ವಿಶ್ವ ವಿಖ್ಯಾತ ನಂದಿಗಿರಿಧಾಮ ಪ್ರವೇಶ ಸಮಯ 1 ಗಂಟೆ ಕಡಿತ
Team Udayavani, Jun 1, 2024, 8:45 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಐತಿಹಾಸಿಕ, ವಿಶ್ವ ವಿಖ್ಯಾತ ನಂದಿಗಿರಿಧಾಮದ ಪ್ರವಾಸಿಗರ ಪ್ರವೇಶ ಸಮಯ ಬದಲಾವಣೆಯಾಗಿದೆ.
ಪ್ರವಾಸಿಗರ ಸುರಕ್ಷೆ ದೃಷ್ಟಿಯಿಂದ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಪ್ರವೇಶ ಸಮಯ ಬದಲಾವಣೆಗೆ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಅನುಮೋದಿಸಿದ್ದಾರೆ.
ಇದುವರೆಗೆ ನಂದಿಗಿರಿಧಾಮಕ್ಕೆ ಬೆಳಗ್ಗೆ 5ರಿಂದ ಸಂಜೆ 7 ಗಂಟೆವರೆಗೆ ಪ್ರವೇಶಾವಕಾಶ ಇತ್ತು. ಇದನ್ನು ಬೆಳಗ್ಗೆ 5.30ರಿಂದ ಸಂಜೆ 6.30 ಗಂಟೆಗೆ ನಿಗದಿಪಡಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಆರಂಭಗೊಂಡು ಹವಾಮಾನದಲ್ಲಿ ಸಾಕಷ್ಟು ಏರುಪೇರು ಕಂಡಿದೆ. ಸಂಜೆ 7 ಗಂಟೆ ವರೆಗೂ ನಂದಿಬೆಟ್ಟದಲ್ಲಿ ಉಳಿದರೆ ಪ್ರವಾಸಿಗರ ಭದ್ರತೆಗೆ ಸವಾಲು ಎದುರಾಗಬಹುದು. ಆದ್ದರಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.