ಬಿಜೆಪಿ ಸೇರುವುದಿಲ್ಲ ಜೆಡಿಎಸ್ ಪಕ್ಷವೇ ನನ್ನ ಅಂತಿಮ ಆಯ್ಕೆ: ಶಾಸಕ ಜೆಕೆ ಕೃಷ್ಣಾರೆಡ್ಡಿ


Team Udayavani, Oct 22, 2022, 7:47 PM IST

ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ ಜೆಡಿಎಸ್ ಪಕ್ಷವೇ ನನ್ನ ಅಂತಿಮ ಆಯ್ಕೆ : ಶಾಸಕ ಜೆಕೆ ಕೃಷ್ಣಾರೆಡ್ಡಿ

ಚಿಕ್ಕಬಳ್ಳಾಪುರ: ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕನಾದ ನನ್ನನು ವಿಧಾನಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ಕಲ್ಪಿಸಿದೆ ಜೊತೆಗೆ ಮಾಜಿ ಪ್ರಧಾನಮಂತ್ರಿ ಹೆಚ್‍ಡಿ ದೇವೇಗೌಡ ಮತ್ತು ಕುಮಾರಣ್ಣ ಅವರು ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುತ್ತಿದ್ದಾರೆ ಹೀಗಿರುವಾಗ ಬಿಜೆಪಿ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಇದು ಕೇವಲ ವಿರೋಧ ಪಕ್ಷಗಳ ಪಿತೂರಿ ಅಷ್ಟೆ ಎಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಕೆ ಕೃಷ್ಣಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು, ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡು ಕಳೆದ 9 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ ಜನರ ಅಪೇಕ್ಷೆಯಂತೆ ಜನಪರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ ಕೆಲವರು ಶಾಸಕರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಆದರೆ ನಾನು ಚಿಂತಾಮಣಿಯಲ್ಲಿಯೇ ಜನರ ಮಧ್ಯೆಯೇ ಜನಸೇವೆ ಮಾಡುತ್ತಿದ್ದೇನೆ ಎಂದರು.

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ನೋಡಿ ಸಹಿಸದ ಕೆಲ ವಿರೋಧಿಗಳು ನನ್ನ ಬಗ್ಗೆ ರಾಜಕೀಯವಾಗಿ ಅಪಪ್ರಚಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನನಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಮುಖ್ಯಮಂತ್ರಿ ಬೆಂಬಲವಾಗಿದ್ದಾರೆ ಹೀಗಿರುವಾಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವ ಅಗತ್ಯ ನನಗಿಲ್ಲ ಅಂತಹ ಪರಿಸ್ಥಿತಿ ಉದ್ಭವವಾಗಿಲ್ಲ ಕೊನೆಯ ಉಸಿರಿರುವ ತನಕ ಜೆಡಿಎಸ್ ಪಕ್ಷದಲ್ಲಿಯೇ ಮುಂದುವರೆಯುತ್ತೇನೆಂದು ಸ್ಪಷ್ಟಪಡಿಸಿದರು.

ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರಿಗೆ ಮಾಹಿತಿಯ ಕೊರತೆಯಿಂದ ಇಲ್ಲಸಲ್ಲದ ಆರೋಪಗಳು ಮಾಡುತ್ತಿದ್ದಾರೆ ಅದರಲ್ಲಿ ಯಾವುದೇ ರೀತಿಯ ಸತ್ಯಾಂಶಗಳಿಲ್ಲ ಕಲ್ಯಾಣ ಮಂಟಪವನ್ನು ನಿರ್ಮಿಸುವ ವಿಚಾರದಲ್ಲಿ ಯಾವುದೇ ರೀತಿಯ ನಿಲುವಿನಲ್ಲಿ ಬದಲಾವಣೆ ಇಲ್ಲ ನನ್ನ ಅಪೇಕ್ಷೆಯಂತೆ ನಾಲ್ಕು ಜನ ಸದಸ್ಯರನ್ನು ಸೇರಿಸಿಕೊಂಡು ಒಟ್ಟು 11 ಜನರ ಟ್ರಸ್ಟ್ ಮಾಡಿದರೆ ಕಲ್ಯಾಣ ಮಂಟಪದ ಅಭಿವೃದ್ದಿಗಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೇಲೂರು ರವಿಕುಮಾರ್ ಅವರೇ ಪಕ್ಷದ ಅಭ್ಯರ್ಥಿಯಾಗಿದ್ದಾರೆ ಜನತಾ ಜಲಧಾರೆ ಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಅದೇ ರೀತಿಯಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಯಾತ್ರೆಯನ್ನು ಯಶಸ್ವಿಗೊಳಿಸಲಿದ್ದಾರೆ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕ್ರಮಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.