ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್
Team Udayavani, Oct 26, 2020, 2:55 PM IST
ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರವನ್ನು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಅವರು ಅಪವಿತ್ರಗೊಳಿಸಿದ್ದಾರೆಂದು ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಡಾ.ಹಾಲನೂರ್ ಎಸ್ ಲೇಪಾಕ್ಷ್ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿ ರ್ವಹಿಸಿರುವ ತಮಗೆ ಟಿಕೇಟ್ ಕೊಡಿಸುವುದಾಗಿ ನಂಬಿಸಿ ದ್ರೋಹ ಮಾಡಿರುವ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ವಚನಭ್ರಷ್ಟವೆಂದು ಟೀಕಿಸಿದರು.
ಶಿಕ್ಷಕರನ್ನು ತಪ್ಪುದಾರಿಗೆ ಎಳೆಯುವ ಮೂಲಕ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದಾರೆ. ಈ ಬಾರಿ ಕ್ಷೇತ್ರದ ಮತದಾರರು ಯಾರು ಹಿತವರು ತಿಳಿದುಕೊಂಡಿದ್ದು ಅವರು ಹೊಸ ಇತಿಹಾಸವನ್ನು ನಿರ್ಮಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ 30 ವರ್ಷಗಳಿಂದ ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಪದವೀಧರರಿಗೆ ಉದ್ಯೋಗ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಮಾದರಿಯಾಗಿ ಪರಿವರ್ತಿಸುವುದೇ ತಮ್ಮ ಮುಖ್ಯ ಗುರಿಯೆಂದರು.
ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕ ನರಸಿಂಹಮೂರ್ತಿ,ಭಾಸ್ಕರ್, ಚೇತನ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.