ಬಿಜೆಪಿಯೊಂದಿಗೆ ಸಖ್ಯ ಹೊಂದಿಲ್ಲ,ಸಾಫ್ಟ್ ಕಾರ್ನರ್ ಇಲ್ಲ: ಕೆ.ಪಿ.ಬಚ್ಚೇಗೌಡ
ಸೇವೆಯ ಆಧಾರದ ಮೇಲೆ ಪ್ರಶಸ್ತಿ ಬಂದಿದೆ ಎಂದ ಜೆಡಿಎಸ್ ಶಾಸಕ
Team Udayavani, Oct 22, 2022, 9:34 PM IST
ಚಿಕ್ಕಬಳ್ಳಾಪುರ:’ಬಿಜೆಪಿಯೊಂದಿಗೆ ಸಖ್ಯ ಹೊಂದಿಲ್ಲ ಸಾಫ್ಟ್ ಕಾರ್ನರ್ ಆಗುವುದಿಲ್ಲ, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿದೆ’ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ನಾನು ಮಾಡಿರುವ ಸೇವೆಯ ಆಧಾರದ ಮೇಲೆ ಪ್ರಶಸ್ತಿ ಬಂದಿದೆ ಅದಕ್ಕಾಗಿ ಲಾಭಿ ಮಾಡಿಲ್ಲ ಎಂದ ಮಾಜಿ ಶಾಸಕರು ಇನ್ನೂ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡು ಉಪಾಧ್ಯಕ್ಷ ಸ್ಥಾನವನ್ನು ನೀಡಿ ಎಂದು ಕೇಳಿದೇವು. ಆದರೇ ಅದಕ್ಕೆ ಅವರು ಒಪ್ಪಲಿಲ್ಲ ಹೀಗಾಗಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿದ್ದೇವೆ ಹೊರತು ಬಿಜೆಪಿ ಪಕ್ಷವನ್ನು ಬೆಂಬಲಿಸಿಲ್ಲವೆಂದು ಸ್ಪಷ್ಟಪಡಿಸಿ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ಯಾವುದೇ ರೀತಿಯಲ್ಲಿ ಸಖ್ಯ ಬೆಳೆಸಿಲ್ಲ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಭ್ರಷ್ಟಚಾರಕ್ಕೆ ಅಂತ್ಯ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಭ್ರಷ್ಟಚಾರದಿಂದ ಅಧಿಕಾರದಲ್ಲಿ ಮುಂದುವರೆಯುತ್ತೇವೆ ಎಂದು ಕೆಲವರು ಭ್ರಮೆಯಲ್ಲಿದ್ದಾರೆ ಕ್ಷೇತ್ರದ ಮತದಾರರು ಎಲ್ಲವನ್ನು ಅವಲೋಕನ ಮಾಡುತ್ತಿದ್ದಾರೆ. ಎಲ್ಲದಕ್ಕೂ ಕೊನೆ ಇರುತ್ತದೆ ಪ್ರಸ್ತುತ ಭ್ರಷ್ಟಚಾರದ ರಾಜನೀತಿ ಮೇಲುಗೈ ಇರಬಹುದು ಅದು ಒಂದು ದಿನ ಕೆಳಗೆ ಬರಲೇ ಬೇಕು. ಹೀಗಾಗಿ ಕ್ಷೇತ್ರದಲ್ಲಿ ಭ್ರಷ್ಟ ರಾಜಕೀಯ ವ್ಯವಸ್ಥೆ ನಶಿಸಲಿದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವರನ್ನು ಆಯ್ಕೆ ಮಾಡುವ ದಿನಗಳು ದೂರವಿಲ್ಲ. ಕುಮಾರಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಸರ್ಕಾರಕ್ಕೆ ಬಂದರೇ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಾವರಿ ಸಮಸ್ಯೆ ಸಹಿತ ಎಲ್ಲಾ ಸಮಸ್ಯೆಗಳಿಗೆ ಶಾಶ್ವತವಾಗಿ ಮುಕ್ತಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.