ಸಚಿವದ್ವಯರ ಕಿತ್ತಾಟ: ಜಿಲ್ಲೆಗೆ ಕಾಲಿಡದ ಶ್ರೀರಾಮಲು

ಜಿಲ್ಲೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸದ ಆರೋಗ್ಯ ಸಚಿವರು

Team Udayavani, Apr 18, 2020, 3:22 PM IST

ಸಚಿವದ್ವಯರ ಕಿತ್ತಾಟ: ಜಿಲ್ಲೆಗೆ ಕಾಲಿಡದ ಶ್ರೀರಾಮಲು

ಚಿಕ್ಕಬಳ್ಳಾಪುರ: ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಾಗೆ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಆರೋಗ್ಯ ಸಚಿವರ ನಡುವಿನ ಕಿತ್ತಾಟ, ವೈಮನಸ್ಸಿಗೆ ಈಗ ಬರ ಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆ ಬಲಿಪಶು ಆಗುತ್ತಿದೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಹೌದು, ಜಿಲ್ಲೆಯಲ್ಲಿ ಕೋವಿಡ್ -19 ಅಟ್ಟಹಾಸ ಮೆರೆದು ಈಗಾಗಲೇ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ. ಜಿಲ್ಲೆಯ ಗೌರಿಬಿದನೂರಿಗೆ ಸೀಮಿತವಾಗಿದ್ದ ಕೊರೊನಾ ಈಗ ಜಿಲ್ಲಾ ಕೇಂದ್ರಕ್ಕೂ ಹಬ್ಬಿದೆ. ದಿನದಿಂದ ದಿನಕ್ಕೆ ಸೋಂಕು ದಟ್ಟವಾಗಿ ಹರಡುತ್ತಿದೆ. ಆದರೆ ಜಿಲ್ಲೆಯ ಆರೋಗ್ಯ ಇಲಾಖೆ ಸ್ಥಿತಿಗತಿಗಳನ್ನು ವಿಚಾರಿಸಬೇಕಿದ್ದ ಆರೋಗ್ಯ ಸಚಿವರು ಜಿಲ್ಲೆಗೆ ಕಾಲಿಡುತ್ತಿಲ್ಲ.

ಪ್ರಗತಿ ಪರಿಶೀಲನೆ ನಡೆಸಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮಲು ನಡುವಿನ ಮುಸುಕಿನ ಗುದ್ದಾಟ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಕೋವಿಡ್ -19 ಸಂಕಷ್ಟ ಆರಂಭವಾಗಿ ಎರಡು ತಿಂಗಳು ಕಳೆದರೂ ಇದುವರೆಗೂ ಆರೋಗ್ಯ ಇಲಾಖೆ ಹೊಣೆ ಹೊತ್ತಿರುವ ಶ್ರೀರಾಮಲು ಜಿಲ್ಲೆಗೆ ಆಗಮಿಸಿ ಇಲಾಖೆಯ ಪ್ರಗತಿ ಪರಿಶೀಲನೆ ಜೊತೆಗೆ ಇಲಾಖೆಯ ಆಗುಹೋಗಗಳ ಬಗ್ಗೆ ಚರ್ಚೆ ನಡೆಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಗುರುವಾರವಷ್ಟೆ ಜಿಲ್ಲಾಸ್ಪತ್ರೆಯ ಸರ್ಜನ್‌ ಡಾ.ಅನಿಲ್‌ ಕುಮಾರ್‌ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದಾರೆ.

ವೆಂಟಿಲೇಟರ್‌ಗಳ ಕೊರತೆ: ಜಿಲ್ಲೆಗೆ ಅವಶ್ಯಕವಾದ 10 ವೆಂಟಿಲೇಟರ್‌ಗಳಿಗೆ ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿದರೂ ಇದುವರೆಗೂ ಪೂರೈಕೆ ಆಗಿಲ್ಲ. ಐಸಿಯು ಘಟಕಗಳ ಸ್ಥಾಪನೆಗೆ ನೆರವು ಬೇಕಿದೆ. ಜೊತೆಗೆ ಕೊರೊನಾ ಸೋಂಕಿ ತರ ಪೈಕಿ 8 ಮಂದಿಯನ್ನು ಗುಣಮುಖ ಪಡಿಸುವಲ್ಲಿ ಇಲ್ಲಿನ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ ಸಾಕಷ್ಟು ಶ್ರಮಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ, ವೈದ್ಯರ ಹಾಗೂ ಸಿಬ್ಬಂದಿಯಲ್ಲಿ ಆತ್ಮಸ್ಥೆರ್ಯ ತುಂಬಬೇಕಿದ್ದ ಆರೋಗ್ಯ ಸಚಿವರು ವೈದ್ಯಕೀಯ ಶಿಕ್ಷಣ ಸಚಿವರೊಂದಿಗಿನ ವೈಮನಸ್ಸಿನಿಂದ ಜಿಲ್ಲೆಗೆ ಆಗಮಿಸದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ.

2 ಬಾರಿ ರಾಮುಲು ಸಭೆ ಮುಂದೂಡಿಕೆ
ಕಳೆದ ಮಾ.24 ರಂದು ಸಚಿವ ಬಿ.ಶ್ರೀರಾಮಲು ಜಿಲ್ಲೆಯ ಪ್ರವಾಸ ನಿಗದಿಯಾಗಿತ್ತು. ದಿನವಿಡೀ ಅಧಿಕಾರಿಗಳು ಸಚಿವರ ಆಗಮನಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಕಾದು ಕುಳಿತಿದ್ದರು. ಆದರೆ ದಿಢಿರನೇ ಸಭೆ ರದ್ದಾಯಿತು. ಅದೇ ರೀತಿ ಮಾ.25 ರಂದು ಮಧ್ಯಾಹ್ನ 3 ಗಂಟೆಗೆ ಸಚಿವರ ಪ್ರವಾಸ ನಿಗದಿಯಾಗಿ ಕೊನೆ ಕ್ಷಣದಲ್ಲಿ ಪ್ರವಾಸ ಮೊಟಕುಗೊಳಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.