ಮೋದಿ ಹವಾ, ತನ್ನ ವಿರೋಧಿ ಅಲೆಯಲ್ಲಿ ಮೊಯ್ಲಿ ಸೋಲು

ಹ್ಯಾಟ್ರಿಕ್‌ ಗೆಲುವಿನ ವಸ್ತಿಲಲ್ಲಿ ಮುಗ್ಗರಿಸಿ ವೀರಪ್ಪ ಮೊಯ್ಲಿ ವರ್ಕೌಟ್ ಆಗದ ಮೈತ್ರಿ ಧರ್ಮ

Team Udayavani, May 25, 2019, 3:01 PM IST

cb-tdy-8..

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕ ಸಭಾ ಕ್ಷೇತ್ರದ ಫ‌ಲಿತಾಂಶ ಒಂದು ರೀತಿಯಲ್ಲಿ ಮೋದಿ ಅಲೆಗಿಂತ ಮೊಯ್ಲಿ ವಿರೋಧಿ ಅಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸಿದೆ.

ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಂಗ್ರೆಸ್‌ ಪ್ರಾಬಲ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿರುವುದು, ಬಿಜೆಪಿಯ ಬಿ.ಎನ್‌.ಬಚ್ಚೇಗೌಡ 1.81 ಲಕ್ಷದಷ್ಟು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕ್ಷೇತ್ರದಲ್ಲಿದ್ದ ಮೊಯ್ಲಿ ವಿರೋಧಿ ಅಲೆಯನ್ನು ಪುಷ್ಟೀಕರಿಸಿದೆ.

ಕೈ ಶಾಸಕರಿದ್ದರೂ ಬಿಜೆಪಿ ಮುನ್ನಡೆ: ಕ್ಷೇತ್ರದ ವ್ಯಾಪ್ತಿಗೆ ಬರುವ ಯಲಹಂಕ ವಿಧಾನಸಭಾ ಕ್ಷೇತ್ರ ಬಿಜೆಪಿ ಗೆಲುವಿಗೆ ದೊಡ್ಡ ಕೊಡುಗೆ ಕೊಟ್ಟಿದೆ. ಹೆಚ್ಚು ಒಕ್ಕಲಿಗ ಸಮುದಾಯ ಇರುವ ಕಾಂಗ್ರೆಸ್‌ ಪ್ರಾಬಲ್ಯದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 34 ಸಾವಿರದಷ್ಟು ಮತಗಳ ಅಂತರ ಕಾಂಗ್ರೆಸ್‌ಗಿಂತ ಬಿಜೆಪಿ ಪಡೆದಿದೆ.

ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ ಬಿಜೆಪಿ 20 ಸಾವಿರಕ್ಕೂ ಅಧಿಕ ಮತಗಳ ಲೀಡ್‌ ಪಡೆದು ಕೊಂಡು ಗಮನ ಸೆಳೆದಿದೆ. ಮೊಯ್ಲಿ ಸೋಲಿಗೆ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ದೊಡ್ಡ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ.

ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಸ್ಥಳೀಯವಾಗಿ ಕಾಂಗ್ರೆಸ್‌, ಜೆಡಿಎಸ್‌ ನಾಯಕರ ವೈಮನಸ್ಸಿನಿಂದ ಮೈತ್ರಿ ಧರ್ಮ ಸಮರ್ಪಕವಾಗಿ ವರ್ಕೌಟ್ ಆಗದೇ ಲೋಕಸಭಾ ಚುನಾವಣೆಯಲ್ಲಿ ತನ್ನ ಭದ್ರಕೋಟೆ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ವಿಫ‌ಲವಾಗಿದೆ. ಇನ್ನೂ ಕ್ಷೇತ್ರದ ಹಿಂದಿನ ಚುನಾವಣೆಗಳನ್ನು ಗಮನಿಸದೆ ಪ್ರತಿ ಬಾರಿ ಕೂಡ ತ್ರಿಕೋನ ಸ್ಪರ್ಧೆ ಏರ್ಪಟ್ಟಗೆಲ್ಲಾ ಕಾಂಗ್ರೆಸ್‌ಗೆ ದಲಿತ, ಹಿಂದುಳಿದ ಹಾಗೂ ಅಲ್ಪ ಸಂಖ್ಯಾತರ ಮತಗಳ ಆಸರೆಯಿಂದ ಸುಲಭವಾಗಿ ಗೆದ್ದು ಬರುತ್ತಿತ್ತು.

2009, 2014 ಲೋಕಸಭಾ ಚುನಾವಣೆಗಳ ಫ‌ಲಿತಾಂಶ ಗಮನಿಸಿದರೆ ಸ್ಪಷ್ಟವಾಗುತ್ತದೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ದ್ವಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ಕ್ಷೇತ್ರದ ಪ್ರಬಲ ಸಮು ದಾಯ ಒಕ್ಕಲಿಗ ಮತಗಳು ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಕೈ ಹಿಡಿದಿದ್ದರಿಂದ ದಳಪತಿ ಗಳು ಕೈ ಹಿಡಿಯದ ಕಾರಣ ದಿಂದ ಕ್ಷೇತ್ರದಲ್ಲಿ ಬಿಜೆಪಿ ಸುಲಭವಾಗಿ ಜಯ ಸಾಧಿಸಿ ಗೆಲುವಿನ ನಗೆ ಬೀರಿದೆ.

ಮೊಯ್ಲಿಗೆ ತಟ್ಟಿದ ನೀರಾವರಿ ಬಿಸಿ: ಮತ್ತೂಂದೆಡೆ ಕಾಂಗ್ರೆಸ್‌ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಸೋಲಿಗೆ ಮೈತ್ರಿ ಧರ್ಮಪಾಲನೆ ಆಗದಿರುವುದು ಒಂದೆಡೆಯಾದರೆ ಕ್ಷೇತ್ರದಲ್ಲಿ ಉಲ್ಬಣಿಸಿದ್ದ ನೀರಾ ವರಿ ಬಿಸಿ ಕೂಡ ಮೊಯ್ಲಿಗೆ ಬಿಸಿ ತುಪ್ಪವಾಗಿತ್ತು. ಸದಾ ಬರದಿಂದ ಕಂಗೆಟ್ಟಿರುವ ಜಿಲ್ಲೆಯ ಜನತೆ ದಶಕಗಳಿಂದಲೂ ಶಾಶ್ವತ ನೀರಾವರಿಗಾಗಿ ಧ್ಯಾನ ಮಾಡುತ್ತಿದ್ದಾರೆ. ಆದರೆ ಹತ್ತು ವರ್ಷ ಕ್ಷೇತ್ರದ ಸಂಸದರಾದರೂ ಕನಿಷ್ಠ ಈ ಭಾಗಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸಲಿಲ್ಲ. ಎತ್ತಿನಹೊಳೆ ಯೋಜನೆ, ಹೆಬ್ಟಾಳ ಹಾಗೂ ನಾಗವಾರ ತ್ಯಾಜ್ಯ ನೀರನ್ನು ಕೂಡ ಸಕಾಲದಲ್ಲಿ ತಂದು ಕೆರೆಗಳಿಗೆ ತುಂಬಿಸಿ ಜಿಲ್ಲೆಯ ಅಂತರ್ಜಲ ವೃದ್ಧಿಗೆ ತ್ವರಿತವಾಗಿ ಕ್ರಮಗೊಳ್ಳಲಿಲ್ಲ ಎಂಬ ಅಸಮಾಧಾನ, ಆಕ್ರೋಶಕ್ಕೆ ಈ ಬಾರಿ ಮೊಯ್ಲಿ ತುತ್ತಾಗಬೇಕಾಯಿತು. ಒಂದು ರೀತಿ ಮೋದಿ ಹವಾ ಜೊತೆಗೆ ಕ್ಷೇತ್ರದಲ್ಲಿ ತೀವ್ರತರದಲ್ಲಿ ಸೃಷ್ಟಿಯಾಗಿದ್ದ ತನ್ನ ವಿರೋಧಿಅಲೆಗೆ ವಿರೋಧಿ ಮೊಯ್ಲಿ ಗೆಲುವು ಸಾಧಿಸ ಲಾಗದೇ ಬಿಜೆಪಿ ವಿರುದ್ಧ ಸೋಲು ಒಪ್ಪಿಕೊಳ್ಳಬೇಕಾಯಿತು.

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.