ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಮೊಯ್ಲಿ ವಿಫಲ
Team Udayavani, Apr 16, 2019, 3:00 AM IST
ಬಾಗೇಪಲ್ಲಿ: ವೀರಪ್ಪ ಮೊಯ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಸಂಪೂರ್ಣವಾಗಿ ವಿಫಲರಾದರು ಎಂದು ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ತಿಳಿಸಿದರು.
ಸೋಮವಾರ ಪಟ್ಟಣದ ಗೂಳೂರು ವೃತ್ತದಲ್ಲಿ ಸಿಪಿಎಂ ಅಭ್ಯರ್ಥಿ ಎಸ್.ವರಲಕ್ಷ್ಮಿ ಪರವಾಗಿ ಚುನಾವಣಾ ಪ್ರಚಾರ ಭಾಷಣ ಮಾಡಿ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವಾಗ ಮೊಯ್ಲಿ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.
ಶಾಶ್ವತ ನೀರಾವರಿಗೆ ಆಗ್ರಹಿಸಿ ಡಾ.ಪರಮಶಿವಯ್ಯ ವರದಿ ಜಾರಿಗೆ ಆಗ್ರಹಿಸಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನೇತೃತ್ವದಲ್ಲಿ ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಈ ಭಾಗದ ಸಂಸದರು ಕಿವಿಗೆ ಹಾಕಿಕೊಳ್ಳಲಿಲ್ಲ.
ಜನ ಸಾಮಾನ್ಯರ ಹೋರಾಟ: 2014ರಲ್ಲಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರದಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ನಮಗೆ ಓಟು ಕೊಡಿ ಬಯಲುಸೀಮೆ ಜಿಲ್ಲೆಗಳಿಗೆ ದೊಡ್ಡ ಪೈಪುಗಳು ಹಾಕಿ ನೀರು ತರುತ್ತೇವೆ. ಈ ದೊಡ್ಡ ಪೈಪುಗಳ ಹೇಗೆ ಇರುತ್ತವೆ ಎಂದರೆ ಪೈಪ್‌ಗ್ಳಲ್ಲಿ ಮಾರುತಿ ಕಾರು ಚಲಿಸಬಹುದು ಎಂದು ಹೇಳಿದ್ದರು. ಆದರೆ ನೀರು ಬರಲೇ ಇಲ್ಲ ಎಂದು ವ್ಯಂಗವಾಡಿದರು.
ಬೇರೆ ಪಕ್ಷಗಳ ಮತಗಳನ್ನು ಖರೀದಿ ಮಾಡುವುದು ಚನ್ನಾಗಿ ಗೊತ್ತಿದೆ. ಆದರೆ ಸಿಪಿಎಂ ಪಕ್ಷಕ್ಕೆ ಮತಗಳನ್ನು ಖರೀದಿ ಮಾಡುವ ಕಾರ್ಯಕ್ಕೆ ಕೈಹಾಕುವುದಿಲ್ಲ. ನಿರಂತರ ಜನಸಾಮಾನ್ಯರ ಮೂಲಭೂತ ಸೌಲಭ್ಯಗಳ ಬಗ್ಗೆ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಬಂಡವಾಳಶಾಹಿಗಳ ಪರ ಸರ್ಕಾರ: ಬಿಜೆಪಿ, ಆರ್‌ಎಸ್‌ಎಸ್ ಒಂದುಗೂಡಿ ಸಂವಿಧಾನವನ್ನು ಹಾಳು ಮಾಡುವ ಪಿತೂರಿ ನಡೆಸಲಾಗುತ್ತಿದೆ. ಜಾತಿ, ಜಾತಿಗಳ ನಡುವೆ ವೀಷ ಬೀಜ ಬಿತ್ತುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನ್ನು ಸೋಲಿಸಬೇಕಾಗಿದೆ. ಮೋದಿ ಸರ್ಕಾರದಲ್ಲಿ ಕೇವಲ ಬಂಡವಾಳ ಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತಿದೆ ಎಂದು ಆರೋಪಿಸಿದರು.
ಲೋಕಸಭೆ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಎಸ್.ವರಲಕ್ಷ್ಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಯೋಚನೆ ಮಾಡಿ ಮತದಾನ ಮತದಾನ ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ದೇಶದ ಪ್ರತಿಯೊಬ್ಬರಿಗೂ ಮತದಾನಕ್ಕೆ ಅವಕಾಶ ಕೊಡಲಾಗಿದೆ. ಮತದಾನದ ಹಕ್ಕನ್ನು ಸದುಪಯೋಗ ಪಡಿಸಿಕೊಂಡು ಯೋಗ್ಯರನ್ನು ಚುನಾಯಿಸಬೇಕಾಗಿದೆ.
ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಸಿಪಿಎಂ ಪಕ್ಷಕ್ಕೆ ಸೋಲು, ಗೆಲುವು ಮುಖ್ಯವಲ್ಲ ಜನರ ಸಮಸ್ಯೆಗಳೇ ಮುಖ್ಯ. ಜನರಿಗೆ ಸುಳ್ಳು ಭರವಸೆ ನೀಡಿ ವಂಚನೆ ಮಾಡುತ್ತಿರುವ ಕಾಂಗ್ರೆಸ್,ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಮನೆಗೆ ಕಳುಹಿಸಬೇಕು ಎಂದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿಪಿಎಂ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಮತಯಾಚಿಸಿದರು.
ರಾಜ್ಯ ಸಿಪಿಎಂ ಕಾರ್ಯದರ್ಶಿ ಬಸವರಾಜ್, ಮಾಜಿ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ, ತಾಲೂಕು ಕಾರ್ಯದರ್ಶಿ ಚನ್ನರಾಯಪ್ಪ, ನಗರ ಘಟಕದ ಅಧ್ಯಕ್ಷ ವಾಲ್ಮೀಕಿ ನಗರದ ಅಶ್ವತ್ಥಪ್ಪ, ತಾಪಂ ಸದಸ್ಯ ಶ್ರೀರಾಮನಾಯ್ಕ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಜೆಸಿಬಿ ಪಿ.ಮಂಜುನಾಥರೆಡ್ಡಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಉಮೇಶ್, ಮೀನಾಕ್ಷಿ ಸುಂದರ, ತಾಲೂಕು ಸಿಐಟಿಯು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಜಿಲ್ಲಾ ಡಿವೈಎಫ್‌ಐ ಅಧ್ಯಕ್ಷ ಬಿ.ಎಂ.ಹೇಮಚಂದ್ರ ಇದ್ದರು.
2004ರ ಲೋಕಸಭೆಯಲ್ಲಿ 61 ಸ್ಥಾನಗಳನ್ನು ಹೊಂದಿದ್ದ ಸಿಪಿಎಂ ಪಕ್ಷ ದೇಶದಲ್ಲಿ ನರೇಗಾ ಮತ್ತು ಅನೇಕ ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶ್ರಮಿಸಿದೆ. ಪುನಃ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಕೋಮು ಸೌಹಾರ್ದತೆ ನಾಶವಾಗುತ್ತದೆ.
-ಬೃಂದಾ ಕಾರಟ್, ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.