ರೇಷ್ಮೆ, ದ್ರಾಕ್ಷಿ ಬೆಳೆಗಾರರಿಗೆ ತಪ್ಪಿದ ಪ್ಯಾಕೇಜ್
Team Udayavani, May 7, 2020, 3:14 PM IST
ಚಿಕ್ಕಬಳ್ಳಾಪುರ: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕೃಷಿ, ಕೂಲಿ ಕಾರ್ಮಿಕರಿಗೆ, ನೇಕಾರರಿಗೆ, ಆಟೋ, ಟ್ಯಾಕ್ಸಿ ಹಾಗೂ ಮಡಿವಾಳ ಮತ್ತು ಸವಿತಾ ಸಮಾಜಕ್ಕೆ ಆರ್ಥಿಕ ನೆರವಿನ ಜೊತೆಗೆ ವಿವಿಧ ರಿಯಾಯಿತಿ ಘೋಷಿಸುವ 1,610 ಕೋಟಿ ವಿಶೇಷ ಪ್ಯಾಕೇಜ್ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಜಿಲ್ಲೆಯ ರೇಷ್ಮೆ ಹಾಗೂ ದ್ರಾಕ್ಷಿ ಬೆಳೆಗಾರರನ್ನು ಪ್ಯಾಕೇಜ್ನಡಿ ಘೋಷಣೆ ಮಾಡದಿರುವುದು ಜಿಲ್ಲೆಯ ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೇ
ವಲ ಒಂದು ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಹೂವು ಬೆಳೆ ಗಾರರಿಗೆ 25 ಸಾವಿರ ರೂ, ಆರ್ಥಿಕ ನೆರವು ಘೋಷಣೆ ಮಾಡಿರುವುದು ಚಿಕ್ಕಬಳ್ಳಾಪುರ ತಾಲೂಕಿನ ರೈತರಿಗೆ ಮಾತ್ರ ತುಸು ಸಮಾಧಾನ ತಂದರೂ ಸಾವಿ ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ರೇಷ್ಮೆ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ನಡಿ ಪರಿಹಾರ ಘೋಷಣೆ ಮಾಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ದ್ರಾಕ್ಷಿ ಹಾಗೂ ರೇಷ್ಮೆ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಆದರೆ ಕೊರೊನಾ ಸಂಕಷ್ಟದಿಂದ ಈ ಬೆಳೆಗಾರರಿಗೆ ಮಾರುಕಟ್ಟೆ ಇಲ್ಲದೇ ತೀವ್ರ ಆರ್ಥಿಕ ನಷ್ಟಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗೆ ಕೆಲ ದ್ರಾಕ್ಷಿ ಬೆಳೆಗಾರರು ಬೆಲೆ ಸಿಗದೇ ದಿಕ್ಕೆಟ್ಟು ಬೆಳೆದ ದ್ರಾಕ್ಷಿ ಯನ್ನು ತಿಪ್ಪೆಗೆ ಎಸೆದಿದ್ದಾರೆ. ಆದರೆ ವಿಶೇಷ ಪ್ಯಾಕೇಜ್ ಘೋಷಿಸಿರುವ ಸಿಎಂ ಯಡಿಯೂರಪ್ಪ ದ್ರಾಕ್ಷಿ ಬೆಳೆಗಾರ ರನ್ನು ಮರೆತಿರುವುದು ಜಿಲ್ಲೆಯ ದ್ರಾಕ್ಷಿ ಬೆಳೆಗಾರರಲ್ಲಿ
ಆಕ್ರೋಶಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿರುವ ವಿಶೇಷ ಪ್ಯಾಕೇಜ್ ಸ್ವಾಗರ್ತಾಹವಾದರೂ ಜಿಲ್ಲೆಯ ರೇಷ್ಮೆ ಹಾಗೂ ದ್ರಾಕ್ಷಿ ಬೆಳೆಗಾರರನ್ನು ಕೈ ಬಿಟ್ಟಿರು ವುದು ತುಂಬ ಬೇಸರದ ಸಂಗತಿ. ಸರ್ಕಾರ ಕೂಡಲೇ ಜಿಲ್ಲೆಯ ದ್ರಾಕ್ಷಿ ಹಾಗೂ ರೇಷ್ಮೆ ಬೆಳೆ ಗಾರರನ್ನು ಪ್ಯಾಕೇಜ್ ವ್ಯಾಪ್ತಿಗೆ ಸೇರಿಸಬೇಕು.
● ಬಿ.ಎನ್.ಮುನಿಕೃಷ್ಣಪ್ಪ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.