ಇನ್ನು ನಂದಿಗಿರಿಧಾಮಕ್ಕೆ ಬೇಗ ಬನ್ನಿ


Team Udayavani, Apr 21, 2023, 4:08 PM IST

tdy-19

ಚಿಕ್ಕಬಳ್ಳಾಪುರ: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಶುಭ ಸುದ್ದಿ ಕೊಟ್ಟಿದೆ. ಇನ್ನು ಮುಂದೆ ಪ್ರತಿ ದಿನ ಬೆಳಗ್ಗೆ 5.30ರ ಬದಲಾಗಿ 5 ಗಂಟೆಗೇ ನಂದಿಗಿರಿಧಾಮ ಪ್ರವೇಶಕ್ಕೆ ತೆರೆದುಕೊಳ್ಳಲಿದೆ.

ಅನುಮತಿ: ಹೌದು, ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆಗಳು ಘೋಷಣೆ ಆಗುತ್ತಿದ್ದಂತೆ ನಂದಿಗಿರಿಧಾಮ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ. ಹೀಗಾಗಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ನಂದಿಗಿರಿಧಾಮ ಪ್ರವೇಶದ ಸಮಯವನ್ನು ಪರಿಷ್ಕರಿಸಿರುವ ಜಿಲ್ಲಾಡಳಿತ ಅರ್ಧ ಗಂಟೆ ಮೊದಲೇ ನಂದಿಗಿರಿ ಪ್ರವೇಶಿಸಲು ಅನುಮತಿ ಕಲ್ಪಿಸಿ ಆದೇಶಿಸಿದೆ.

ಸುತ್ತಾಡಲು ಅವಕಾಶ: ಇದುವರೆಗೂ ನಂದಿಗಿರಿಧಾಮದ ಪಾರ್ಕಿಂಗ್‌ ಸ್ಥಳದ ನಿರ್ವಹಣೆಯನ್ನು ರಾಜ್ಯದ ಪ್ರವಾಸೋ ದ್ಯಮದ ಅಭಿವೃದ್ಧಿ ನಿಗಮದ ವತಿಯಿಂದ ಮಾಡಲಾಗುತ್ತಿತ್ತು. ಈ ಹಿಂದೆ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶ ಸಮಯವನ್ನು ಬೆಳಗ್ಗೆ 5.30 ರಿಂದ ಸಂಜೆ 6ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಆದರೆ, ಪ್ರಸ್ತುತ ಬೇಸಿಗೆ ರಜೆ ಪ್ರಾರಂಭವಾಗುತ್ತಿದ್ದು, ಸೂರ್ಯೋದಯ ಮತ್ತು ಸೂರ್ಯಾಸ್ತದ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಅಧ್ಯಕ್ಷರ ಆದೇಶದಂತೆ ನಂದಿ ಗಿರಿಧಾಮದ ಪ್ರವೇಶ ಸಮಯವನ್ನು ಇನ್ನೂ ಮುಂದೆ ಪ್ರತಿ ದಿನ ಬೆಳಗ್ಗೆ 5ರಿಂದ ಸಂಜೆ 7ರವರೆಗೆ ನಿಗದಿಪಡಿಸಲಾಗಿದೆ. ಈ ಮೂಲಕ, ಹೆಚ್ಚುವರಿ ಒಂದೂವರೆ ಗಂಟೆ ಕಾಲ ನಂದಿಗಿರಿಧಾಮ ಸುತ್ತಾಡಲು ಪ್ರವಾಸೋದ್ಯಮ ಇಲಾಖೆ ಪ್ರವಾಸಿಗರಿಗೆ ಅವಕಾಶ ನೀಡಿದೆ.

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು: ಬೆಳಗ್ಗೆ 5ರಿಂದ ಸಂಜೆ 7ಗಂಟೆವರೆಗೆ ಪ್ರವಾಸಿಗರಿಗೆ ನಂದಿಬೆಟ್ಟ ವೀಕ್ಷಣೆಗೆ ಸಮಯ ನಿಗದಿಪಡಿಸಿ, ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಯಶವಂತಪುರ ವೃತ್ತ, ಬೆಂಗಳೂರು ಅವರು ಕೋರಿದ್ದರ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿಗಿರಿಧಾಮಕ್ಕೆ ಈ ಹಿಂದೆ ಇದ್ದ ಸಾರ್ವಜನಿಕರ ಪ್ರವೇಶ ಸಮಯವನ್ನು ಬದಲಿಸಿ, ಹೊಸದಾಗಿ ಪರಿಷ್ಕರಿಸಿ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಆದೇಶಿಸಿದ್ದಾರೆ.

ಸೆ.30ತನಕ ಪರಿಷ್ಕೃತ ಸಮಯ ಅನ್ವಯ: ಸದ್ಯ ಜಿಲ್ಲೆಯ ನಂದಿಗಿರಿಧಾಮದ ಪ್ರವಾಸಿಗರಿಗೆ ಪರಿಷ್ಕರಣೆಗೊಂಡಿರುವ ಬೆಳಗ್ಗೆ 5ಗಂಟೆಯಿಂದ ಸಂಜೆ 7ಗಂಟೆವರೆಗೆ ಸಮಯವನ್ನು ಏ.12ರಿಂದ ಅನ್ವಯ ವಾಗುವಂತೆ ಮುಂದಿನ ಸೆ.30 ತಿಂಗಳವರೆಗೂ ಅನ್ವಯವಾಗಲಿದೆ ಎಂದು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎನ್‌.ಎಂ.ನಾಗರಾಜ್‌ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.