ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹ
Team Udayavani, May 22, 2020, 6:24 AM IST
ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಅಗ್ರಹಾರ ಕೆರೆಗೆ ಹರಿದಿರುವ ಎಚ್.ಎನ್.ವ್ಯಾಲಿ ಯೋಜನೆಯ ವೀಕ್ಷಣೆಗೆ ಆಗಮಿಸಿದ್ದ ಕಾನೂನು ಸಚಿವ ಮಾಧುಸ್ವಾಮಿಗೆ ಕೆರೆ ಒತ್ತುವರಿಯ ಬಗ್ಗೆ ಮನವಿ ಸಲ್ಲಿಸಲು ಹೋದ ರೈತ ಮಹಿಳೆಯ ಮೇಲೆ ದರ್ಪ ತೋರಿಸಿ ಅಸಂವಿಧಾನಿಕ ಪದ ಬಳಕೆ ಮಾಡಿರುವುದು ಖಂಡನೀಯ ಎಂದು ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ಗುರುವಾರ ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕಾನೂನು ಸಚಿವರಾಗಿ ದರ್ಪ ತೋರಿರುವುದು ಅವರಿಗೆ ಶೋಭೆ ತರುವುದಿಲ್ಲ. ಮಾಧುಸ್ವಾಮಿಯವರ ಮಾತುಗಳಿಂದ ಬಿಜೆಪಿ ಸಂಸ್ಕೃತಿಯ ಅಸಲಿ ಮುಖವಾಡ ಮತ್ತೂಮ್ಮೆ ಹೊರಬಿದ್ದಿದೆ ಎಂದರು.
ಸಚಿವರ ಮಾತು ರೈತ ಸಮುದಾಯ ಹಾಗೂ ಮಹಿಳೆಯರಿಗೆ ಮಾಡಿದ ಅವಮಾನವಾಗಿದ್ದು ಈ ಕೂಡಲೇ ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವಿಧಾನಸಭೆಯಲ್ಲಿ ತಾವೊ ಬ್ಬನೇ ಪ್ರಾಮಾಣಿಕ ಎನ್ನುವಂತೆ ಏರು ಧ್ವನಿಯಲ್ಲಿ ಅಬ್ಬರಿಸುವ ಮಾಧುಸ್ವಾಮಿಯವರೇ ಇದೇನಾ ನೀವು ರೈತ ಮಹಿಳೆಗೆ ನೀಡುವ ಗೌರವ ಎಂದು ಕಿಡಿ ಕಾರಿದರು. ಮಾಧುಸ್ವಾಮಿ ಅವರನ್ನು ಮಂತ್ರಿಮಂಡಲದಿಂದ ವಜಾ ಮಾಡುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ, ಎನ್‌ಎಸ್‌ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣ, ಮುಖಂಡರಾದ ಕುಬೇರ್ ಅಚ್ಚು, ನಾರಾಯಣಸ್ವಾಮಿ, ವೇಣುಗೋಪಾಲ, ವೆಂಕಟೇಶ್, ಅನಿಲ, ಮಹಮ್ಮದ್ ಹಮೀಮ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.