ಸರ್ಕಾರಿ ಜಮೀನು ಹರಾಜು ಮಾಡಲು ಅಧಿಸೂಚನೆ; ಸಿಎಂ ಕಚೇರಿಗೆ ಮುತ್ತಿಗೆ: ಮಾರಸಂದ್ರ ಮುನಿಯಪ್ಪ
Team Udayavani, Nov 19, 2020, 9:35 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ಬೆಂಗಳೂರು ಸುತ್ತಮುತ್ತಲಿನ ಸರ್ಕಾರಿ ಜಮೀನುಗಳನ್ನು ಹರಾಜು ಮಾಡಲು ಹೊರಟಿದ್ದು ಸರ್ಕಾರದ ಧೋರಣೆಯನ್ನು ವಿರೋಧಿಸಿ ಮುಖ್ಯಮಂತ್ರಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ರಾಜ್ಯ ಬಿಎಸ್‍ಪಿ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿ,ನೆಲಮಂಗಲ,ಆನೇಕಲ್,ಹೊಸಕೋಟೆ ಹಾಗೂ ಬಿಡದಿ ಗಡಿ ಪ್ರದೇಶದ ಹಾಗೂ ಇನ್ನಿತರೆ ಪ್ರದೇಶದಲ್ಲಿರುವ ಸುಮಾರು 38-40 ಸಾವಿರ ಎಕರೆ ಜಾಗವನ್ನು ಹರಾಜು ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಅಧಿಸೂಚನೆ ಹೊರಡಿಸುವ ಮೂಲಕ ಬಿಜೆಪಿ ಸರ್ಕಾರ ಬಡವರ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಸರ್ಕಾರಿ ಜಮೀನು ಹರಾಜು ಮಾಡುವ ಆದೇಶವನ್ನು ರದ್ದುಗೊಳಿಸಲು ಈಗಾಗಲೇ ಸಿಎಂ,ಕಂದಾಯ ಸಚಿವರು,ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ ಆದರೂ ಸಹ ಸರ್ಕಾರಿ ಜಮೀನು ಹರಾಜು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಈ ಜಮೀನು ಖರೀದಿ ಮಾಡಲು ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಹಾಗೂ ವಿಶ್ವನಾಥ್ ಅವರ ಬೆಂಬಲಿಗರು ಈಗಾಗಲೇ ತಯಾರಿ ನಡೆಸಿದ್ದಾರೆ ಎಂದು ದೂರಿದ ಅವರು ಸರ್ಕಾರ ಈ ಕೂಡಲೇ ಹರಾಜು ಪ್ರಕ್ರಿಯೆ ನಿಲ್ಲಿಸದಿದ್ದಲ್ಲಿ ಇದೇ ತಿಂಗಳ 30 ರೊಳಗೆ ಮುಖ್ಯ ಮಂತ್ರಿಗಳ ಮನೆಗೆ ಸಾವಿರಾರು ಬಿಎಸ್‍ಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ 9-10 ಲಕ್ಷ ಎಕರೆ ಜಮೀನಿನಲ್ಲಿ ಪರಿಶಿಷ್ಠಜಾತಿ ಮತ್ತು ಪರಿಶಿಷ್ಠ ಪಂಗಡದವರು ಸಹಿತ ವಿವಿಧ ಸಮುದಾಯಗಳ ಜನ ಉಳಿಮೆ ಮಾಡುತ್ತಿದ್ದು ಈವರೆವಿಗೂ ಹಕ್ಕು ಪತ್ರಗಳನ್ನು ನೀಡಿಲ್ಲ ಈ ಮಧ್ಯೆ ಚಿಕ್ಕಮಗಳೂರು,ಮಂಗಳೂರು,ಕೊಡುಗು ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಮೀನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಮಾಜಿ ಮುಖ್ಯಮಂತ್ರಿಗಳ ಅಳಿಯೊಬ್ಬರು ಆರು ಸಾವಿರ ಎಕರೆ ಜಮೀನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಸರ್ಕಾರ ಬಡವರಿಗೆ ಒಂದು ರೀತಿಯ ಕಾನೂನು ಶ್ರೀಮಂತರಿಗೆ ಒಂದು ರೀತಿಯ ಕಾನೂನು ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ರಾಜ್ಯಾದ್ಯಂತ ಸರ್ಕಾರಿ ಜಮೀನುಗಳಲ್ಲಿ 9 ಲಕ್ಷ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಅವರನ್ನು 94 ಸಿಸಿ ಯೋಜನೆಯಡಿ ಅರ್ಜಿ ಹಾಕಿಕೊಂಡಿದ್ದಾರೆ ಅವರಿಗೆ ಹಕ್ಕುಪತ್ರ ನೀಡಿಲ್ಲ ಮಾಜಿ ಕಂದಾಯ ಸಚಿವ ಕಾಗೂಡು ತಿಮ್ಮಪ್ಪ ಅವರ ಅವಧಿಯಲ್ಲಿ 2 ಲಕ್ಷ ಜನರಿಗೆ ಹಕ್ಕುಪತ್ರ ನೀಡಿದ್ದಾರೆ ಇನ್ನೂ 8 ಲಕ್ಷ ಜನರಿಗೆ ಹಕ್ಕುಪತ್ರ ನೀಡಿಲ್ಲ ಎಂದ ಅವರು ರಾಜ್ಯಾದ್ಯಂತ 33 ಸಾವಿರ ಹಳ್ಳಿಗಳಲ್ಲಿ 11 ಸಾವಿರ ಹಳ್ಳಿಗಳಲ್ಲಿ ಎಸ್.ಸಿ/ಎಸ್.ಟಿ ಮತ್ತು ಅಲ್ಪಸಂಖ್ಯಾತರಿಗೆ ಸ್ಮಾಶನ ಸೌಲಭ್ಯವಿಲ್ಲ ಬದುಕುವಾಗ ಸೂಕ್ತ ರೀತಿಯ ಸೌಲಭ್ಯಗಳಿಲ್ಲ ಸತ್ತರು ಸಹ ಜಾಗ ಸಹ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರೇ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ರಾಜ್ಯದ ಗಡಿ ಪ್ರದೇಶದ ಜಿಲ್ಲೆಗಳನ್ನು ಅಭಿವೃಧ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕಾದ ಸರ್ಕಾರ ಮರಾಠಿಗರಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಲು ಹೊರಟಿರುವುದು ಕೇವಲ ರಾಜಕೀಯ ಪ್ರೇರಿತ ಎಂದು ಟೀಕಿಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ವಿಶೇಷವಾಗಿ ಮರಾಠಗರ ಮತ ಪಡೆಯಲು ಸರ್ಕಾರ ಪ್ರಾಧಿಕಾರ ಮಾಡಲು ಹೊರಟಿದೆ ಎಂದು ದೂರಿದ ಅವರು ವೀರಶೈವ ಲಿಂಗಾಯತ ಸಮುದಾಯ ಮುಖ್ಯಮಂತ್ರಿಗಳಿದ್ದಾರೆ ಪ್ರಭಾವಿ ಸಚಿವರಿದ್ದಾರೆ ಜೊತೆಗೆ ಅನೇಕ ಶಿಕ್ಷಣ ಸಂಸ್ಥೆಗಳಿದೆ ಆದರೂ ಮೀಸಲಾತಿ ಹೆಚ್ಚಳ ಮಾಡಲು ಹೊರಟಿರುವುದು ಹಾಸ್ಯಸ್ಪದವಾಗಿದೆ ಎಂದು ಲೇವಡಿ ಮಾಡಿದರು.
ಧ್ವನಿಯಿಲ್ಲದ ಸಂಸದರು: ರಾಜ್ಯದಲ್ಲಿ ನೆರೆ ಪರಿಹಾರ ಮತ್ತು ಜಿಎಸ್‍ಟಿ ಬಾಬತ್ತು ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆಯಲು ಮುಖ್ಯಮಂತ್ರಿಗಳು ಸಹಿತ ರಾಜ್ಯದ 26 ಸಂಸದರು ವಿಫಲರಾಗಿದ್ದಾರೆ. ಪ್ರಧಾನಮಂತ್ರಿ ಬಳಿ ರಾಜ್ಯದ ಪಾಲು ಕೇಳಲು ಸಂಸದರಿಗೆ ಧ್ವನಿ ಇಲ್ಲದಂತಾಗಿದೆ ಮುಂದಿನ ದಿನಗಳಲ್ಲಿ ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಅವರು ಮುಂಬರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಎಸ್‍ಪಿ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದರು.
ಸುಳ್ಳು ಹೇಳುವ ಪ್ರಧಾನಮಂತ್ರಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಕ್ಕೆ ಬಂದ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆಯನ್ನು ಈಡೇರಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಜಗತ್ತಿನಲ್ಲಿ ಯಾರಾದರೂ ಸುಳ್ಳು ಹೇಳುವ ಪ್ರಧಾನಮಂತ್ರಿ ಯಾರಾದರೂ ಇದ್ದರೇ ಅದು ಪ್ರಧಾನಮಂತ್ರಿ ನರೇಂದ್ರಮೋದಿ ಮಾತ್ರವೆಂದು ಟೀಕಿಸಿದ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ದೇಶದ ಅಭಿವೃಧ್ಧಿ ಅಸಾಧ್ಯವೆಂದ ಅವರು ಬೆಹನ್ ಮಾಯವತಿ ಅವರ ನೇತೃತ್ವದಲ್ಲಿ ಬಿಎಸ್‍ಪಿ ಪಕ್ಷ ಮುಂದಿನ ದಿನಗಳಲ್ಲಿ ಬಲಿಷ್ಠವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಎಸ್‍ಪಿ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ,ರಾಜ್ಯ ಕಾರ್ಯದರ್ಶಿ ಪಿವಿ ನಾಗಪ್ಪ,ಮುನಿಕೃಷ್ಣಯ್ಯ,ಬಿಎಸ್‍ಪಿ ಜಿಲ್ಲಾಧ್ಯಕ್ಷ ಅಪ್ಸರ್‍ಪಾಷ,ಜಿಲ್ಲಾ ಸಂಯೋಜಕ ಡಾ.ದೇವಪ್ಪ,ನಗರಸಭಾ ಸದಸ್ಯ ಮೌಲಾ, ಶಬ್ಬೀರ್, ಜಿಲ್ಲಾ ಬಿಎಸ್‍ಪಿ ಕಾರ್ಯದರ್ಶಿ ಮೂರ್ತಿ,ಶಿಡ್ಲಘಟ್ಟ ಬಿಎಸ್‍ಪಿ ಅಧ್ಯಕ್ಷ ನರೇಶ್‍ಬಾಬು,ಬಹುಜನ ಸ್ವಯಂಸೇವಕರ ಪಡೆಯ ಉಸ್ಮಾನ್,ಬಿವಿಎಫ್ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.