“ಮಾವು ಬೆಳೆಗಾರರಿಗೆ ಹೊಸ ತಳಿ ಪರಿಚಯಿಸುವೆ’
ಉದಯವಾಣಿ ಜೊತೆ ಮಾವು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತು
Team Udayavani, Nov 28, 2020, 1:18 PM IST
ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಸಹಿತ ರಾಜ್ಯದ ಮಾವು ಬೆಳೆಗಾರರಿಗೆ ನೂತನತಳಿಗಳನ್ನು ಪರಿಚಯಿಸುವ ಮೂಲಕ ಉತ್ತಮ ಗುಣಮಟ್ಟದ ಮಾವು ಉತ್ಪಾದನೆ ಮತ್ತು ರಫ್ತು ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲುಪ್ರಥಮ ಆದ್ಯತೆ ನೀಡುವುದಾಗಿ ರಾಜ್ಯ ಮಾವು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಅವರ ತಂದೆ ಕೇಶವರೆಡ್ಡಿ ಅವರಿಗೆ ಸಿಹಿ ತಿನ್ನಿಸಿ ಅಭಿನಂದಿಸಿದ ಬಳಿಕ ಉದಯವಾಣಿ ಯೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಡಾ.ಕೆ. ಸುಧಾಕರ್ ಅವರ ಸಹಕಾರದಿಂದ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದೆ.
ಸೌಲಭ್ಯ ಒದಗಿಸಲು ಆದ್ಯತೆ: ಕೋಚಿಮುಲ್ ಅಧ್ಯಕ್ಷ ರಾಗಿ ಉಭಯ ಜಿಲ್ಲೆಯ ರೈತರ ಸೇವೆ ಮಾಡಿದ್ದು, ನಿಗಮದಿಂದ ಮಾವು ಬೆಳೆಗಾರರಿಗೆ ವಿವಿಧ ರೀತಿಯಸಹಾಯಧನ, ಔಷಧ, ಗೊಬ್ಬರ ಇನ್ನಿತರೆ ಸೌಲಭ್ಯ ನೀಡಲಾಗುತ್ತಿದೆ ಎಂದು ಮಾಹಿತಿಯಿದ್ದು, ನಿಗಮದಲ್ಲಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆಸಮಾಲೋಚಿಸಿ ಹೆಚ್ಚಿನ ಸೌಲಭ್ಯ ಒದಗಿಸಲು ಆದ್ಯತೆ ನೀಡುವುದಾಗಿ ತಿಳಿಸಿದರು.
ಕೋಲ್ಡ್ ಸ್ಟೋರೇಜ್ ಸೆಂಟರ್: ಜಿಲ್ಲೆಯಲ್ಲಿ ಮಾವು ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಕರಣ ಘಟಕ ಮತ್ತು ಕೋಲ್ಡ್ ಸ್ಟೋರೇಜ್ ಸೆಂಟರ್‌ಗಳನ್ನು ತೆರೆಯಲು ಆದ್ಯತೆ ನೀಡುವ ಜೊತೆಗೆ ಮಾವು ಬೆಳೆಗಾರರು ಗುಣಮಟ್ಟದ ಮಾವು ಉತ್ಪಾದನೆ ಮಾಡಲು ನಿಗಮದಿಂದ ಸೌಲಭ್ಯ ಕಲ್ಪಿಸುವ ಜೊತೆಗೆ ಗ್ರಾಹಕರಿಗೆ ಉತ್ತಮ ಮಾವು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಮಾವಿನ ಹಣ್ಣಿನ ರಸದ ಕಾರ್ಖಾನೆ ತೆರೆಯಲು ಚಿಂತನೆ ನಡೆಸಿರುವುದಾಗಿ ತಿಳಿಸಿದರು.
ಕಿರು ಪರಿಚಯ: ಜಿಲ್ಲೆಯ ಕಣಜೇನಹಳ್ಳಿ ಗ್ರಾಪಂ ಸದಸ್ಯರಾಗಿ 1978 ರಿಂದ ರಾಜಕೀಯ ಜೀವನ ಆರಂಭಿಸಿದ ಕೆ.ವಿ.ನಾಗರಾಜ್ ಅವರು ಬಿಎಸ್ಸಿ ಪದವೀಧರರಾಗಿದ್ದು, ಕಣಜೇನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಮತ್ತು ಕೋಲಾರ ಚಿಕ್ಕಬಳ್ಳಾಪುರದ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಕೆ.ವಿ.ನಾಗರಾಜ್ ಅವರಿಗೆ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ. ಜೊತೆಗೆ ಇಂಡಿಯನ್ ವರ್ಚುವಲ್ ಅಕಾಡೆಮಿ ಪೀಸ್ ಅಂಡ್ ಎಜುಕೇಷನ್ ಸಂಸ್ಥೆಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದಾರೆ.
ಅಧ್ಯಯನಕ್ಕಾಗಿ ವಿದೇಶ ಪ್ರವಾಸ : ಕೋಚಿಮುಲ್ ನಿರ್ದೇಶಕ ಮತ್ತು ಅಧ್ಯಕ್ಷರಾಗಿ ಹೈನುಗಾರಿಕೆಕ್ಷೇತ್ರದಲ್ಲಿ ಅನುಭವಪಡೆದುಕೊಂಡಿದ್ದಾರೆ. ಇಸ್ರೇಲ್ ದೇಶದಲ್ಲಿ ಕೃಷಿ, ತೋಟಗಾರಿಕೆ, ಡೇರಿ ಮತ್ತು ನೀರಿನವ್ಯವಸ್ಥೆಕುರಿತು ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಡೆನ್ಮಾರ್ಕ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ ಮತ್ತು ಯುರೋಪ್‌ದೇಶಗಳಲ್ಲಿ ಆಧುನಿಕ ಹೈನುಗಾರಿಕೆ ಸೇರಿದಂತೆತಂತ್ರಜ್ಞಾನದಕುರಿತು ಅಧ್ಯಯನ ಪ್ರವಾಸ ನಡೆಸಿರುವ ಪ್ರಗತಿಪರ ರೈತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.