ಬಂದ್‌ಗೆ ಚಿಂತಾಮಣಿಯಲ್ಲಿಲ್ಲ ಬೆಂಬಲ
Team Udayavani, Feb 14, 2020, 12:49 PM IST
ಚಿಂತಾಮಣಿ: ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್‌ಗೆ ಚಿಂತಾಮಣಿಯಲ್ಲಿ ಸ್ಪಂದನೆ ಇಲ್ಲದೇ ವಾಹನ ಸಂಚಾರ, ವ್ಯಾಪಾರ ವಹಿವಾಟು ಎಂದಿನಂತೆ ಇತ್ತು. ಸ್ವಯಂ ಪ್ರೇರಿತವಾಗಿ ಬೆರಳೆಣಿಕೆಯಷ್ಟು ಅಂಗಡಿಗಳು ಮಾತ್ರ ಮುಚ್ಚಿದ್ದವು.
ತಾಲೂಕಿನಲ್ಲಿ ನೂರೆಂಟು ಸಂಘಟನೆಗಳು: ತಾಲೂಕಿನಲ್ಲಿ ಕನ್ನಡ ಪರ ಸಂಘಟನೆಗಳು ಮತ್ತು ರಾಜ್ಯ ಪರ ಸಂಘಟನೆಗಳು ಸೇರಿ ರೈತ, ದಲಿತ ಪರ ಇನ್ನಿತರೆ ಸಮುದಾಯಗಳ ಸಂಘಟನೆಗಳು ಸೇರಿ ತಾಲೂಕಿನಲ್ಲಿ ನೂರಾರು ಸಂಘಟನೆಗಳು ಅಸ್ತಿತ್ವದಲ್ಲಿದ್ದರೂ ಬಂದ್‌ಗೆ ಬೆಂಬಲ ದೊರೆಯಲಿಲ್ಲ.
ಪ್ರತಿಭಟನೆಗೆ ಸೀಮಿತ: ಬಂದ್ ಹಿನ್ನೆಲೆ ತಾಲೂಕಿನ ಕೆಲ ಕನ್ನಡ ಪರ ಸಂಘಟನೆಗಳು ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ತೆರಳಿ ತಾಲೂಕು ಕಚೇರಿ ಬಳಿ ಪ್ರತಿಭಟಿಸಿ ಶಿರಸ್ತೇದಾರ್ ಶೋಭಾ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅಂಬರೀಶ್, ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೋನಪಲ್ಲಿ ಕೋದಂಡ ಸೇರಿದಂತೆ ಕನ್ನಡಪರ-ರೈತಪರ ಸಂಘಟನೆ ಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.