ಪದವಿ, ಉದ್ಯೋಗ, ಪರಿಪೂರ್ಣ ವ್ಯಕ್ತಿತ್ವಕ್ಕೆ ಶಿಕ್ಷಣ ಬುನಾದಿ
Team Udayavani, Jan 27, 2019, 8:58 AM IST
ಚಿಕ್ಕಬಳ್ಳಾಪುರ: ಕೇವಲ ಪದವಿ ಅಥವಾ ಉದ್ಯೋಗ ಗಿಟ್ಟಿಸಿಕೊಳ್ಳುವುದಕ್ಕಿಂತ ಮನಷ್ಯ ಪರಿಪೂರ್ಣವಾದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಶಿಕ್ಷಣ ತಳಹದಿ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 2018-19ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ಕಾಣಲು ದೂರದೃಷ್ಟಿ ಹೊಂದಿರಬೇಕೆಂದರು.
ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಕಾಲೇಜು ಹಂತದ ವಯಸ್ಸು ಪ್ರತಿಯೊಬ್ಬರ ಜೀವನದಲ್ಲಿ ಕೆಟ್ಟ ಅಭ್ಯಾಸಗಳ ಕಡೆಗೆ ಹೆಚ್ಚು ಆಕರ್ಷಿತವಾಗುತ್ತದೆ. ಇದರಿಂದ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಪಡೆಯುವಾಗ ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ದುಶ್ಚಟಗಳ ಕಡೆಗೆ ಆಕರ್ಷಿತರಾಗದೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಮಾತ್ರ ನಮ್ಮ ಭವಿಷ್ಯ ಕೂಡ ಉತ್ತಮವಾಗಿರುತ್ತದೆ ಎಂದರು.
ಪೋಕಷರನ್ನು ಕರೆ ತನ್ನಿ: ಶಾಲಾ, ಕಾಲೇಜು ವಾರ್ಷಿಕೋತ್ಸವಗಳು ಮಕ್ಕಳ ಸೃಜನಶೀಲತೆಯನ್ನು ಪ್ರತಿಬಿಂಬಿಸುವಂತೆ ಇರಬೇಕು. ಆದ್ದರಿಂದ ಕಾಲೇಜು ವಾರ್ಷಿಕೋತ್ಸಗಳು ಸಂತೋಷ ಕೂಟಗಳಾಗಿರುವುದರಿಂದ ಪೋಷಕರನ್ನು ಕರೆ ತಂದರೆ ಮಕ್ಕಳ ಚಟುವಟಿಕೆಗಳನ್ನು ಅಥವಾ ಆಟಪಾಟಗಳನ್ನು ನೋಡಿ ಪೋಷಕರು ಸಂತಸಪಡುತ್ತಾರೆ. ತಂದೆ, ತಾಯಿಗೂ ಮಕ್ಕಳನ್ನು ಯಾವ ರೀತಿ ಬೆಳೆಸಬೇಕೆಂಬುದು ಮನವರಿಕೆ ಆಗುತ್ತದೆ. ಆದ್ದರಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಪೋಷಕರನ್ನು ಕರೆ ತರುವಂತೆ ಮಕ್ಕಳಿಗೆ ಸಲಹೆ ನೀಡಿದರು.
ಕಾಲೇಜು ವಿದ್ಯಾರ್ಥಿಗಳಿಂದ ಮೂಡಿ ಬಂದ ಭರತನಾಟ್ಯ, ನೃತ್ಯ ಪ್ರದರ್ಶನ, ಜನಪದ ಗೀತೆ, ಭಾವಗೀತೆಗಳ ಗಾಯನ ಕಾರ್ಯಕ್ರಮಗಳು ಗಮನ ಸೆಳೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎಸ್.ಮಂಜುನಾಥ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ, ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ನಗರಸಭಾ ಸದಸ್ಯರಾದ ಸುಬ್ರಹ್ಮಣ್ಯಚಾರಿ, ಗಜೇಂದ್ರ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಕೀಲ ಪ್ರಕಾಶ್, ಖಜಾಂಚಿ ಡಾ.ರಾಮು, ನಗರಸಭೆ ಆಯುಕ್ತ ಉಮಾಕಾಂತ್, ಕಾಲೇಜು ಉಪನ್ಯಾಸಕರಾದ ಸತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.