ಪ್ರತ್ಯೇಕ ಹಾಲು ಒಕೂಟಕ್ಕೆ ಅಧಿಕೃತ ಆದೇಶ

Team Udayavani, Dec 19, 2021, 1:44 PM IST

ಪ್ರತ್ಯೇಕ ಹಾಲು ಒಕೂಟಕ್ಕೆ ಅಧಿಕೃತ ಆದೇಶ

ಚಿಕ್ಕಬಳ್ಳಾಪುರ: ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಲು ಸಹಕಾರ ಇಲಾಖೆಗಳ ನಿಬಂಧಕರಿಗೆ ಸೂಚನೆ ನೀಡಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ಬಹುನಿರೀಕ್ಷಿತ ಬೇಡಿಕೆ ಈಡೇರಿದಂತಾಗಿದೆ.

ಕೋಚಿಮುಲ್‌ನಿಂದ ವಿಭಜನೆ ಆಗುವ ಒಕ್ಕೂಟಕ್ಕೆ ಆಸ್ತಿ ಮತ್ತು ಜವಾಬ್ದಾರಿ ವಿಭಜಿಸುವ ಸಲುವಾಗಿ ಕೂಡಲೇ ಸಮಿತಿ ರಚಿಸಿ, ಅದರಿಂದ ಎರಡೂ ಒಕ್ಕೂಟಕ್ಕೆ ಅಗತ್ಯವಿರುವ ಮೂಲ ಸೌಲಭ್ಯ, ಮಾರುಕಟ್ಟೆ ಒದಗಿಸಲು ಮೂರು ತಿಂಗಳ ಕಾಲಾವಕಾಶಒದಗಿಸಲಾಗಿದೆ. ಈ ವಿಭಜನೆ ಪ್ರಕ್ರಿಯೆಯನ್ನುಮುಂದಿನ ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ.

ಡೇರಿ ಹಾಲನ್ನು ಖರೀದಿಸಿ: ಮದರ್‌ಡೇರಿಯು ಕೆಎಂಎಫ್‌ನಿಂದ ಅನುಮೋದಿತ ದರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹಾಲನ್ನು ಸಂಗ್ರಹಿಸಿ ಸರ್ಕಾರದ ಕ್ಷೀರಭಾಗ್ಯಯೋಜನೆಗೆ ಅಗತ್ಯ ಹಾಲಿನ ಪುಡಿ ಉತ್ಪಾದಿಸಲು ಕ್ರಮ ಕೈಗೊಳ್ಳಬೇಕು. ಕೆಎಂಎಫ್‌ ಮದರ್‌ಡೇರಿ ಯಲಹಂಕದ ಮೂಲಕ ಹೊಸ ಒಕ್ಕೂಟದ ಆರಂಭಿಕ ವರ್ಷದಲ್ಲಿ 2019-20ಕ್ಕೂ ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಮಟ್ಟದಲ್ಲಿ ಅಂತರ ಡೇರಿ ಹಾಲನ್ನು ಖರೀದಿಸಿ ಪ್ರೋತ್ಸಾಹಿಸಲು ಮೂರು ತಿಂಗಳ ಒಳಗೆ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಲಾಗಿದೆ.

ಮಾರುಕಟ್ಟೆ ಪ್ರದೇಶ ಹಂಚಿಕೆ ಮಾಡಿ: ಅಲ್ಲದೆ, ಚಿಕ್ಕಬಳ್ಳಾಪುರ ಹಾಲಿನ ಪ್ಯಾಕಿಂಗ್‌ ಘಟಕಸ್ಥಾಪನೆಯಾಗುವವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಗ್ರಾಹಕರಿಗೆ ಹಾಲು ಮತ್ತು ಮೊಸರನ್ನು ವಿತರಕರ ದರದಲ್ಲಿ ಕೋಮುಲ್‌ ಮೂಲಕ ಸರಬರಾಜು ಮಾಡಲು (ಮುಂದಿನ 3 ತಿಂಗಳ ಒಳಗಾಗಿ) ಕ್ರಮ ಕೈಗೊಳ್ಳಬೇಕು, ಚಿಕ್ಕಬಳ್ಳಾಪುರ ಮೆಗಾ ಡೇರಿಯಲ್ಲಿಪ್ಯಾಕಿಂಗ್‌ ಘಟಕ ಸ್ಥಾಪನೆಯಾದ ನಂತರ ಕೋಲಾರಕ್ಕೆಬೆಂಗಳೂರು ಮಹಾನಗರದಲ್ಲಿ ಹಂಚಿಕೆಯಾಗಿರುವಮಾರುಕಟ್ಟೆ ಪ್ರದೇಶವನ್ನು ಚಿಕ್ಕಬಳ್ಳಾಪುರ ಒಕ್ಕೂಟಕ್ಕೂಹಂಚಿಕೆ ಮಾಡಲು 6 ತಿಂಗಳ ಒಳಗಾಗಿ ಕ್ರಮ ಕೈಗೊಳ್ಳಬೇಕು.

ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳ್ಳುವವರೆಗೆ ಕೋಲಾರ ಜಿಲ್ಲಾ ಹಾಲು ಒಕ್ಕೂಟವು ಚಿಕ್ಕಬಳ್ಳಾಪುರ ಒಕ್ಕೂಟದ ನೇರ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್‌ ಮಾಡುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಸಹಕಾರಇಲಾಖೆಯ ಜಂಟಿ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಸಿಎಂ ಐತಿಹಾಸಿಕ ತೀರ್ಮಾನ: ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲು ಆ.30ರಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಿ ಈ ಸಂಬಂಧ ಸಾಧ್ಯತಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿತ್ತು.

ಸರ್ಕಾರದ ಸೂಚನೆಯಂತೆ ಸಹಕಾರ ಸಂಘಗಳ ನಿಬಂಧಕರು ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಕೋಲಾರ ಜಿಲ್ಲೆಯ ಕೋಲಾರ, ಬಂಗಾರಪೇಟೆ, ಮುಳಬಾಗಿಲು, ಮಾಲೂರು ಮತ್ತು ಶ್ರೀನಿವಾಸಪುರ ಸಹಿತ 5 ತಾಲೂಕುಗಳ ವ್ಯಾಪ್ತಿಯಲ್ಲಿ 913 ಡೇರಿಗಳಿದ್ದು, ಜು.2021ರ ಅಂತ್ಯಕ್ಕೆ 5, 13, 905 ಕೇಜಿ ಹಾಲುಶೇಖರಣೆ ಮಾಡಲಾಗುತ್ತಿದೆ. ಹಾಗೆಯೇ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ ಮತ್ತು ಚಿಕ್ಕಬಳ್ಳಾಪುರ ಸಹಿತ 6 ತಾಲೂಕುಗಳಲ್ಲಿ 977 ಡೇರಿಗಳಿವೆ. ಜು.2021ರ ಅಂತ್ಯಕ್ಕೆ ದಿನವಹಿ 4.28 ಲಕ್ಷಕೇಜಿ ಹಾಲು ಶೇಖರಣೆ ಮಾಡಲಾಗುತ್ತಿದೆ.

ಎರಡೂ ಜಿಲ್ಲೆಗಳಿಂದ ಒಟ್ಟು 9,56,000 ಕೇಜಿ ಹಾಲು ಶೇಖರಣೆ ಆಗುತ್ತಿದೆ. ಈ ಪೈಕಿ ಸರಾಸರಿ3,50,000 ಲೀ. ಹಾಲು, 60,000 ಲೀ. ಮೊಸರು,4,00,000 ಲೀ. ಯುಎಚ್‌ಟಿ ಹಾಲು ಹಾಗೂ50,000 ಲೀ. ಹಾಲಿನಲ್ಲಿ ಕೆನೆ ಭರಿತ ಪುಡಿಯನ್ನುಮಾರಾಟ ಮಾಡಲಾಗುತ್ತಿದೆ. ಉಳಿದ 96,000 ಲೀ. ಹಾಲನ್ನು ಕೆನೆ ಹಾಲಿನ ಪುಡಿ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಜೊತೆಗೆ 23.09.2016 ರಂದುನಡೆದ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ2015-16ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿಕೋಚಿಮುಲ್‌ ವಿಭಜಿಸಿ ಪ್ರತ್ಯೇಕ ಹಾಲು ಒಕ್ಕೂಟಸ್ಥಾಪಿಸಲು ತೀರ್ಮಾನಿಸಲಾಗುತ್ತಿದೆ ಎಂದು ವರದಿ ಸಲ್ಲಿಸಿದ್ದಾರೆ.

ಎನ್‌ಡಿಡಿಬಿಯ ನಿವೃತ್ತ ಡಿಜಿಎಂ ಆರ್‌ವಿಎಂ ಮೋಹನ್‌ಕುಮಾರ್‌ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ವಿಭಜನೆಯಿಂದಾಗಿ ಕೋಲಾರ ಒಕ್ಕೂಟಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಬದಲಾಗಿ ಚಿಕ್ಕಬಳ್ಳಾಪುರ ಉದ್ದೇಶಿತ ಜಿಲ್ಲಾ ಹಾಲು ಒಕ್ಕೂಟವು ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ಅಭಿಪ್ರಾಯವನ್ನು ನೀಡಿದ್ದಾರೆ ಎಂದುಕರ್ನಾಟಕ ಸಹಕಾರ ಹಾಲು ಮಹಾಮಂಡಳಿಯ(ಕೆಎಂಎಫ್‌) ವ್ಯವಸ್ಥಾಪಕ ನಿರ್ದೇಶಕರು ವರದಿಸಲ್ಲಿಸಿರುವುದನ್ನು ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವ ಸಲುವಾಗಿ ರಾಜ್ಯ ಸರ್ಕಾರ ಸ್ಪಷ್ಟ ಅದೇಶ ಹೊರಡಿಸುವ ಮೂಲಕ ಜಿಲ್ಲೆಯ ಜನರ ಬಹು ನಿರೀಕ್ಷಿತಬೇಡಿಕೆ ಈಡೇರಿಸಿದೆ. ಅದಕ್ಕಾಗಿ ಜಿಲ್ಲೆಯ ಜನರು, ಹಾಲು ಉತ್ಪಾದಕರ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌,ವಿಶೇಷವಾಗಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಶ್ರಮಿಸಿದ ಸಚಿವ ಡಾ.ಕೆ.ಸುಧಾಕರ್‌ಗೆ ಅಭಿನಂದಿಸುತ್ತೇನೆ. ಕೆ.ವಿ.ನಾಗರಾಜ್‌, ಮಾಜಿ ಅಧ್ಯಕ್ಷ, ಕೋಚಿಮುಲ್‌

ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಲಿಸಂತೋಷ. ಆದರೆ, ಮದರ್‌ಡೇರಿಯಲ್ಲಿರುವ 4 ವಿಧಾನಸಭಾಕ್ಷೇತ್ರಗಳ ಮಾರ್ಕೆಂಟಿಂಗ್‌ ನಮ್ಮಒಕ್ಕೂಟಕ್ಕೆ ಸೇರಿಸಬೇಕು. ಬೆಂಗಳೂರಿನ11 ವಾರ್ಡ್‌ಗಳ ಮಾರ್ಕೆಟ್‌ ವ್ಯವಸ್ಥೆ ಕಲ್ಪಿಸಿದರೆ ಒಕ್ಕೂಟ, ಹಾಲು ಉತ್ಪಾದಕರುತೊಂದರೆ ಅನುಭವಿಸುತ್ತಾರೆ. ಭರಣಿ ವೆಂಕಟೇಶ್‌, ನಿರ್ದೇಶಕ, ಕೋಚಿಮುಲ್‌.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.