ಸಚಿವ ಕೆ ಸುಧಾಕರ್ ಪತ್ನಿ, ಮಗಳಿಗೂ ಕೋವಿಡ್ ಸೋಂಕು ದೃಢ: ಸಚಿವರ ವರದಿ ನೆಗೆಟಿವ್
Team Udayavani, Jun 23, 2020, 8:21 AM IST
ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರ ತಂದೆಗೆ ಕೋವಿಡ್ 19 ಪಾಸಿಟಿವ್ ಬಂದ ನಂತರ ಇದೀಗ ಸಚಿವರ ಪತ್ನಿ ಮತ್ತು ಮಗಳಿಗೂ ಕೋವಿಡ್ 19 ಸೋಂಕು ದೃಢವಾಗಿದೆ.
ಸಚಿವ ಕೆ ಸುಧಾಕರ್ ಸ್ವತಃ ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.
ಸುಧಾಕರ್ ಅವರ ತಂದೆ ಪಿ ಎನ್ ಕೇಶವರೆಡ್ಡಿಯವರಿಗೆ ಅನಾರೋಗ್ಯ ಕಂಡು ಬಂದ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕೋವಿಡ್ ಪರೀಕ್ಷೆ ನಡೆಸಿದ್ದು, ಅವರಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.
ಇಂದು ಸಚಿವ ಸುಧಾಕರ್ ಮತ್ತು ಪತ್ನಿ ಮಕ್ಕಳ ಕೋವಿಡ್ ವರದಿ ಬಂದಿದ್ದು, ಸುಧಾಕರ್ ಅವರ ಪತ್ನಿ ಮತ್ತು ಮಗಳಿಗೆ ಸೋಂಕು ಪಾಸಿಟಿವ್ ಆಗಿದೆ. ಸುಧಾಕರ್ ಮತ್ತು ಇಬ್ಬರು ಗಂಡು ಮಕ್ಕಳ ವರದಿ ನೆಗಟಿವ್ ಬಂದಿದೆ. ಎಲ್ಲರ ಒಳಿತಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದು ಸಚಿವರು ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.