ಪಿಕಾರ್ಡ್ ಬ್ಯಾಂಕ್ ಕಟ್ಟಡಕ್ಕೆ ನೇಗಿಲ ಯೋಗಿ ಹೆಸರಿಡಿ
Team Udayavani, Sep 24, 2019, 3:00 AM IST
ಚಿಕ್ಕಬಳ್ಳಾಪುರ: ನೂತನವಾಗಿ ನಿರ್ಮಿಸಲಾಗುತ್ತಿರುವ ಪಿಕಾರ್ಡ್ ಬ್ಯಾಂಕ್‌ಗೆ ನೇಗಿಲ ಯೋಗಿ ಭವನ ಎಂದು ಹೆಸರಿಡುವಂತೆ ಅರ್ನಹ ಶಾಸಕ ಡಾ.ಕೆ.ಸುಧಾಕರ್, ಆಡಳಿತ ಮಂಡಳಿಗೆ ಸಲಹೆ ನೀಡಿ ಸಹಕಾರ ಕ್ಷೇತ್ರದಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡಬಾರದು ಎಂದರು. ನಗರದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 2018-19ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಹಕಾರಿ ಕ್ಷೇತ್ರ ರಾಜಕಾರಣ ಹೊರತಾಗಿ, ರೈತರ ಏಳಿಗೆ ಪೂರಕವಾಗಿ ಕೆಲಸ ಮಾಡಬೇಕು. ದಕ್ಷಿಣ ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಆದರೆ ನಮ್ಮ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಪ್ರಬಲವಾಗಿ ಬೆಳೆಯುತ್ತಿರುವುದು ಶ್ಲಾಘನೀಯ. ಕಳೆದ 60 ವರ್ಷಗಳಿಂದ ಇಲ್ಲಿ ಅನೇಕರು ಅಧ್ಯಕ್ಷರಾಗಿ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಸಹ ನಾವು ಸ್ಮರಿಸಬೇಕು. ಈಗ ಯುವಕರಿಗೆ ಅವಕಾಶ ಸಿಕ್ಕಿದೆ. ಅವರಿಗೆ ಅಭಿವೃದ್ಧಿ ಮಾಡಲು ಸಹಕಾರಿ ನೀಡಬೇಕಿದೆ ಎಂದು ತಿಳಿಸಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಿ.ನಾಗೇಶ್ ಮಾತನಾಡಿ, ಮೊದಲು ಬ್ಯಾಂಕ್ ದುಸ್ಥಿತಿಯಲ್ಲಿತ್ತು. ನಮ್ಮ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಬ್ಯಾಂಕ್ ಸಾಕಷ್ಟು ಪ್ರಗತಿ ಸಾಧಿಸಿದೆ. ಸುಮಾರು 4,000 ಸದಸ್ಯತ್ವ ಮಾಡಿಸಿದ್ದೇವೆ. ಬ್ಯಾಂಕಿನ ವಾಣಿಜ್ಯ ಸಂಕೀರ್ಣದಿಂದ ವಾರ್ಷಿಕ 1 ಕೋಟಿ ಬಾಡಿಗೆ ಬರಲಿದೆ. ಅದರಿಂದ ಸ್ವಂತ ಬಂಡವಾಳದಲ್ಲಿ ರೈತರಿಗೆ ಸಾಲ ನೀಡುವ ಯೋಚನೆ ಇದೆ ಎಂದು ತಿಳಿಸಿದರು. ನೂತನ ಕಾಯ್ದೆ ತಿದ್ದುಪಡಿಯಂತೆ ಬ್ಯಾಂಕ್‌ನಲ್ಲಿ ನಡೆಯುವ ಸಭೆಗಳಿಗೆ ಹಾಜರಾಗದ ಹಾಗೂ ಕನಿಷ್ಠ ಒಂದು ವರ್ಷದಲ್ಲಿ ಮೂರು ಬಾರಿ ಬ್ಯಾಂಕ್ ವ್ಯವಹಾರ ನಡೆಸದವರ ಸದಸ್ಯತ್ವವನ್ನು ರದ್ದುಪಡಿಸಲಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಅಂತಹವರಿಗೆ ಮತದಾನ ಮಾಡುವ ಹಕ್ಕು ಇರುವುದಿಲ್ಲ’ ಎಂದು ಹೇಳಿದರು.
ಸಭೆಯಲ್ಲಿ 2017-18ನೇ ಸಾಲಿನ ಆಡಳಿತ ವರದಿ, ಖರ್ಚು ವೆಚ್ಚ, ಲೆಕ್ಕ ಪರಿಶೋಧಕರ ವರದಿ ಮಂಡಿಸಿ ಅಂಗೀಕರಿಸಲಾಯಿತು. ತಾಪಂ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ರೆಡ್ಡಿ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಆವುಲರೆಡ್ಡಿ, ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮೇಗೌಡ, ಬ್ಯಾಂಕ್ ಉಪಾಧ್ಯಕ್ಷೆ ಅಕ್ಕಲಮ್ಮ, ನಿರ್ದೇಶಕರಾದ ಕೆ.ಎನ್.ಕೃಷ್ಣಮೂರ್ತಿ, ಜಿ.ನಾರಾಯಣಸ್ವಾಮಿ, ಕೆ.ಪಿ.ಚನ್ನಬೈರೇಗೌಡ, ಎಂ.ಶ್ರೀನಿವಾಸ್, ಕೆ.ಕೃಷ್ಣಪ್ಪ, ಸಿ.ನಾರಾಯಣಸ್ವಾಮಿ, ಎಂ.ಚನ್ನಕೇಶವ ಇತರರು ಇದ್ದರು.
ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಕೈ ಬಿಟ್ಟಿದ್ದಕ್ಕೆ ಕಿಡಿ: ರಾಜ್ಯ ಸರ್ಕಾರ ಈಗಾಗಲೇ 27 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳು ಎಂದು ಘೋಷಣೆ ಮಾಡಿದೆ. ಆದರೆ ಆ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿಲ್ಲ ಎಂದು ಡಾ.ಕೆ.ಸುಧಾಕರ್ ಕಿಡಿಕಾರಿದರು. ರಾಜ್ಯದಲ್ಲಿ ಅತಿ ಹೆಚ್ಚು ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆ ಚಿಕ್ಕಬಳ್ಳಾಪುರ, ಕುಡಿಯವ ನೀರಿನ ಹೆಚ್ಚು ಟ್ಯಾಂಕರ್ ಬಳಕೆ ಮಾಡಲಾಗುತ್ತಿದೆ. ಆದರೆ ಕಂದಾಯ ಅಧಿಕಾರಿಗಳು ಯಾವ ಕಾರಣಕ್ಕೆ ಬರದ ಪಟ್ಟಿಯಿಂದ ಚಿಕ್ಕಬಳ್ಳಾಪುರ ಕೈ ಬಿಟ್ಟಿದ್ದಾರೆಂಬುದು ಅರ್ಥವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.