ರಾಷ್ಟ್ರೀಯ ಭೂ ಸ್ವಾಧೀನ ಅಧಿಕಾರಿಯ ಸೋಗಿನಲ್ಲಿ ವಂಚನೆ: ಆರೋಪಿ ಬಂಧನ


Team Udayavani, Oct 5, 2022, 10:13 PM IST

1-qwwqewe

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಭೂ ಸ್ವಾಧೀನ ಅಧಿಕಾರಿಯ ಸೋಗಿನಲ್ಲಿ ವಂಚನೆ ಮಾಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್ ಕ್ರೈಂ ಪೋಲಿಸರು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಸೈಯದ್ ಮುಬಾರಕ್(34) ಬಂಧಿತ ಆರೋಪಿ.

ಏನಿದು ಘಟನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದ ಶ್ರೀನಿವಾಸ್‍ರೆಡ್ಡಿಗೆ ಆರೋಪಿಗಳಾದ ಸೈಯದ್ ಮುಬಾರಕ್ ಹಾಗೂ ಅನೇಕಲ್ ನಗರದ ಅಕ್ರಂ ಪಾಷ ಎಂಬುವರು ಆಗಸ್ಟ್ 23 ರಂದು ಕರೆ ಮಾಡಿ ನಿಮಗೆ 28 ಲಕ್ಷ ರೂಗಳ ಭೂ ಪರಿಹಾರ ಧನದ ಚೆಕ್ ಬಂದಿದೆ ಚೆಕ್ ಪಡೆಯಲು ದಾಖಲೆಗಳನ್ನು ಮತ್ತು ಬಾಂಡ್ ಬರೆದುಕೊಡಲು 1 ಲಕ್ಷ 50 ಸಾವಿರ ರೂಗಳು ಮತ್ತು ತಮ್ಮ ಖರ್ಚುಗಳಿಗೆ 10 ಸಾವಿರ ರೂಗಳು ತೆಗೆದುಕೊಂಡು ಡಿಸಿ ಕಚೇರಿಗೆ ಬರುವಂತೆ ಹೇಳಿದ್ದಾರೆ ಆರೋಪಿಗಳು 1 ಲಕ್ಷ 60 ಸಾವಿರ ರೂಗಳನ್ನು ಮೋಸದಿಂದ ಪಡೆದುಕೊಂಡು ಖಜಾನೆಯಲ್ಲಿ ಪಾವತಿಸಿ ಬರುತ್ತೇವೆ ಎಂದು ಹೇಳಿ ಪರಾರಿಯಾಗಿರುವ ಕುರಿತು ವಂಚನೆಗೊಳಗಾದ ಶ್ರೀನಿವಾಸ್‍ರೆಡ್ಡಿ ಸೈಬರ್,ಆರ್ಥಿಕ ಮತ್ತು ಮಾದಕದ್ರವ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು ತನಿಖಾಧಿಕಾರಿ ಪೋಲಿಸ್ ಇನ್ಸ್ ಪೆಕ್ಟರ್ ಬಿ.ಪಿ.ಮಂಜು,ಪಿಎಸ್‍ಐ ಶರತ್ ಕುಮಾರ್, ಸಿಬ್ಬಂದಿಗಳಾದ ಮುರಳಿಧರ್, ಮಲ್ಲಾಕಾರ್ಜುನ್,ಅಂಬರೀಶ್ ಅವರು ವಂಚನೆಯ ಪ್ರಕರಣವನ್ನು ಬೇದಿಸಿ ಇಬ್ಬರ ಆರೋಪಿಗಳ ಪೈಕಿ ಸೈಯದ್ ಮುಬಾರಕ್ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ಬಂಧಿಸಲಾಗಿದೆ.

1 ಲಕ್ಷ 20 ಸಾವಿರ ರೂಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಆರೋಪಿಯು ಈ ಕೃತ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ಆಕ್ಟಿವ್ ಆಗಿರುವ ಸಿಮ್‍ಗಳನ್ನು ತಮಿಳುನಾಡು ರಾಜ್ಯದ ಹೊಸೂರು ನಗರದಲ್ಲಿ ಖರೀದಿಸಿ ಕೃತ್ಯಕ್ಕೆ ಉಪಯೋಗಿಸಿ ನಂತರ ಫೋನ್ ಸಮೇತ ಸಿಮ್‍ಗಳನ್ನು ಬಿಸಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಸಿಮ್‍ಗಳನ್ನು ಮಾರಾಟ ಮಾಡಿದ ಜಾಲದ ಬಗ್ಗೆಯೂ ತನಿಖೆಯನ್ನು ಕೈಗೊಳ್ಳಲಾಗಿದೆ ಈ ಪ್ರಕರಣ ಮತ್ತೊಬ್ಬ ಆರೋಪಿ ಅಕ್ರಂ ಪಾಷಾ ತಲೆ ಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಬಲೆ ಬೀಸಲಾಗಿದೆ.

ವಂಚಕರನ್ನು ಬಂಧಿಸಿದ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಪ್ರಶಂಸೆ ಮಾಡಿದ್ದಾರೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.