜನೆಗಳ ಸೌಲಭ್ಯಗಳ
ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ತಾಪಂ ಇಒ ಚಂದ್ರಕಾಂತ್‌ ಹೇಳಿದರು.

ತಾಲೂಕು ಕಚೇರಿಯ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಗ್ರಾಪಂಗಳಲ್ಲಿ ಉದ್ಯೋಗವನ್ನು ಬೇಕೆಂದು ಬರುವರಿಗೆ ಕಡ್ಡಾಯವಾಗಿ ಉದ್ಯೋಗ ಚೀಟಿಯನ್ನು ನೀಡಲು ಸೂಚನೆ ನೀಡಲಾಗಿದೆ.

ಮಹಿಳೆಯರು ಕೌಶಲ್ಯವನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಗ್ರಾಪಂನಲ್ಲಿ ಉದ್ಯೋಗ ಚೀಟಿ ಮತ್ತು ಕಾಮಗಾರಿ ನಡೆಸಲು ಆಗುತ್ತಿರುವ ತೊಂದರೆಯನ್ನು ಜಿಪಂ ಉಪ ಕಾರ್ಯದರ್ಶಿ ಮತ್ತು ತಾಪಂ ಇಒ ಗಮನಕ್ಕೆ ತಂದು ಪರಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಪ್ರತಿಯೊಂದು ಹಂತದಲ್ಲಿ ಅಗತ್ಯ ಸಹಕಾರ ಮತ್ತು ನೆರವು ನೀಡುವುದಾಗಿ ಭರವಸೆ ನೀಡಿ, ತಮ್ಮ ಮೊಬೈಲ್‌ ಸಂಖ್ಯೆಗಳನ್ನು ನೀಡಿ ಕರೆ ಮಾಡಿ ಎಂದರು

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.