ಮೇನಕಾರಿಂದ ಕೋಮು ಸೌಹಾರ್ದತೆಗೆ ಧಕ್ಕೆ
Team Udayavani, Apr 14, 2019, 3:00 AM IST
ಬಾಗೇಪಲ್ಲಿ: ಮುಸ್ಲಿಮರು ತಮಗೆ ಮತ ಹಾಕದಿದ್ದರೆ ಅವರ ಕೆಲಸ ಮಾಡಲು ಯೋಚನೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಸುಲ್ತಾನ್‌ಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೇನಕಾಗಾಂಧಿ ಮುಸ್ಲಿಮರಿಗೆ ಬೆದರಿಕೆ ಹಾಕಿರುವುದು ಖಂಡನೀಯ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಎಂ.ವೀರಪ್ಪಮೊಯ್ಲಿ ಪುತ್ರಿ ರಷ್ಮಿ ಮೊಯ್ಲಿ ಹೇಳಿದರು.
ಪಟ್ಟಣದಲ್ಲಿ ಶನಿವಾರ ಮನೆ ಮನೆಗೂ ತೆರಳಿ ಪ್ರಚಾರ ಮಾಡಿ ಮಾತನಾಡಿದ ಅವರು, ಮೇನಕಾಗಾಂಧಿಯವರ ಹೇಳಿಕೆ ಕೇಳಿ ಬೇಸರವಾಗಿದೆ. ಕೇಂದ್ರ ಸಚಿವೆಯಂತಹ ಉನ್ನತ ಸ್ಥಾನದಲ್ಲಿರುವ ಅವರು ಇಂತಹ ಹೇಳಿಕೆ ನೀಡುವುದರಿಂದ ದೇಶದಲ್ಲಿ ಕೋಮು ಸೌಹಾರ್ದತೆ ಕೆಡುತ್ತದೆ ಎಂದರು.
ಮೋದಿ ಸರ್ಕಾರದಲ್ಲಿ ಇಂತಹ ಬೆದರಿಕೆ ಸಾಮಾನ್ಯವಾಗಿವೆ. ಈ ರೀತಿ ಬೆದರಿಕೆ ಹಾಕಿದವರನ್ನು ಚುನಾವಣೆಯಲ್ಲಿ ಸೋಲಿಸಲೇಬೇಕಾಗಿದೆ. ವಾಯುಸೇನೆ ಪಾಕಿಸ್ತಾನದ ಬಾಲಕೋಟ್‌ನ ಉಗ್ರರ ಶಿಬಿರಗಳ ಮೇಲೆ ಸೈನಿಕರ ನಡೆಸಿದ ಪರಾಕ್ರಮವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಬಿಜೆಪಿಯವರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಾಗಿ ಸೇನೆಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಂದು ಆರೋಪಿಸಿದರು. ಇದಕ್ಕೂ ಮೊದಲು ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಚಾರಕ್ಕೆ ಚಾಲನೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ,ಪುರಸಭೆ ಮಾಜಿ ಅಧ್ಯಕ್ಷೆ ಮಮತ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಪಾವಜೇನಹಳ್ಳಿ ನಾಗರಾಜರೆಡ್ಡಿ, ಮಹಿಳಾ ಘಟಕ ಕಾಂಗ್ರೆಸ್ ಅಧ್ಯಕ್ಷೆ ಟಿ.ವಿ.ಸುಮಂಗಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರಬೇಗಂ, ಪುರಸಭೆ ಮಾಜಿ ಸದಸ್ಯೆ ಶಬಾನ, ಯುವ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್, ಗ್ರಾಪಂ ಮಾಜಿ ಸದಸ್ಯ ಎಂ.ಎನ್.ವೆಂಕಟೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.