ಸರ್ಕಾರಿ ಆಸ್ತಿ ಕಬಳಿಸಿದ್ದರೆ ತೆರವು ಕಾರ್ಯ ಚುರುಕುಗೊಳಿಸಿ


Team Udayavani, Aug 21, 2022, 3:30 PM IST

tdy-5

ಚಿಂತಾಮಣಿ: ಸ್ಮಶಾನ, ಗುಂಡುತೋಪು, ಗೋಮಾಳ ಇನ್ನಿತರ ಸಾರ್ವಜನಿಕ ಆಸ್ತಿ ಅಕ್ರಮವಾಗಿ ಕಬಳಿಕೆ ಮಾಡಿದ್ದರೆ ಜಿಲ್ಲಾ ಮತ್ತು ತಾಲೂಕು ಆಡಳಿತ ತೆರವು ಕಾರ್ಯ ಚುರುಕುಗೊಳಿಸಬೇಕು ಎಂದು ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ನಾಗರಾಜು ಸೂಚಿಸಿದರು.

ತಾಲೂಕಿನ ಕೈವಾರ ಹೋಬಳಿಯ ಅಟ್ಟೂರು ಗ್ರಾಮದಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತವು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ “ಗ್ರಾಮ ವಾಸ್ತವ್ಯ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡವರಿಗೆ, ರೈತರಿಗೆ ಸರ್ಕಾರಿ ಸೌಲಭ್ಯ ತಲುಪಬೇಕು. ಆ ನಿಟ್ಟಿನಲ್ಲಿ ಸರ್ಕಾರ ರೂಪಿಸಿರುವ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಸಹಕಾರಿಯಾಗಿದೆ. ಅದನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪಹಣಿ ತಿದ್ದುಪಡಿ: ಜಿಲ್ಲಾಧಿಕಾರಿ ಎನ್‌. ಎಂ.ನಾಗರಾಜ್‌ ಮಾತನಾಡಿ, ರೈತರಿಗೆ ಭೂ ಹಕ್ಕು ಮತ್ತು ಮಾಹಿತಿಗೆ ಪಹಣಿ ಅಗತ್ಯವಾಗಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಕಂದಾಯ ಇಲಾಖೆ ಅಧಿಕಾರಿಗಳು ಖುದ್ದು ಮನೆಗೆ ಭೇಟಿ ನೀಡಿ, ರೈತರ ಪಹಣಿ ಸರಿಪಡಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಅವಕಾಶ ಬಳಸಿಕೊಳ್ಳಿ ಎಂದು ತಿಳಿಸಿದರು.

ಸಾರ್ವಜನಿಕರಲ್ಲಿ ಜಾಗೃತಿ: ಕಂದಾಯ ಇಲಾಖೆ ಯಿಂದ ದುರ್ಬಲರಿಗೆ, ವೃದ್ಧರಿಗೆ, ದಿವ್ಯಾಂಗರಿಗೆ, ವಸತಿ ರಹಿತರಿಗೆ ವಸತಿ, ನಿವೇಶನ ಸೇರಿ ಸರ್ಕಾರದ ಸೌಲಭ್ಯಗಳನ್ನು ಗ್ರಾಮ ವಾಸ್ತವ್ಯದ ಮೂಲಕ ಯಶಸ್ವಿಯಾಗಿ ಅರ್ಹರಿಗೆ ನೀಡಲಾಗುತ್ತಿದೆ. ಈ ಕುರಿತು ಎಲ್ಲಾ ಇಲಾಖೆ ಕಾರ್ಯಕ್ರಮಗಳ ಕುರಿತು ಮಳಿಗೆಗಳನ್ನು ಸ್ಥಾಪಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ರೈತರು ಸಾವಯವ ಪದ್ಧತಿಯ ಕೃಷಿ ಅಳವಡಿಸಿಕೊಳ್ಳಬೇಕು. ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ, ಗ್ರಾಮದಲ್ಲಿರುವ ಶಾಲಾ ಕೊಠಡಿ, ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ ಶೀಘ್ರ ಬಗೆಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಕೋರಿದರು. ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಹೇಳಿದರು.

ಪರಿಸರ ಕಾಳಜಿ ಬಗ್ಗೆ ಜಾಗೃತಿ: ನಂತರ ಗರ್ಭಿಣಿಯರಿಗೆ ಸೀಮಂತ ಕಾರ್ಯ ನಡೆಯಿತು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ, ಹಕ್ಕುಪತ್ರ ವಿತರಿಸಲಾಯಿತು. ಸಚಿವರು, ಶಾಸಕ ಕೃಷ್ಣಾರೆಡ್ಡಿ, ಜಿಲ್ಲಾಧಿಕಾರಿ ಅವರನ್ನು ಅಟ್ಟೂರು ಗ್ರಾಮದ ಪ್ರವೇಶ ರಸ್ತೆಯಲ್ಲಿ ಮಹಿಳೆಯರು ಆರತಿ ಬೆಳಗುವ ಮೂಲಕ ಸ್ವಾಗತಿಸಿದರು. ಗ್ರಾಮದಲ್ಲಿ ತಮಟೆ ವಾದನ, ತಳಿರು ತೋರಣ ಕಟ್ಟಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಮೊದಲಿಗೆ ಗ್ರಾಮದ ಲಕ್ಷ್ಮೀನರಸಿಂಹಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಆ ನಂತರ ಗ್ರಾಮಸ್ಥರಿಗೆ ಸಸಿ ವಿತರಿಸಲಾಯಿತು. ಜೊತೆಗೆ ಸಸಿ ನೆಟ್ಟು ಮರ ಬೆಳೆಸುವಿಕೆಯ ಮಹತ್ವ, ಪರಿಸರ ಕಾಳಜಿ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಎಸಿ ಡಾ.ಜಿ.ಸಂತೋಷ್‌ಕುಮಾರ್‌, ತಹಶೀ ಲ್ದಾರ್‌ ಹನುಮಂತರಾಯಪ್ಪ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ, ಅಟ್ಟೂರು ಗ್ರಾಪಂ ಅಧ್ಯಕ್ಷ ಮಂಜುನಾಥ್‌, ಮುಖಂಡರಾದ ನರಸಿಂಹಮೂರ್ತಿ, ವೆಂಕಟೇಶ, ಗೋವಿಂದ, ರೇಷ್ಮೆ ಬೆಳೆಗಾರರ ಸಹಕಾರ ಸಂಘದ ನಾಗರಾಜು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.