ಸಂಸದ ಮೊಯ್ಲಿಗೆ ನಿಜ ಹೇಳುವ ಅಭ್ಯಾಸ ಇಲ್ಲ


Team Udayavani, Mar 17, 2019, 7:43 AM IST

samsada.jpg

ಚಿಕ್ಕಬಳ್ಳಾಪುರ: ಎರಡು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡಿರುವ ಡಾ.ಎಂ.ವೀರಪ್ಪ ಮೊಯ್ಲಿಗೆ ನಿಜ ಹೇಳುವ ಅಭ್ಯಾಸ ಇಲ್ಲ. ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಾದರೂ ಏನು?

ಅವರೇ ಸೃಷ್ಟಿಸಿದ ಎತ್ತಿನಹೊಳೆ ಯೋಜನೆ 10 ವರ್ಷ ಕಳೆದರೂ ಈ ಭಾಗಕ್ಕೆ ನೀರು ಹರಿಸಲು ಅವರಿಂದ ಸಾಧ್ಯವಾಗಲಿಲ್ಲ ಎಂದು ಸಿಪಿಎಂ ಪಕ್ಷದ ಮಾಜಿ ಶಾಸಕ ಬಾಗೇಪಲ್ಲಿ ಜಿ.ವಿ.ಶ್ರೀರಾಮರೆಡ್ಡಿ ಟೀಕಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಪಿಎಂ ಪಕ್ಷ ಈ ಬಾರಿ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ ಎಂದು ತಿಳಿಸಿದರು. 

ದಾರಿ ತಪ್ಪಿದ ಹೋರಾಟ: ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಹೋರಾಟವನ್ನು ಮೊಟ್ಟ ಮೊದಲ ಬಾರಿಗೆ ಆರಂಭಿಸಿದ್ದು ಸಿಪಿಎಂ ಪಕ್ಷ. ಆದರೆ ಇಂದು ಕೆಲವರು ಸ್ವಾರ್ಥಕ್ಕಾಗಿ ನೀರಾವರಿ ಹೋರಾಟವನ್ನು ದಿಕ್ಕು ತಪ್ಪಿಸಿದ ಪರಿಣಾಮ ಹೋರಾಟ ಯಶಸ್ಸು ಕಾಣಲಿಲ್ಲ. 

ಈ ಭಾಗಕ್ಕೆ ಶಾಶ್ವತ ನೀರಾವರಿ ಬರಬೇಕಾದರೆ ಡಾ.ಪರಮಶಿವಯ್ಯ ವರದಿ ಆಧಾರಿತ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಹೋರಾಟ ನಡೆಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸಿದೆವು. ಅಂದಿನ ಹೋರಾಟಕ್ಕೆ ಮಣಿದು ಮುಖ್ಯಮಂತ್ರಿಯಾಗಿದ್ದ ಎಸ್‌.ಎಂ.ಕೃಷ್ಣ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಸರ್ವೆ ಮಾಡಿಸಿದರು. 

ಆದರೆ ಬಳಿಕ ಬಂದ ಸರ್ಕಾರಗಳು ಪರಮಶಿವಯ್ಯ ವರದಿಯ°ನು ಮೂಲೆಗುಂಪು ಮಾಡಿ ಈ ಭಾಗಕ್ಕೆ ನೀರಾವರಿ ದಾದ ತೀರಿಸಲಾಗದ ಎತ್ತಿನಹೊಳೆ, ಹೆಬ್ಟಾಳ, ನಾಗವಾರ ಹಾಗೂ ಕೆ.ಸಿ. ವ್ಯಾಲಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ಈ ಭಾಗಕ್ಕೆ ಹನಿ ನೀರು ಕೊಡಲು ಸಾಧ್ಯವಿಲ್ಲ. ಯೋಜನೆಯಡಿ ಪೈಪ್‌ಲೈನ್‌ ಕಾಮಗಾರಿ ನಡೆಯುತ್ತಿರಬಹುದು. ಆದರೆ ಹರಿಯುವ ನೀರನ್ನು ಈ ಭಾಗಕ್ಕೆ ಹರಿಸಲು ಸಾಧ್ಯವಿಲ್ಲ ಎಂದರು. 

ಪಶ್ಚಿಮ ಘಟ್ಟಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ಹರಿಸಬಹುದು. ಅದು ಕೇವಲ 10 ಟಿಎಂಸಿ ನೀರು ಮಾತ್ರ ಲಭ್ಯವಾಗುತ್ತದೆ. ಆದರೆ ಯೋಜನೆಯಲ್ಲಿ 24 ಟಿಎಂಸಿ ನೀರು ಸಿಗುತ್ತದೆ ಎಂದು ಅವೈಜ್ಞಾನಿಕವಾಗಿ ಹೇಳಲಾಗುತ್ತಿದೆ. ಎತ್ತಿನಹೊಳ ಯೋಜನೆ ಹೆಸರಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು. 

ಸರ್ಕಾರಗಳು ಕೇವಲ ಪೈಪ್‌ ಲಾಬಿಗೆ ಮಣಿದು ಹೆಚ್‌.ಎನ್‌, ಕೆ.ಸಿ.ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ರೂಪಿಸಲಾಗಿದೆ. ಈ ಮೂರು ಯೋಜನೆಗಳಿಂದ ಮುಕ್ಕಾಲು ಭಾಗ ನೀರು ಕೂಡ ಈ ಭಾಗಕ್ಕೆ ಬರುವುದಿಲ್ಲ. ಈ ಯೋಜನೆಗಳಿಂದ ಈ ಭಾಗದ ಶಾಶ್ವತವಾದ ನೀರಾವರಿ ಸಮಸ್ಯೆ ಬಗೆಹರಿಯುವುದಿಲ್ಲ.

ಡಾ.ಪರಮಶಿವಯ್ಯ ಯೋಜನೆ ಅನುಷ್ಠಾನಕ್ಕೆ ತಂದರೆ ಮಾತ್ರ ಈ ಭಾಗಕ್ಕೆ ನೀರು ಸಿಗಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಗುಡಿಬಂಡೆ ಜಯರಾಮರೆಡ್ಡಿ, ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಚೆನ್ನರಾಯಪ್ಪ, ಬಿ.ಎನ್‌.ಮುನಿಕೃಷ್ಣಪ್ಪ, ಜೆಸಿಬಿ ಮಂಜುನಾಥ, ಬಾಗೇಪಲ್ಲಿ ಅಕ್ರಂಪಾಷ, ಗುಡಿಬಂಡೆ ಎಚ್‌.ಪಿ.ಲಕ್ಷ್ಮೀನಾರಾಯಣರೆಡ್ಡಿ ಇದ್ದರು. 

ಮಾ.25 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ಭಾಗಕ್ಕೆ ಡಾ.ಪರಮಶಿವಯ್ಯ ವರದಿ ಆಧಾರಿತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. 
-ಜಿ.ವಿ.ಶ್ರೀರಾಮರೆಡ್ಡಿ, ಮಾಜಿ ಶಾಸಕ 

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.