ಟೊಳ್ಳು ಬೆದರಿಕೆಗೆ ಯಾರೂ ಹೆದರಲ್ಲ: ಡಾ| ಸುಧಾಕರ್
Team Udayavani, Apr 14, 2022, 5:50 AM IST
ಚಿಕ್ಕಬಳ್ಳಾಪುರ: ಗುತ್ತಿಗೆದಾರ ಸಂತೋಷ್ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್. ಈಶ್ವರಪ್ಪನವರ ಹಾಗೂ ರಾಜ್ಯ ಸರಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‌ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆದಾರ ಮೃತರಾಗಿರುವುದಕ್ಕೆ ದುಃಖವಿದೆ. ಆದರೆ ಈ ಸಾವು ಏಕೆ ಸಂಭವಿಸಿದೆ ಎಂಬುದು ತನಿಖೆ ಆಗದೆಯೇ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಕೂಡ ಬೇಕಿಲ್ಲ. ಕಾಂಗ್ರೆಸ್‌ನವರು ಎಷ್ಟು ಸತ್ಯ ಹರಿಶ್ಚಂದ್ರರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ನವರು ಯಾವ ಇಲಾಖೆಯಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಅಂಕಿ ಅಂಶಗಳನ್ನು ನಾವು ಕೂಡ ಕೊಡಬಹುದು ಎಂದರು.ಮಾಡುತ್ತಿದ್ದಾರೆ ಎಂದರು.
ಕಮಿಷನ್ ವಿಚಾರದಲ್ಲಿ ತಮ್ಮ ಹೆಸರನ್ನು ಎಳೆದು ತಂದಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಗಳ ಸಚಿವ ಡಾ| ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಕೆಂಪಣ್ಣನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಪುರಾವೆ ಇರಿಸಿಕೊಂಡು ಸರಕಾರದ ವಿರುದ್ಧ ಆರೋಪ ಮಾಡಲಿ ಎಂದ ಸಚಿವರು, ಕೆಂಪಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಕಪ್ಪುಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸಂತೋಷ್ ಸಾವಿನ ಪ್ರಕರಣದ ಬಗ್ಗೆ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸಲಿದೆ ಎಂದೂ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.